Home namma chikmagalur ಸೆ. 3 ರಿಂದ ಜಿಲ್ಲೆಯಲ್ಲಿ ಸೀರತ್ ಅಭಿಯಾನ
namma chikmagalurchikamagalurHomeLatest News

ಸೆ. 3 ರಿಂದ ಜಿಲ್ಲೆಯಲ್ಲಿ ಸೀರತ್ ಅಭಿಯಾನ

Share
Share

ಚಿಕ್ಕಮಗಳೂರು: ನ್ಯಾಯದ ಹರಿಕಾರ ಪ್ರವಾದಿ ಮುಹಮ್ಮದ್ ಅವರ ಸಾರ್ವಕಾಳಿಕ ಬೋಧನೆಗಳನ್ನು ಜನತೆಗೆ ತಿಳಿಯಪಡಿಸಲು ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ಸೆಪ್ಟೆಂಬರ್ ೩ ರಿಂದ ೧೪ ರವರೆಗೆ ಸೀರತ್ ಅಭಿಯಾನ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಜಮಾಅತೆ ಇಸ್ಲಾಮೀ ಹಿಂದ್ ಜಿಲ್ಲಾ ಸಂಚಾಲಕ ರಿಜ್ವಾನ್ ಖಾಲಿದ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರವಾದಿ ಮುಹಮ್ಮದ್‌ರ ನ್ಯಾಯ ಮತ್ತು ಮಾನವೀಯತೆಯ ಸಂದೇಶಗಳನ್ನು ನಾಡಿನ ಜನತೆಗೆ ತಲುಪಿಸುವುದು ಮತ್ತು ಪ್ರವಾದಿಯವರ ಬಗೆಗಿನ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು ಹಾಗೂ ವಿವಿಧ ಧರ್ಮಿಯರ ನಡುವಿನ ಪರಸ್ಪರ ಸಂಬಂಧಗಳನ್ನು ಬಲಪಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದು ತಿಳಿಸಿದರು.

ಈ ಅಭಿಯಾನದ ಪ್ರಯುಕ್ತ ಶಾಂತಿ ಪ್ರಕಾಶನ ಪ್ರಕಟಿಸಿರುವ ಪ್ರವಾದಿಯವರ ಬದುಕು ಮತ್ತು ಸಂದೇಶಗಳ ಬಗ್ಗೆ ಬೆಳಕು ಚೆಲ್ಲುವ ಎರಡು ಹೊಸ ಪುಸ್ತಕಗಳನ್ನು ರಾಜ್ಯಾದ್ಯಂತ ಬಿಡುಗಡೆಗೊಳಿಸಲಾಗುವುದು. ಈ ಅಭಿಯಾನದ ಭಾಗವಾಗಿ ರಾಜ್ಯಾದ್ಯಂತ ವಿವಿಧ ಸಮಾಜ ಸೇವಾ ಚಟುವಟಿಕೆಗಳು, ಸಂವಾದ ವಿಚಾರಗೋಷ್ಠಿ, ಸಾರ್ವಜನಿಕ ಸಭೆಗಳು, ಪ್ರಬಂಧ ಸ್ಪರ್ಧೆ ಹಲವು ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಸಮಾಜ ಸೇವೆ, ವೈಯಕ್ತಿಕ ಭೇಟಿ, ಆಸ್ಪತ್ರೆಗಳಿಗೆ ತೆರಳಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಗುವುದು. ಜಿಲ್ಲೆಯ ವಿವಿಧ ಕಡೆಗಳಲ್ಲಿ ಸೀರತ್ ಅಭಿಯಾನ ನಡೆಯಲಿದೆ. ಮುಸ್ಲಿಂ ಪ್ರಮುಖರೊಂದಿಗೆ ಸಂವಾದ, ಅನ್ಯ ಧರ್ಮಿಯರ ಪ್ರಮುಖರೊಂದಿಗೆ ಸಂವಾದ, ಜನಸಾಮಾನ್ಯ ಹಾಗೂ ಪ್ರಮುಖರೊಂದಿಗೆ ಭೇಟಿ ಮತ್ತು ಚರ್ಚೆ, ಸೀರತ್ ಪ್ರವಚನ ನಡೆಯಲಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಸ್ಥಾನೀಯ ಅಧ್ಯಕ್ಷ ಡಾ.ಮುಹಮ್ಮದ್ ಸಾಲಿಹ್, ಮುಖಂಡರಾದ ಉಸ್ರತ್ ರಹೀಂ, ಇಕ್ಬಾಲ್, ನಯಿಮ್ ಅಹಮದ್ ಉಪಸ್ಥಿತರಿದ್ದರು.

Seerat campaign in the district from Sept. 3

Share

Leave a comment

Leave a Reply

Your email address will not be published. Required fields are marked *

Don't Miss

ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯ

ಚಿಕ್ಕಮಗಳೂರು : ಇತಿಹಾಸ ಪ್ರಸಿದ್ಧ ಅಂತರಘಟ್ಟೆ ಜಾತ್ರಾ ಮಹೋತ್ಸವದಲ್ಲಿ ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯವಾಗಿದೆ. ರೇಸಿಗೆ ಬಿದ್ದ ಎತ್ತಿನಗಾಡಿಗಳ ಪೈಪೋಟಿ ಮಧ್ಯೆ ಎತ್ತಿನ ಗಾಡಿ ತೇರಿಗೆ ಡಿಕ್ಕಿಯೊಡೆದಿದೆ....

ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಅಮಾನತು

ಚಿಕ್ಕಮಗಳೂರು: ಆಸ್ತಿ ಗುರುತಿನ ಸ್ವತ್ತಿನ ಚಕ್ಕುಬಂಧಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿರುವ ಹಿನ್ನೆಲೆಯಲ್ಲಿ ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೇವೆಯಿಂದ ಅಮಾನತ್ತುಗೊಳಿಸಿ ಬುಧವಾರ ಆದೇಶಿಸಿದ್ದಾರೆ. ಪಟ್ಟಣದ...

Related Articles

ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಷನ್ ಸ್ಥಾಪನೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಶನ್ ಸ್ಥಾಪಿಸಿದ್ದು, ಮುಂದಿನ ದಿನಗಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ...

ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ

ಚಿಕ್ಕಮಗಳೂರು: ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ ಸಾಧನೆ ಮಾಡಿರುವ ಶಾಸಕರು ಉಳಿದಿರುವ...

ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನ ವಶ

ಚಿಕ್ಕಮಗಳೂರು : ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಕೆಎಂ ರಸ್ತೆಯ...

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ...