Home Crime News ಚಾರ್ಮಾಡಿ ಘಾಟಿಯಲ್ಲಿ ಸರಣಿ ಅಪಘಾತ – KSRTC ಬಸ್ ಚಾಲಕನ ಸ್ಥಿತಿ ಗಂಭೀರ
Crime NewschikamagalurHomeLatest Newsnamma chikmagalur

ಚಾರ್ಮಾಡಿ ಘಾಟಿಯಲ್ಲಿ ಸರಣಿ ಅಪಘಾತ – KSRTC ಬಸ್ ಚಾಲಕನ ಸ್ಥಿತಿ ಗಂಭೀರ

Share
Share
ಕೊಟ್ಟಿಗೆಹಾರ:  ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು – ದಕ್ಷಿಣ ಕನ್ನಡ ಗಡಿಭಾಗದ ಚಾರ್ಮಾಡಿ ಘಾಟಿಯಲ್ಲಿ ಭಾರೀ ಸರಣಿ ಅಪಘಾತ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 173ರಲ್ಲಿ ನಡೆದ ಈ ಅಪಘಾತದಲ್ಲಿ KSRTC ಬಸ್ ಹಾಗೂ ಎರಡು ಲಾರಿಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡಿವೆ.
 KSRTC ಬಸ್ ಗ್ಯಾಸ್ ಸಿಲಿಂಡರ್ ಹೊತ್ತಿದ್ದ ಲಾರಿಗೆ ನೇರವಾಗಿ ಡಿಕ್ಕಿ ಹೊಡೆದಿದೆ. ತಕ್ಷಣವೇ ಹಿಂಬದಿಯಿಂದ ಮತ್ತೊಂದು ಲಾರಿ ಗ್ಯಾಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ತೀವ್ರಗೊಂಡಿದೆ. ಇದರಲ್ಲಿ KSRTC ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ.
ಅಪಘಾತದ ಪರಿಣಾಮವಾಗಿ ಚಾರ್ಮಾಡಿ ಘಾಟಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದು, ಪ್ರಯಾಣಿಕರು ತೊಂದರೆ ಅನುಭವಿಸುವಂಥಾಯಿತು.
ಘಟನೆಯ ಮಾಹಿತಿ ಪಡೆದು ತಕ್ಷಣ ಬಣಕಲ್ ಮತ್ತು ಬೆಳ್ತಂಗಡಿ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಸಂಚಾರ ನಿಯಂತ್ರಣ ಕಾರ್ಯ ಕೈಗೊಂಡಿದ್ದಾರೆ.. ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಾಗಿದ್ದು ಬೆಳ್ತಂಗಡಿ ಪೊಲೀಸ್ ಠಾಣಾ ಪ್ರಕರಣ ದಾಖಲಾಗಿದೆ
Serial accident at Charmadi Ghat
Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...