Home namma chikmagalur ಪ್ರವಾಸಿಗರು ಗಿರಿಭಾಗದಲ್ಲಿ ಪ್ರವಾಸವನ್ನು ಮುಂದೂಡಲು ಜಿಲ್ಲಾಡಳಿತ ಮನವಿ
namma chikmagalurchikamagalurHomeLatest News

ಪ್ರವಾಸಿಗರು ಗಿರಿಭಾಗದಲ್ಲಿ ಪ್ರವಾಸವನ್ನು ಮುಂದೂಡಲು ಜಿಲ್ಲಾಡಳಿತ ಮನವಿ

Share
Share

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಅತಿಯಾದ ಮಳೆಯಾಗಿರುವ ಕಾರಣ ಹೆಚ್ಚಿನ ಭೂಕುಸಿತ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಜಿಲ್ಲಾ ಪೊಲೀಸರು ಕೆಲವು ಸಲಹೆಗಳನ್ನು ನೀಡಿದ್ದಾರೆ.

ಈ ಕುರಿತು ಪೊಲೀಸರು ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ಮಾಹಿತಿ ನೀಡಿದ್ದಾರೆ. ಈ ಪ್ರಕಟಣೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅತಿಯಾದ ಮಳೆಯಾಗಿರುವ ಕಾರಣ ಭೂ ಕುಸಿತ ಉಂಟಾಗುತ್ತಿದ್ದು, ಇನ್ನೂ ಹೆಚ್ಚಿನ ಭೂ ಕುಸಿತ ಉಂಟಾಗುವ ಸಾಧ್ಯತೆ ಇರುವುದರಿಂದ ಪ್ರಮಖ ಪುವಾಸಿ ತಾಣಗಳಾದ ಮುಳ್ಳಯ್ಯನಗಿರಿ ಹಾಗೂ ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗ ಐಡಿ ಪೀಠಕ್ಕೆ ಹೋಗುವ ಮಾರ್ಗದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಕುರಿತು ಎಂಬ ವಿಷಯವನ್ನು ಒಳಗೊಂಡಿದೆ.

ಪತ್ರದ ವಿವರಗಳು: ಚಿಕ್ಕಮಗಳೂರು ಜಿಲ್ಲೆಯು ಪರ್ವತ ಶ್ರೇಣಿಯ ಪ್ರದೇಶವಾಗಿದ್ದು, ಪಶ್ಚಿಮ ಘಟ್ಟದ ಒಂದು ಭಾಗವಾಗಿರುತ್ತದೆ. ಜಿಲ್ಲೆಯ ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗ ಐಡಿಪೀಠ ಮತ್ತು ಮುಳ್ಳಯ್ಯನಗಿರಿ ಪ್ರದೇಶವು ಪ್ರಮುಖ ಆಕರ್ಷಿಯ ಗುಡ್ಡಗಾಡಿನ ಸ್ಥಳಗಳಾಗಿರುತ್ತವೆ.

ಪ್ರಸ್ತುತ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಕಾರಣ ಪ್ರವಾಸಿತಾಣಗಳಿಗೆ ಭೇಟಿ ನೀಡುತ್ತಿರುವ ಪ್ರವಸಿಗರ ಸುರಕ್ಷತಾ ಹಿತದೃಷ್ಟಿಯಿಂದ, ಸದರಿ ಪ್ರವಾಸಿತಾಣಗಳನ್ನು ಸ್ಮಳೀಯ ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಚಿಕ್ಕಮಗಳೂರು ಅವರಿಂದ ಸ್ಥಳ ಪರಿಶೀಲನೆ ನಡೆಸಲಾಗಿರುತ್ತದೆ.

ಸ್ಥಳೀಯ ಅಧಿಕಾರಿಗಳು ಉಲ್ಲೇಖದಂತೆ ನೀಡಿದ ವರದಿಯಲ್ಲಿ ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್‌ ಸ್ವಾಮಿ ದರ್ಗ ಐಡಿಪೀಠ ಮತ್ತು ಮುಳ್ಳಯ್ಯನಗಿರಿ ಪ್ರದೇಶದಲ್ಲಿ ಅತಿಯಾದ ಮಳೆಯಿಂದ ಹಲವೆಡೆ ಭೂ ಕುಸಿತವಾಗಿದ್ದು, ಈ ಪ್ರದೇಶದಲ್ಲಿ ಪ್ರಸ್ತುತ ಅತಿಯಾದ ವಾಹನಗಳ ಸಂಚಾರದಿಂದ ಭೂ ಕುಸಿತವಾಗುವ ಸಂಭವವಿರುತ್ತದೆಂದು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಈ ಪ್ರದೇಶದಲ್ಲಿ ಸ್ಥಳೀಯ ವಿವಾಸಿಗಳ ವಾಹನಗಳು ಹಾಗೂ ಸರ್ಕಾರಿ ವಾಹನಗಳನ್ನು ಹೊರತುಪಡಿಸಿ ಉಳಿದ ವಾಹನಗಳ ರಸ್ತೆ ಸಂಚಾರವನ್ನು ಸಗಿತಗೊಳಿಸಲು ಕೋರಿರುತ್ತಾರೆ.

ಪ್ರಸ್ತುತ ಜಿಲ್ಲೆಯಾದ್ಯಂತ ತೀವ್ರ ಮಳೆಯಾದ ಕಾರಣ, ಸ್ಥಳೀಯ ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಸ್ಥಳ ಪರಿಶೀಲನೆ ನಡೆಸಿ ನೀಡಿದ ವರದಿಯ ಪ್ರಕಾರ ಮುಳ್ಳಯ್ಯನಗಿರಿ ಮತ್ತು ಐಡಿ ಪೀಠದ ರಸ್ತೆ ಮಾರ್ಗಗಳಲ್ಲಿ ಭೂಕುಸಿತ ಉಂಟಾಗಿರುವುದರಿಂದ ಹಾಗೂ ಇನ್ನಷ್ಟು ಭೂಕುಸಿತ ಮತ್ತು ಮರಗಳು ಉರುಳುವ ಸಂಭವ ಇರುವುದರಿಂದ, ಪ್ರವಾಸಿಗರ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ.

ಆದ್ದರಿಂದ ಪುಸ್ತುತ ಪವಾಸಿಗರು ತಾತ್ಕಾಲಿಕವಾಗಿ ಮುಳ್ಳಯ್ಯನಗಿರಿ ಹಾಗೂ ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗ ಐಡಿಪೀಠ ಭಾಗದಲ್ಲಿ ದಿನಾಂಕ 14-09-2025ರವರೆಗೆ ಮಳೆ ಪರಿಸ್ಥಿತಿ-ಸುಧಾರಿಸುವವರೆಗೆ ತಮ್ಮ ಪ್ರವಾಸವನ್ನು ಮುಂದೂಡಲು ಕೋರಿದೆ ಎಂದು ಜಿಲ್ಲಾಧಿಕಾರಿ, ಚಿಕ್ಕಮಗಳೂರು ಜಿಲ್ಲೆ ಮನವಿ ಮಾಡಿದ್ದಾರೆ.

District administration appeals to tourists to postpone hilly trips

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...