ಚಿಕ್ಕಮಗಳೂರು : ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ನೀಡುತ್ತಿರುವ ಜನಪರ ಯೋಜನೆಗಳ ಪ್ರಚಾರ ಕೈಗೊಳ್ಳುವುದರೊಂದಿಗೆ ವಿರೋಧ ಪಕ್ಷಗಳು ನಡೆಸುತ್ತಿರುವ ಅಪಪ್ರಚಾರಗಳ ಬಗ್ಗೆ ಜನರಿಗೆ ವಾಸ್ತವ ಸಂಗತಿ ತಿಳಿಸಲು ಕಾಂಗ್ರೆಸ್ ಪ್ರಚಾರ ಸಮಿತಿ ರಾಜ್ಯಾದ್ಯಂತ ಪ್ರವಾಸ ನಡೆಸುತ್ತಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಸಂಸದ ವಿನಯಕುಮಾರ ಸೊರಕೆ ತಿಳಿಸಿದರು
ನಗರದಲ್ಲಿ ಇಂದು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷವನ್ನು ಜಿಲ್ಲೆ, ಬ್ಲಾಕ್, ಹೋಬಳಿ, ಭೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಲು ಸಾಮಾಜಿಕ ಜಾಲತಾಣಗಳನ್ನು ರಚಿಸಲು ಚಾಲನೆ ನೀಡಲಾಗಿದೆ ಎಂದು ಹೇಳಿದರು.
ಸಿದ್ದರಾಮಯ್ಯ ನೇತೃತ್ವದ ಆಡಳಿತ ರೂಢ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಜನಪರವಾದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದರು ಸಹ ಚುನಾವಣೆಯ ಸಂದರ್ಭದಲ್ಲಿ ಅದರ ಪ್ರತಿಫಲವನ್ನು ಪಡೆಯುವಲ್ಲಿ ಹಿನ್ನಡೆ ಅನುಭವಿಸುತ್ತಿದೆ. ಆ ಹಿನ್ನೆಲೆಯಲ್ಲಿ ಸರ್ಕಾರದ ಯೋಜನೆಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡುವ ಜವಾಬ್ದಾರಿಯನ್ನು ನೀಡಿದೆ ಎಂದರು.
ಕೆಪಿಸಿಸಿಯ ಪ್ರಚಾರ ಸಮಿತಿ ಕೇವಲ ಚುನಾವಣಾ ಪ್ರಚಾರಕ್ಕೆ ಸೀಮಿತವಾಗಿರದೆ ರಾಜ್ಯ ಮತ್ತು ರಾಷ್ಟ್ರೀಯ ವರಿಷ್ಠರ ಶಿಫಾರಸ್ಸಿನ ಮೇರೆಗೆ ೩೪ ಜಿಲ್ಲೆಗಳಲ್ಲಿಯೂ ಪ್ರಚಾರ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಮಿತಿಗಳನ್ನು ರಚಿಸಿ ಪ್ರತಿದಿನವೂ ಪಕ್ಷ ಸಂಘಟನೆಯ ಕೆಲಸ ಮಾಡಲು ಸೂಚಿಸಿದ್ದಾರೆ ಎಂದು ತಿಳಿಸಿದರು
ಕಾಂಗ್ರೆಸ್‌ನ ವಿರೋದ ಪಕ್ಷದ ಮುಖಂಡ ರಾಹುಲ್ ಗಾಂಧಿ ಬಿಜೆಪಿ ಸರ್ಕಾರ ನಡೆಸಿರುವ ಮತಗಳ್ಳತನದ ಬಗ್ಗೆ ನಿರಂತರವಾಗಿ ಸರಣಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ರಾಜ್ಯಗಳಲ್ಲಿ ನಡೆದಿರುವ ಮತಗಳ್ಳತನದ ಬಗ್ಗೆ ಹೋರಾಟಗಳನ್ನು ಕೈಗೆತ್ತಿಕೊಳ್ಳಲಿದ್ದಾರೆಂದರು.
ಚುನಾವಣೆಯ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಪಂಚ ಗ್ಯಾರಂಟಿಗಳನ್ನು ಅನುಷ್ಟಾನಗೊಳಿಸಿದ್ದು, ಆ ಹಣ ಸದ್ವಿನಿಯೋಗ ವಾಗುತ್ತಿರುವುದನ್ನು ಸಹಿಸದ ವಿರೋಧ ಪಕ್ಷಗಳು ಅಪಪ್ರಚಾತರದಲ್ಲಿ ತೊಡಗಿದೆ ಎಂದು ಕಿಡಿಕಾರಿದ ಅವರು ದೇಶದ ಅತ್ಯುತ್ತಮ ಸಾಧನೆ ಮಾಡಿರುವ ರಾಜ್ಯಗಳ ಪೈಕಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ ಎಂದು ಹೇಳಿದರು.
ಈ ಗೋಷ್ಟಿಯಲ್ಲಿ ಜಿಲ್ಲಾ ವಕ್ತಾರ ಎಂ.ಎಸ್, ಅನಂತ್, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಹನೀಫ್, ಜಿಲ್ಲಾಧ್ಯಕ್ಷ ಕೆ.ಪಿ. ಅಂಶುಮಂತ್, ಎನ್.ಸಿ. ಮನು ಇದ್ದರು.
Congress campaign committee touring across the state to tell people the truth
Leave a comment