ಚಿಕ್ಕಮಗಳೂರು: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಸಿಟ್ಟಿಗೆದ್ದ ಯುವಕನೋರ್ವ ಯುವತಿ ಮೇಲೆ ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ಕಳಸ ಪಟ್ಟಣದ ಮಹಾವೀರ ಸರ್ಕಲ್ ಬಳಿ ಶುಕ್ರವಾರ ನಡೆದಿದೆ.
ಕಳಸ ತಾಲೂಕಿನ ಹೆಗ್ಗೋಡು ಮೂಲದ ಕಾವ್ಯ (೨೪) ಪ್ರಿಯಕರನಿಂದ ಚಾಕು ಇರಿತಕ್ಕೊಳಗಾದ ಯುವತಿಯಾಗಿದ್ದಾಳೆ. ಕೊಪ್ಪ ತಾಲೂಕಿನ ಗುಡ್ಡತೋಟ ಮೂಲದ ಯುವಕ ಆರೋಪಿಯಾಗಿದ್ದು ಸದ್ಯ ಪೊಲೀಸರು ಈತನ ಪತ್ತೆಗೆ ಬಲೆ ಬೀಸಿದ್ದಾರೆ.
ಘಟನೆ ವಿವಿರ: ಕಾವ್ಯ ಕಳಸದ ಖಾಸಗಿ ಕ್ಲಿನಿಕ್‌ನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದು ಆಕೆಯನ್ನು ಯುವಕನೋರ್ವ ಪ್ರೀತಿಸುತ್ತಿದ್ದ ಎನ್ನಲಾಗಿದೆ ಆದರೆ ಆತನ ಪ್ರೀತಿಯನ್ನು ಯುವತಿ ನಿರಾಕರಿಸಿದ್ದಾಳೆ
ಇದರಿಂದ ಕೋಪಗೊಂಡ ಯುವಕ ಪಟ್ಟಣದ ಮಹಾವೀರಸರ್ಕಲ್ ಬಳಿ ಕಲ್ಲಿನಿಂದ ಹಲ್ಲೆ ಮಾಡಿ ತಲೆ ಹಾಗೂ ಬೆನ್ನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ, ಗಂಭೀರ ಗಾಯಗೊಂಡ ಯುವತಿಯನ್ನು ಕಳಸದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಕೊಡಿಸಲಾಗುತ್ತಿದೆ.
ಘಟನೆ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಯ ಪತ್ತೆಗಾಗಿ ಪೊಲೀಸರು ತಂಡರ ಚಿಸಿ ಶೋಧ ಕಾರ್ಯನಡೆಸುತ್ತಿದ್ದಾರೆ.
Love rejection-Young woman attacked with knife
Leave a comment