Home namma chikmagalur ಮಹಾ ಪುರುಷರು ಸಮ ಸಮಾಜ ನಿರ್ಮಿಸಲು ಶ್ರಮಿಸಿದವರು
namma chikmagalurchikamagalurHomeLatest News

ಮಹಾ ಪುರುಷರು ಸಮ ಸಮಾಜ ನಿರ್ಮಿಸಲು ಶ್ರಮಿಸಿದವರು

Share
Share

ಚಿಕ್ಕಮಗಳೂರು:  ಸಮ ಸಮಾಜವನ್ನು ನಿರ್ಮಾಣ ಮಾಡಲು, ವಿಶ್ವಕರ್ಮರಂತಹ ಮಹಾ ಪುರುಷರು ಶ್ರಮಿಸಿದ್ದಾರೆ ಎಂದು ಚಿಕ್ಕಮಗಳೂರು ಕ್ಷೇತ್ರದ ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು.

ಜಿಲ್ಲಾಡಳಿತದ ವತಿಯಿಂದ ನಗರದ ಕುವೆಂಪು ಕಲಾಮಂದಿರದಲ್ಲಿ ಇಂದು ನಡೆದ ಶ್ರೀ ವಿಶ್ವಕರ್ಮ ಜಯಂತಿ ಆಚರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜಕ್ಕೆ ಬಸವಣ್ಣನವರು, ಕನಕದಾಸರು, ವಿಶ್ವಕರ್ಮರು, ಅಂಬೇಡ್ಕರ್, ಮಹರ್ಷಿ ವಾಲ್ಮೀಕಿಯವರಂತಹ ಮಹನೀಯರ ಕೊಡುಗೆ ಅಪಾರ. ಈ ಪ್ರಪಂಚ ಇರುವವರೆಗೂ ಈ ಮಹಾಪುರುಷರು ತಮ್ಮ ವಿಚಾರಧಾರೆಗಳಿಂದ ಬದುಕಿರುತ್ತಾರೆ ಎಂದು ತಿಳಿಸಿದರು.
ಶ್ರೀ ವಿಶ್ವಕರ್ಮ ಜನಾಂಗದವರು ಅವರದೇ ಆದ ವಿಶಿಷ್ಟವಾದ ರೀತಿಯ ಕಲೆ ಕರಗತ ಮಾಡಿಕೊಂಡವರು. ದೊಡ್ಡ ಬಂಡೆಕಲ್ಲುಗಳನ್ನು ಶಿಲೆಯನ್ನಾಗಿ ಹಾಗೂ ಮರದ ತೊಲೆಗಳನ್ನು ಕೆತ್ತನೆ ಮಾಡುವ ಮೂಲಕ ಮೂರ್ತಿಯ ಸ್ವರೂಪ ನೀಡುವುದಿದೆಯಲ್ಲ ಅದು ನಿಜಕ್ಕೂ ವಿಶೇಷವಾದದ್ದು ಎಂದರು.

ವಿಶ್ವದ ಶಿಲ್ಪಕಲೆಯ ಪ್ರಥಮ ಗುರುಗಳು ಇದ್ದರೆ ಅದು ವಿಶ್ವಕರ್ಮರು ಮಾತ್ರ. ಇತ್ತೀಚೆಗೆ ವೈವಿಧ್ಯಮಯವಾದ ವಾಸ್ತುಶಿಲ್ಪಗಳು, ತಂತ್ರಜ್ಞಾನಗಳು ಬಂದಿರಬಹುದು. ಹೀಗಿದ್ದರೂ ವಿಶ್ವಕರ್ಮರು ಹಾಗೂ ಅವರ ಶಿಲ್ಪಕಲೆಯನ್ನು ಮರೆಯಲು ಸಾಧ್ಯವಿಲ್ಲ. ಸಂಸ್ಕೃತಿಯ ದೈವಶಕ್ತಿಯಾಗಿರುವ ವಿಶ್ವಕರ್ಮರು, ಮಹತ್ತರವಾದ ನಗರಗಳನ್ನು, ಪುಷ್ಪಕ ವಿಮಾನ, ಬಗೆಬಗೆಯ ಅಸ್ತ್ರ-ಶಸ್ತ್ರಗಳನ್ನು ಸೃಷ್ಟಿಸಿ ಕೊಟ್ಟಿರುವುದು ವರ್ಣನೆಗೂ ಮೀರಿರುವಂತಹದ್ದು. ಬೇಲೂರು ಮತ್ತು ಹಳೇಬೀಡು ದೇವಾಲಯಗಳನ್ನು ನಿರ್ಮಿಸಿದ ಜಕಣಾಚಾರಿ ಹಾಗೂ ಡಂಕಣಾಚಾರಿಯವರನ್ನು ಮರೆಯುವಂತಿಲ್ಲ. ಬಂಗಾರದ ಒಡವೆಗಳ ತಯಾರಿಕೆ ಕೂಡ ವಿಶ್ವಕರ್ಮ ಸಮುದಾಯದ ವಿಶೇಷತೆ ಎಂದೇ ಹೇಳಬೇಕು. ಈ ಹಿನ್ನೆಲೆಯಲ್ಲಿ ವಿಶ್ವಕರ್ಮ ಸಮುದಾಯದ ಶ್ರಮ ಹಾಗೂ ನಿರಂತರ ಕ್ರಿಯಾಶೀಲತೆ ಅವರ ಆದರ್ಶವನ್ನು ಬಿಂಬಿಸುತ್ತದೆ ಎಂದು ಹೇಳಿದರು.

ಶ್ರೀ ವಿಶ್ವಕರ್ಮರ ಬಗ್ಗೆ ಹಾಸನದ ಎಚ್.ಕೆ.ಎಸ್. ಕಾಲೇಜಿನ ಕನ್ನಡ ಉಪನ್ಯಾಸಕ ಎಂ.ರಮೇಶ್ ಉಪನ್ಯಾಸ ನೀಡಿ, ವಿಶ್ವಕರ್ಮರಿಗೆ ಕಲೆ ರಕ್ತಗತವಾಗಿ, ವಂಶಪಾರಂಪರ್ಯವಾಗಿ ಕರಗತವಾಗಿರುವಂತಹದು. ಅವರು ದೈವಸಂಭೂತ ಅಂಶಗಳನ್ನು ಹೊಂದಿದ್ದವರು ಎಂದರಲ್ಲದೆ, ಪುರಾಣದ ಪ್ರಸಂಗಗಳನ್ನು ವರ್ಣಿಸಿದರು.

ತಾಲ್ಲೂಕು ಕಚೇರಿಯ ಉಪತಹಸೀಲ್ದಾರ್ ರಾಮರಾವ್ ದೇಸಾಯಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಶ್ವಕರ್ಮ ಸಮಾಜದ ಅಧ್ಯಕ್ಷ ಉಮಾಶಂಕರ್, ಶಿಲ್ಪ ಕಲಾವಿದ ವಿಶ್ವಕರ್ಮ ಆಚಾರ್, ತಾಲ್ಲೂಕು ಅಧ್ಯಕ್ಷ ದಿವಾಕರ್, ಮಹಿಳಾ ಸಂಘದ ಅಧ್ಯಕ್ಷರಾದ ಮಂಜುಳಾ ಹಾಗೂ ವಿಶ್ವಕರ್ಮ ಸಮಾಜದ ಮುಖಂಡರು ಭಾಗವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿ.ರಮೇಶ್ ಸ್ವಾಗತಿಸಿದರು.

Great men who worked hard to build an equal society

Share

Leave a comment

Leave a Reply

Your email address will not be published. Required fields are marked *

Don't Miss

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ-ಜಿಲ್ಲಾಧಿಕಾರಿ

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇದೇ ಮಾರ್ಚ್ ೧೮ ರಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು. ಜಿ.ಪಂ.ನ ಅಬ್ದುಲ್...

ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್‌ಗೆ ಕೊರತೆ ಇಲ್ಲ

ಚಿಕ್ಕಮಗಳೂರು, ಮಾ.೧೩: ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆಬಾಗಿಲಿಗೆ ಸರಬರಾಜು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ...

Related Articles

ವಿದ್ಯುತ್ ಸ್ಪರ್ಶಕ್ಕೆ ಯುವಕನ ಧಾರುಣ ಸಾವು

ಅಜ್ಜಂಪುರ: ವಿದ್ಯುತ್ ಸ್ಪರ್ಶದಿಂದ ಪ್ರವೀಣ್ ಎಂಬ ಯುವಕ ಮೃತಪಟ್ಟಿದ್ದಾನೆ ಸೊಕ್ಕೆ ಪರಮೇಶಣ್ಣ ಅವರ ಮಗ. ಹೆಬ್ಬೂರು...

ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಮನಸೋಇಚ್ಛೆ ಹಲ್ಲೆ

ಮೂಡಿಗೆರೆ:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ...

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ 25ಕ್ಕೂ ಹೆಚ್ಚುಕಡೆ ಬೆಂಕಿ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು  ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ...

3.50 ಕೋಟಿ ರೂ ವೆಚ್ಚದ ವಿವಿಧ ರಸ್ತೆಗಳ ಲೋಕಾರ್ಪಣೆ

ಚಿಕ್ಕಮಗಳೂರು:  ಬಡವರ ಬಗ್ಗೆ ಕಾಳಜಿ ಇಲ್ಲದ ಕೇಂದ್ರ ಸರ್ಕಾರ ಧರ್ಮ ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ...