Home namma chikmagalur  ಹಿಂದೂ ಮಹಾಗಣಪತಿ ಗಣೇಶಮೂರ್ತಿ ವಿಸರ್ಜನಾ ಮಹೋತ್ಸವ ಮೆರವಣಿಗೆ
namma chikmagalurchikamagalurHomeLatest News

 ಹಿಂದೂ ಮಹಾಗಣಪತಿ ಗಣೇಶಮೂರ್ತಿ ವಿಸರ್ಜನಾ ಮಹೋತ್ಸವ ಮೆರವಣಿಗೆ

Share
Share

ಚಿಕ್ಕಮಗಳೂರು: ನಗರದ ಬಸವನಹಳ್ಳಿ ಮುಖ್ಯರಸ್ತೆಯ ಓಂಕಾರೇಶ್ವರ ದೇವಾಲಯ ಆವರಣದಲ್ಲಿ ಹಿಂದೂ ಮಹಾಗಣಪತಿ ಸೇವಾ ಸಂಘದಿಂದ ಪ್ರತಿಷ್ಠಾಪಿಸಿದ್ದ ಗಣೇಶಮೂರ್ತಿ ವಿಸರ್ಜನಾ ಮಹೋತ್ಸವ ಮೆರವಣಿಗೆ ನಗರದಲ್ಲಿ ಶನಿವಾರ ಅದ್ಧೂರಿಯಿಂದ ನಡೆಯಿತು.

ಬಣ್ಣ–ಬಣ್ಣದ ಹೂವು, ಹಾರಗಳಿಂದ ಅಲಂಕಾರಗೊಂಡಿದ್ದ ಗಣಪತಿ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಟ್ರ್ಯಾಕ್ಟರ್‌ ಮೇಲೆ ಪ್ರತಿಷ್ಠಾಪಿಸಲಾಯಿತು. ಬಸವನಹಳ್ಳಿ ಮುಖ್ಯರಸ್ತೆಯಿಂದ ಹೊರಟು, ವಿಜಯಪುರದ ಆಂಜನೇಯಸ್ವಾಮಿ ದೇವಾಲಯ ರಸ್ತೆ, ಶ್ರೀಕಂಠಪ್ಪ ವೃತ್ತ, ಕೆಇಬಿ ವೃತ್ತ, ಹನುಮಂತಪ್ಪ ವೃತ್ತ, ಎಂ.ಜಿ. ರಸ್ತೆ, ಆಜಾದ್ ಪಾರ್ಕ್ ವೃತ್ತದ ಮೂಲಕ ಮೆರವಣಿಗೆ ಸಾಗಿತು.

ಬೃಹತ್ ಯಾತ್ರೆ ಹಾಗೂ ವಿಸರ್ಜನೆ ಮೆರವಣಿಗೆಯಲ್ಲಿ ವಿಶ್ವಹಿಂದೂ ಪರಿಷತ್‌, ಬಜರಂಗದಳ ಸೇರಿ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು. ಸಾವಿರಾರು ಸಂಖ್ಯೆಯಲ್ಲಿದ್ದ ಯುವಕರು, ಯುವತಿಯರು, ಕಾರ್ಯಕರ್ತರು ಶ್ವೇತವಸ್ತ್ರಧಾರಿಗಳಾಗಿ ಕೇಸರಿ–ನೀಲಿ ಮಿಶ್ರಿತ ಶಾಲು ಹಾಕಿ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.

ಗೊಂಬೆ ಮೇಳ ಸೇರಿ ಕಲಾತಂಡಗಳು ಮೆರವಣಿಗೆಗೆ ಮೆರುಗು ನೀಡಿದ್ದವು. ಆಂಜನೇಯ ಮೂರ್ತಿ, ಚಲನಚಿತ್ರ ನಟ ರಾಜ್‌ ಬಿ.ಶೆಟ್ಟಿ ಹೋಲುವ ಎತ್ತರದ ಬೊಂಬೆ, ಬೇತಾಳ, ರಾಕ್ಷಸ ಮಾದರಿಯ ಮೆರವಣಿಗೆಯ ಆಕರ್ಷಣೆಯಾಗಿತ್ತು. ಗೊರಿಲ್ಲಾ ಮಾದರಿಯ ಗೊಂಬೆಗಳು ಜನರ ಸೆಲ್ಫಿ ಕೇಂದ್ರವಾಗಿದ್ದವು. ಚಂಡೆವಾದ್ಯ, ನಾದಸ್ವರ ಸೇರಿ ವಿವಿಧ ಕಲಾ ತಂಡಗಳು ಮೆರವಣಿಗೆಯಲ್ಲಿ ಸಾಗಿದವು.

ಯುವಕರು ಸಂಗೀತಕ್ಕೆ ಕುಣಿದು ಕುಪ್ಪಳಿಸಿದರು. ಮಹಿಳೆಯರಿಗೂ ಪ್ರತ್ಯೇಕ ಸಂಗೀತ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿ ಯುವತಿಯರು ಕುಣಿದು ಸಂಭ್ರಮಿಸಿದರು. ಆಜಾದ್ ಪಾರ್ಕ್ ವೃತ್ತದ ಮೂಲಕ ಮೆರವಣಿಗೆ ಬಳಿಕ ಗಣೇಶ ಮೂರ್ತಿಯನ್ನು ಬೇಲೂರು ರಸ್ತೆಯ ಕೋಟೆ ಕೆರೆಯ ಕಲ್ಯಾಣಿಯಲ್ಲಿ ವಿಸರ್ಜನೆ ಮಾಡಲಾಯಿತು.

Hindu Maha Ganapati Ganesh idol immersion festival procession
Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...