Home namma chikmagalur ಜಿಲ್ಲೆಯಲ್ಲಿ ಚುಕ್ಕಿನಂಜುಂಡಸ್ವಾಮಿ ನೇತೃತ್ವದಲ್ಲಿ ರೈತಸಂಘ ಅಸ್ತಿತ್ವಕ್ಕೆ
namma chikmagalurchikamagalurHomeLatest News

ಜಿಲ್ಲೆಯಲ್ಲಿ ಚುಕ್ಕಿನಂಜುಂಡಸ್ವಾಮಿ ನೇತೃತ್ವದಲ್ಲಿ ರೈತಸಂಘ ಅಸ್ತಿತ್ವಕ್ಕೆ

Share
Share

ಚಿಕ್ಕಮಗಳೂರು:  ಜಿಲ್ಲೆಯ ಬಯಲು ಮತ್ತು ಮಲೆನಾಡು ಭಾಗದಲ್ಲಿ ರೈತರು ಅನುಭವಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕಾಗಿ ಪ್ರೊ. ನಂಜುಂಡಸ್ವಾಮಿ ಅವರ ಮೂಲ ಸಂಘಟನೆ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕವನ್ನು ಸ್ಥಾಪಿಸಿದ್ದು, ರೈತ ಪರ ಹೋರಾಟ ಮುಂದುವರಿಯಲಿದೆ ಎಂದು ನೂತನ ಸಂಘಟನೆಯ ಜಿಲ್ಲಾಧ್ಯಕ್ಷ ಕೆ.ಟಿ.ಆನಂದ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಾಮೂಹಿಕ ನಾಯಕತ್ವದಡಿಯಲ್ಲಿ ನೂತನ ಸಂಘಟನೆ ಹುಟ್ಟು ಹಾಕಲಾಗಿದೆ. ಈಗಾಗಲೇ ವಿವಿಧ ತಾಲೂಕು ಮತ್ತು ಹೋಬಳಿ ಮಟ್ಟದ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಗೌರವ ಅಧ್ಯಕ್ಷರಾಗಿ ಚನ್ನಬಸಪ್ಪ, ಮಹಿಳಾ ಅಧ್ಯಕ್ಷೆ ಕೆಂಪಮ್ಮ, ಕಡೂರು ಕೃಷ್ಣಮೂರ್ತಿ, ತರೀಕೆರೆ ಚಂದ್ರಶೇಖರ್, ಚಿಕ್ಕಮಗಳೂರು ತಾಲೂಕು ಅಧ್ಯಕ್ಷರಾಗಿ ಸಂಪತ್‌ಕುಮಾರ್, ವಸ್ತಾರೆ ಹೋಬಳಿಗೆ ಜೀವನ್ ನೆರಡಿ, ಕಾರ್ಯದರ್ಶಿಯಾಗಿ ಸಂತೋಷ್, ಲಕ್ಯಾ ಅಧ್ಯಕ್ಷರಾಗಿ ಜಗದೀಶ್, ಕಾರ್ಯದರ್ಶಿ ವಸಂತ್‌ಕುಮಾರ್, ಅಂಬಳೆಗೆ ಮಂಜೇಗೌಡ, ರಂಗೇಗೌಡ ಅವರನ್ನು ಕ್ರಮವಾಗಿ ಅಧ್ಯಕ್ಷ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಹೇಳಿದರು.

ಕಡೂರಿನಲ್ಲಿ ನಕಲಿ ಮರಣ ಪ್ರಮಾಣಪತ್ರ ತೋರಿಸಿ ಪೌತಿಖಾತೆ ಮಾಡಿಕೊಡಲಾಗುತ್ತಿದೆ ಇದಕ್ಕೆ ಕಡಿವಾಣ ಹಾಕಬೇಕು. ನೆರಡಿ ಗ್ರಾಮದಲ್ಲಿ ಸ್ಮಶಾನಕ್ಕೆ ದಾರಿಯಿಲ್ಲ. ಈರುಳ್ಳಿ ಬೆಲೆ ಕುಸಿದಿದ್ದು ಬೆಳೆಗಾರ ಸಂಕಷ್ಟದಲ್ಲಿದ್ದಾನೆ ಈ ಸಂದರ್ಭ ಸರಕಾರ ನೆರವಿಗೆ ಬರಬೇಕು. ಕಡೂರು ತಾಲೂಕಿನ ನೀರಾವರಿ ಯೋಜನೆಗಳನ್ನು ಸಮರ್ಪವಾಗಿ ನಿರ್ವಹಿಸುವುದು ಸೇರಿದಂತೆ ಮತ್ತಿತರೆ ಸಮಸ್ಯೆ ಮುಂದಿಟ್ಟುಕೊಂಡು ಮುಂದಿನ ದಿನದಲ್ಲಿ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ನೂತನ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Chukki Nanjundaswamy Farmers’ Association comes into existence

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...