Home Latest News ಜನಸಂಖ್ಯೆ ಆಧಾರದಲ್ಲಿ ಲೋಕಸಭಾ ಕ್ಷೇತ್ರಗಳ ಮರು ವಿಂಗಡಣೆ ಮಾಡಬಾರದು
Latest NewschikamagalurHomenamma chikmagalur

ಜನಸಂಖ್ಯೆ ಆಧಾರದಲ್ಲಿ ಲೋಕಸಭಾ ಕ್ಷೇತ್ರಗಳ ಮರು ವಿಂಗಡಣೆ ಮಾಡಬಾರದು

Share
Share

ಚಿಕ್ಕಮಗಳೂರು:  ಲೋಕಸಭಾ ಕ್ಷೇತ್ರಗಳ ಮರು ವಿಂಗಡಣೆಯನ್ನು ಜನಸಂಖ್ಯೆ ಆಧಾರದಲ್ಲಿ ಮಾಡಬಾರದು. ಅದು ಭೌಗೋಳಿಕ ಆಧಾರದಲ್ಲಿ ಮಾಡಿದರೆ ಮಾತ್ರ ದಕ್ಷಿಣ ರಾಜ್ಯಗಳಿಗೆ ನ್ಯಾಯ ಸಿಗಲಿದೆ ಎಂದು ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಪ್ರತಿಪಾದಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಲೋಕಸಭೆಯಲ್ಲಿ ಸದ್ಯಕ್ಕೆ ೫೪೩ ಲೋಕಸಭಾ ಕ್ಷೇತ್ರಗಳಿವೆ. ಮುಂದೆ ಕ್ಷೇತ್ರ ಮರುವಿಂಗಡಣೆಯಾದಲ್ಲಿ ೮೪೮ ಲೋಕಸಭಾ ಕ್ಷೇತ್ರಗಳಾಗಲಿವೆ. ಜನಸಂಖ್ಯೆ ಆಧಾರದಲ್ಲಿ ಪುನರ್ ವಿಂಗಡಣೆ ಮಾಡಿದರೆ ಉತ್ತರ ಭಾರತಕ್ಕೆ ಸರಿ ಸುಮಾರು ೫೫೦ ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳು ಲಭಿಸಲಿವೆ. ದಕ್ಷಿಣ ಭಾರತದ ರಾಜ್ಯಗಳು ಕನಿಷ್ಠ ೪೪೦ ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಾಗುತ್ತದೆ. ಹೀಗಾದಲ್ಲಿ ಪ್ರತಿ ಬಾರಿಯೂ ಉತ್ತರ ಭಾರತದವರೇ ಬಹುಮತ ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ. ಇದರಿಂದ ದಕ್ಷಿಣ ಭಾರತದ ಕಡೆಗಣನೆ ಆಗುವುದು ನಿಶ್ಚಿತ ಎಂದು ಹೇಳಿದರು.

ದಕ್ಷಿಣ ಭಾರತದ ಎಲ್ಲ ತೆರಿಗೆಗಳು ಈಗಾಗಲೇ ಉತ್ತರ ಭಾರತದ ಪಾಲಾಗುತ್ತಿದೆ. ಕರ್ನಾಟಕ ರಾಜ್ಯಕ್ಕೆ ಶೇ.೧೩ ರಷ್ಟು ಜಿಎಸ್‌ಟಿ ಪಾಲು ನೀಡಲಾಗುತ್ತಿದೆ. ರಾಜ್ಯದಿಂದ ೫ ಲಕ್ಷ ಕೋಟಿ ರೂ. ಜಿಎಸ್‌ಟಿ ಕೇಂದ್ರಕ್ಕೆ ಹೋಗುತ್ತದೆ. ಅದರಲ್ಲಿ ನಮಗೆ ಸಿಗುತ್ತಿರುವುದು ಕೇವಲ ೪೦ ಸಾವಿರ ಕೋಟಿ ರೂ. ಮಾತ್ರ ಎಂದು ತಿಳಿಸಿದರು.

ದಕ್ಷಿಣ ಭಾರತದ ತೆರಿಗೆ ಪಾಲು ಉತ್ತರಕ್ಕೆ ಹೋದಲ್ಲಿ ದಕ್ಷಿಣ ರಾಜ್ಯಗಳು ದಿವಾಳಿಯಾಗುತ್ತವೆ. ಉದ್ಯೋಗ ಮತ್ತಿತರೆ ಮೂಲಸೌಕರ್ಯಗಳ ಅಭಿವೃದ್ಧಿ ಯಾವುದೂ ಕೂಡ ನಡೆಯುವುದಿಲ್ಲ. ಉತ್ತರ ಭಾರತದ ಪ್ರಬಲ ರಾಜಕೀಯ ಪಕ್ಷಗಳು ಅಧಿಕಾರಕ್ಕೆ ಬಂದರೆ ಆ ಭಾಗದ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ ವಿನಾಃ ದಕ್ಷಣ ರಾಜ್ಯಗಳೂ ಅವಗಣನೆಗೆ ಒಳಗಾಗುವುದು ಖಚಿತ. ಹೀಗಾಗಿ ಯಾವುದೇ ಕಾರಣಕ್ಕೂ ಜನಸಂಖ್ಯೆ ಆಧಾರದಲ್ಲಿ ಕ್ಷೇತ್ರ ಮರುವಿಂಗಡಣೆ ಮಾಡಬಾರದು. ಭೌಗೋಳಿಕ ಆಧಾರದಲ್ಲಿಯೇ ಕ್ಷೇತ್ರ ಮರುವಿಂಗಡಣೆ ಮಾಡಬೇಕು ಎಂಬುದು ನಮ್ಮ ಆಗ್ರಹವಾಗಿದೆ ಎಂದರು.

ಈ ಬಗ್ಗೆ ರಾಜ್ಯದ ಎಲ್ಲ ರಾಜಕೀಯ ಪಕ್ಷಗಳು ಪಕ್ಷಾತೀತವಾಗಿ ದನಿ ಎತ್ತಬೇಕು. ದಕ್ಷಿಣ ಭಾರತದಲ್ಲಿ ಈಗಿರುವ ಒಂದು ಕ್ಷೇತ್ರಗಳು ಕಡಿಮೆಯಾಗಬಾರದು. ಚಿಕ್ಕಮಗಳೂರು ಪ್ರತ್ಯೇಕ ಲೋಕಸಭಾ ಕ್ಷೇತ್ರವಾಗಬೇಕು ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಹುಣಸೇಮಕ್ಕಿ ಲಕ್ಷ್ಮಣ್, ಉಮೇಶ್ ಉಪಸ್ಥಿತರಿದ್ದರು.

Lok Sabha constituencies should not be redistributed on the basis of population.

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...