Home Latest News ಚಿಕ್ಕಮಗಳೂರು ಎಫ್ ವಲಯ ಮಟ್ಟದ ಪ್ರೌಢ ಶಾಲೆಗಳ ಕ್ರೀಡಾಕೂಟ
Latest NewschikamagalurHomenamma chikmagalur

ಚಿಕ್ಕಮಗಳೂರು ಎಫ್ ವಲಯ ಮಟ್ಟದ ಪ್ರೌಢ ಶಾಲೆಗಳ ಕ್ರೀಡಾಕೂಟ

Share
Share

ಚಿಕ್ಕಮಗಳೂರು: ಕ್ರೀಡಾ ಕೂಟಗಳು ಜೀವನದ ಉತ್ಸಾಹವನ್ನು ಹೆಚ್ಚಿಸುವ ಸಾಧನ, ಸೋಲು, ಗೆಲುವಿನ ಮೆಟ್ಟಿಲಾಗಬೇಕು. ಕ್ರೀಡಾ ಮನೋಭಾವದಿಂದ ಪ್ರತಿಭೆಯನ್ನು ಅನಾವರಣಗೊಳಿಸಬೇಕು ಎಂದು ಹೊಸದುರ್ಗದ ಶ್ರೀ ಪುರುಷೋತ್ತಮಾನಂದ ಸ್ವಾಮೀಜಿ, ತಿಳಿಸಿದರು.

ಅವರು ಇಂದು ನಗರದ ನೇತಾಜಿ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಜಿ.ಪಂ, ತಾ.ಪಂ, ಶಾಲಾ ಶಿಕ್ಷಣ ಇಲಾಖೆ ಉಪವೀರ ಜಗದ್ಗುರು ವಿದ್ಯಾಸಂಸ್ಥೆ ಹಾಗೂ ಲಕ್ಯಾ ಗ್ರಾಮದ ಶ್ರೀ ಸಿದ್ದೇಶ್ವರ ಪ್ರೌಢಶಾಲೆ ಇವರುಗಳ ಸಹಯೋಗದೊಂದಿಗೆ ಆಯೋಜಿಸಿದ್ದ ಚಿಕ್ಕಮಗಳೂರು ಎಫ್ ವಲಯ ಮಟ್ಟದ ಪ್ರೌಢ ಶಾಲೆಗಳ ಕ್ರೀಡಾಕೂಟ-೨೦೨೫-೨೬ರ ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು.

ಕ್ರೀಡೆಗಳು ಜೀವನೋತ್ಸಾಹದ ಜೊತೆಗೆ ದೈಹಿಕ, ಮಾನಸಿಕ, ಭೌದ್ಧಿಕ ಬೆಳವಣಿಗೆಗೆ ಹೆಚ್ಚು ಸಾಮರ್ಥ್ಯ ಪಡೆಯಲು ಸಾಧ್ಯವಾಗುತ್ತದೆ. ಸೋಲು-ಗೆಲುವು ಸಹಜ, ಪ್ರತಿಯೊಬ್ಬರೂ ಕ್ರೀಡಾ ಮನೋಭಾವದಿಂದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ನಿಮ್ಮಲ್ಲಿರುವ ಪ್ರತಿಭೆ ಹೊರಬರಲು ಸಾಧ್ಯ ಎಂದರು

ತೀರ್ಪುಗಾರರು ತಾರತಮ್ಯ ಇಲ್ಲದಂತೆ ನ್ಯಾಯಸಮ್ಮತವಾದ ನಿರ್ಣಯ ಕೈಗೊಳ್ಳಲಿದ್ದಾರೆ. ಜೀವನದಲ್ಲಿ ಸಾಧನೆ ಮಾಡಬೇಕಾದರೆ ದೈಹಿಕವಾಗಿ, ಮಾನಸಿಕವಾಗಿ ಉತ್ತಮ ಸಾಮರ್ಥ್ಯ ಪಡೆಯಲು ಕ್ರೀಡೆಗಳಲ್ಲಿ ಭಾಗವಹಿಸಿ ಜೀವನೋತ್ಸಾಹ ಹೆಚ್ಚಿಸಿಕೊಳ್ಳಿ ಎಂದು ಸಾಂಕೇತಿಕವಾಗಿ ಹೇಳಿದರು.

ಕ್ರೀಡಾಕೂಟವನ್ನು ಉದ್ಘಾಟಿಸಿದ ಶಾಸಕ ಹೆಚ್.ಡಿ. ತಮ್ಮಯ್ಯ ಮಾತನಾಡಿ, ಗ್ರಾಮೀಣ ಕ್ರೀಡೆಗಳು ದೇಶದ ಬಹುದೊಡ್ಡ ಆಸ್ತಿ. ವಿದ್ಯಾರ್ಥಿಗಳು ಹೆಚ್ಚು ಗ್ರಾಮೀಣ ಮಟ್ಟದ ಕ್ರೀಡೆಗಳಲ್ಲಿ ಸ್ಪರ್ಧಿಸುವ ಮೂಲಕ ಪೂರ್ವಿಕರ ಕ್ರೀಡಾಕೂಟವನ್ನು ಉಳಿಸಿ ಬೆಳೆಸ ಬೇಕು ಎಂದರು.

ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿಂದ ನಡೆಯುತ್ತಿರುವ ಕ್ರೀಡಾಕೂಟಗಳು ವಿದ್ಯಾರ್ಥಿಗಳಿಗೆ ಬಹಳಷ್ಟು ಉಪಯೋಗಿಯಾಗಿದೆ ಎಂದ ಅವರು, ಗ್ರಾಮೀಣ ಭಾಗದ ಕ್ರೀಡೆಗಳು ನಶಿಸುತ್ತಿರುವ ಕಾಲದಲ್ಲಿ ವಿದ್ಯಾರ್ಥಿಗಳು ಇಂದಿಗೂ ದೇಹಕ್ಕೆ ಶಕ್ತಿ ತುಂಬುವಂಥ ಕಬ್ಬಡ್ಡಿ ಕ್ರೀಡೆ ಬೆಳೆಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಕ್ರೀಡಾಕೂಟಕ್ಕೆ ಸರ್ಕಾರದ ಜೊತೆಗೆ ಸಾರ್ವಜನಿಕರು, ದಾನಿಗಳು ಹಾಗೂ ಸ್ಥಳೀಯ ಸಹಭಾಗಿತ್ವದಲ್ಲಿ ನಡೆಯುತ್ತಿರುವುದು ಒಳ್ಳೆಯ ಬೆಳವಣಿಗೆ. ಶಿಕ್ಷಕರು ಕೂಡ ಮಕ್ಕಳಲ್ಲಿರುವ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಇದರಿಂದ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ವಿದ್ಯಾರ್ಥಿಗಳು ಮುಂಚೂಣಿಗೆ ಬರಲು ಸಾಧ್ಯ ಎಂದು ಹೇಳಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರೇಖಾ ಹುಲಿಯಪ್ಪ ಮಾತನಾಡಿ, ಕ್ರೀಡೆಗಳು ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿ. ಸ್ಪರ್ಧೆಗಳಲ್ಲಿ ಪ್ರಯತ್ನಗಳಿರಬೇಕು. ಗೆದ್ದರು ಖುಷಿಯಿರಲಿ, ಸೋತರೇ ಮತ್ತೊಮ್ಮೆ ಪ್ರಯ ತ್ನಿಸುವ ಛಲವು ಇದ್ದಲ್ಲಿ, ಭವಿಷ್ಯದಲ್ಲಿ ಎತ್ತರ ಮಟ್ಟಕ್ಕೆ ಕೊಂಡೊಯ್ಯಲು ಸಾಧ್ಯ ಎಂದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಪ್ಪ, ಸಂಯೋಜಕ ಕೃಷ್ಣಮೂರ್ತಿ ಅರಸ್, ಲಕ್ಯಾ ಗ್ರಾ.ಪಂ. ಅಧ್ಯಕ್ಷ ಹನೀಫ್, ಉಪಾಧ್ಯಕ್ಷ ಕಾಂತರಾಜ್, ಹಾಗೂ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು, ವಿವಿಧ ಇಲಾಖೆ ಶಿಕ್ಷಕರು ಉಪಸ್ಥಿತರಿದ್ದರು.ಮೊದಲಿಗೆ ಶಾಲೆಯ ಮುಖ್ಯೋಪಾಧ್ಯಾಯ ನರಸಿಂಹಮೂರ್ತಿ ಸ್ವಾಗತಿಸಿ, ಚಂದ್ರಶೇಖರ್ ನಿರೂಪಿಸಿ, ಕೊನೆಯಲ್ಲಿ ವಂದಿಸಿದರು.

Chikkamagaluru F Zone Level High School Sports Meet

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು ತಾಲೂಕು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೆ ಆಗ್ರಹ

ಚಿಕ್ಕಮಗಳೂರು: ಈ ಬಾರಿಯ ಮುಂಗಾರು ಅವಧಿಯಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಕೃಷಿ, ತೋಟಗಾರಿಕೆ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗುವ ಆತಂಕವಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು...

ಕಡೂರು ಬಸ್ ನಿಲ್ದಾಣದಲ್ಲಿ 50 ಗ್ರಾಂ ತೂಕದ ಚಿನ್ನದ ಸರ ಕಳ್ಳತನ

ಕಡೂರು: ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಕಳ್ಳರ ಗ್ಯಾಂಗ್ ಒಂದು, ಬಸ್ ಹತ್ತುವ ವೇಳೆ ಮಹಿಳೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಬರೋಬ್ಬರಿ 50 ಗ್ರಾಂ ತೂಕದ ಚಿನ್ನದ ಸರವನ್ನು ಕ್ಷಣಾರ್ಧದಲ್ಲಿ ಎಗರಿಸಿ...

Related Articles

ಕೋಟ್ಯಂತರ ರೂಪಾಯಿ ವಂಚಿಸಿದ ನಕಲಿ ಲೇಡಿ ಪಿಎಸ್‌ಐ ಬಂಧನ

ಚಿಕ್ಕಮಗಳೂರು: ತಾನು ಬೆಂಗಳೂರಿನ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಎಂದು ನಂಬಿಸಿ, ಚಿನ್ನ, ಹಣ, ಮೊಬೈಲ್ ಹಾಗೂ ಕಾರು...

ನಲಪಾಡ್ ಹೇಳಿಕೆ ಖಂಡಿಸಿ ಜೆಡಿಎಸ್ ಅಲ್ಪಸಂಖ್ಯಾತ ಘಟಕ ಆಕ್ರೋಶ

ಚಿಕ್ಕಮಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯ ಯುವ ಘಟಕದ...

ಮಳಲೂರು ಏತ ನೀರಾವರಿ ಯೋಜನೆ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಅನುಷ್ಠಾನ ಮತ್ತು ಅರಸನ ನಾಲೆ ಪುನಶ್ಚೇತನ ಯೋಜನೆಗಳ ಕಾಮಗಾರಿಗಳಿಗೆ ಉಂಟಾಗಿರುವ...

2ಬಿ ಮೀಸಲಾತಿ ಮರುಸ್ಥಾಪನೆಗೆ ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಚಿಕ್ಕಮಗಳೂರು: ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತಿದ್ದ ಶೇ.4ರಷ್ಟು 2ಬಿ ಮೀಸಲಾತಿಯನ್ನು ಮರುಸ್ಥಾಪಿಸಲು ರಾಜ್ಯ ಸರ್ಕಾರ ಕೂಡಲೇ...