Home namma chikmagalur ಆನೆಗಳ ಚಲನವಲನ ಡ್ರೋನ್‌ನಿಂದ ಪತ್ತೆಹಚ್ಚಲು ರೈತ ಸಂಘ ಮನವಿ
namma chikmagalurchikamagalurHomeLatest News

ಆನೆಗಳ ಚಲನವಲನ ಡ್ರೋನ್‌ನಿಂದ ಪತ್ತೆಹಚ್ಚಲು ರೈತ ಸಂಘ ಮನವಿ

Share
Share

ಶೃಂಗೇರಿ: ‘ತಾಲ್ಲೂಕಿನ ಸುತ್ತಮುತ್ತ ಆನೆ, ಕಾಡುಕೋಣ ಮತ್ತು ಇನ್ನಿತರೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗುತ್ತಿದ್ದು, ಕೂಡಲೇ ಅರಣ್ಯ ಇಲಾಖೆಯವರು ಅವುಗಳನ್ನು  ನಿಯಂತ್ರಿಸಲು ಕ್ರಮ ತೆಗೆದುಕೊಳ್ಳಬೇಕು’ ಎಂದು ತಾಲ್ಲೂಕು ರೈತ ಸಂಘದ ಅಧ್ಯಕ್ಷ ಕಾನೋಳ್ಳಿ ಚಂದ್ರಶೇಖರ್ ಹೇಳಿದರು.

ಶೃಂಗೇರಿ ತಾಲ್ಲೂಕಿನಲ್ಲಿ ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ತಾಲ್ಲೂಕು ರೈತ ಸಂಘದವರು ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.

‘ಕಾಡಾನೆಗಳು ಬಾಳೆ, ಅಡಿಕೆ, ಭತ್ತದ ಗದ್ದೆಗಳಿಗೆ ನುಗ್ಗಿ ಬೆಳೆಗೆ ಹಾನಿ ಉಂಟು ಮಾಡುತ್ತಿದ್ದು, ಇದರಿಂದ ರೈತರಿಗೆ ತೀವ್ರ ಸಮಸ್ಯೆಯಾಗಿದೆ. ಕಾಡಾನೆಗಳ ಹಾವಳಿಯಿಂದ ಕಾರ್ಮಿಕರು, ರೈತರು ಕೃಷಿ ಜಮೀನುಗಳಿಗೆ ಓಡಾಡಲು ಕಷ್ಟ ಪಡುವಂತಾಗಿದೆ. ಆದ್ದರಿಂದ ಆನೆಗಳ ಚಲನ–ವಲನಗಳನ್ನು ಡ್ರೋನ್ ಮೂಲಕ ಪತ್ತೆಹಚ್ಚಿ ಸಾರ್ವಜನಿಕರಿಗೆ ಧ್ವನಿ ವರ್ಧಕಗಳ ಮೂಲಕ ತಿಳಿಸಬೇಕು’ ಎಂದರು.

ರೈತ ಸಂಘದ ಕೆಲವಳ್ಳಿ ಗುಂಡಪ್ಪ ಮಾತನಾಡಿ, ‘ಆನೆಗಳಿಂದ ರೈತರಿಗೆ ತೊಂದರೆಯಾದರೆ, ಅರಣ್ಯ ಇಲಾಖೆಯೇ ನೇರ ಹೊಣೆ. ಇತ್ತೀಚಿಗೆ ಕಾಡುಕೋಣಗಳಿಂದಲೂ ಬೆಳೆಗಳಿಗೆ ಹಾನಿ ಉಂಟಾಗುತ್ತಿದ್ದು, ರೈತರು ಬೇಸತ್ತಿದ್ದಾರೆ. ಕಾಡುಕೋಣಗಳ ಹಾವಳಿ ತಡೆಗಟ್ಟಲು ರೈತರು ಮಾಡುವ ಬೇಲಿಗಳಿಗೆ ಸಹಾಯಧನ ನೀಡಬೇಕು. ಇವುಗಳನ್ನು ನಿಯಂತ್ರಿಸುವುದರ ಜೊತೆಗೆ ರೈತರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದರು.

‘18 ದಿನಗಳ ಹಿಂದೆ ಎರಡು ಆನೆಗಳು ತಾಲ್ಲೂಕಿನಲ್ಲಿ ಕಾಣಿಸಿದ್ದವು. ಅವುಗಳನ್ನು ಕಾಡಿಗೆ ಓಡಿಸಲಾಗಿದೆ. 5 ದಿನಗಳಿಂದ ಒಂದು ಪುಂಡಾನೆಯು ಅಡ್ಡಗದ್ದೆ, ಕಾವಡಿ, ಚಿತ್ರವಳ್ಳಿ, ಕೆಳಕೊಪ್ಪ, ಹಿಂಬ್ರವಳ್ಳಿ, ಹೊಳೆಕೊಪ್ಪ ಭಾಗದಲ್ಲಿ ಕಾಣಿಸಿಗೊಂಡಿದ್ದರಿಂದ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಆ ಭಾಗದಲ್ಲಿ ತೋಟ ಮತ್ತು ಗದ್ದೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರನ್ನು ಮನೆಗೆ ಕಳಿಸಲಾಗಿದೆ.

ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಆನೆ ಕಾರ್ಯ ಪಡೆಯವರು ಆನೆ ಸಂಚಾರದ ಚಲನವಲನದ ಬಗ್ಗೆ ಗಮನ ಹರಿಸಿದ್ದಾರೆ. ಆನೆ ಸಂಚರಿಸುವ ಪ್ರದೇಶಗಳ ಶಾಲೆಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ನೀಡಲಾಗಿದೆ’ ಎಂದು ವಲಯ ಅರಣ್ಯಾಧಿಕಾರಿ ಮಧುಕರ್ ಹೇಳಿದರು.

ರೈತ ಸಂಘ ಬಂಡ್ಲಪುರ ಶ್ರೀಧರ್ ರಾವ್, ಉಳುವಳ್ಳಿ ಪೂರ್ಣೇಶ್, ಚೆನ್ನಕೇಶವ ಮೆಣಸೆ, ಅನಂತಯ್ಯ, ಗಿಣಿಕಲ್ ಚಂದ್ರಶೇಖರ್, ಸತೀಶ್ ಮೀಗಾ ಭಾಗವಹಿಸಿದ್ದರು.

Farmers’ association appeals to track elephant movements using drones

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...