Home namma chikmagalur ಜಿಲ್ಲೆಗೆ ದಾಖಲಾಗಿದ್ದ 65 ಪ್ರಕರಣಗಳು ಸ್ಥಳದಲ್ಲೇ ಇತ್ಯರ್ಥ
namma chikmagalurchikamagalurHomeLatest News

ಜಿಲ್ಲೆಗೆ ದಾಖಲಾಗಿದ್ದ 65 ಪ್ರಕರಣಗಳು ಸ್ಥಳದಲ್ಲೇ ಇತ್ಯರ್ಥ

Share
????????????????????????????????????
Share

ಚಿಕ್ಕಮಗಳೂರು: ಜಿಲ್ಲೆಗೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ದಾಖಲಾಗಿದ್ದ 85 ಪ್ರಕರಣಗಳ ಪೈಕಿ 65 ಪ್ರಕರಣಗಳನ್ನು ಗುರುವಾರ ಜಿಪಂ ಸಭಾಂಗಣದಲ್ಲಿ ನಡೆದ ಕಲಾಪದಲ್ಲಿ ಇತ್ಯರ್ಥಪಡಿಸಲಾಗಿದೆ ಎಂದು ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಿಂದ ಬಂದಿರುವ ಪ್ರಕರಣಗಳ ಬಗ್ಗೆ ಮೊದಲೇ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದೆವು. ಎಲ್ಲಿಯಾದರೂ ಅಧಿಕಾರಿಗಳ ತಪ್ಪು ಕಂಡು ಬಂದಲ್ಲಿ ಕ್ರಮ ಜರುಗಿಸುವ ಎಚ್ಚರಿಕೆಯನ್ನು ನೀಡಲಾಗಿತ್ತು. ಇದೇ ಕಾರಣದಿಂದಲೇ ಸ್ಥಳದಲ್ಲೇ 65 ಪ್ರಕರಣಗಳ ಇತ್ಯರ್ಥ ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

85 ಪ್ರಕರಣಗಳ ಪೈಕಿ 65 ಪ್ರಕರಣಗಳು ಸ್ಥಳದಲ್ಲೇ ಇತ್ಯರ್ಥವಾದರೆ, ಇನ್ನು ಕೆಲ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರುದಾರರು ಬಂದಿಲ್ಲ. ಕೆಲ ಪ್ರಕರಣಗಳಿಗೆ ತನಿಖೆ ಮಾಡಬೇಕಾಗಿದೆ ಎಂದು ಮಾಹಿತಿ ನೀಡಿದರು.

ಚಿಕ್ಕಮಗಳೂರು ಜಿಲ್ಲೆ ಭೇಟಿ ವೇಳೆ ಈಗಾಗಲೇ ಆರು ಸುಮೋಟೋ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣ ದಾಖಲಿಸಿಕೊಂಡಾಕ್ಷಣ ಯಾರ ಮೇಲೆಯೂ ಕ್ರಮ ಕೈಗೊಳ್ಳುವುದಿಲ್ಲ. ಆದರೆ ಸಮಸ್ಯೆ ಬಗೆಹರಿಸದಿದ್ದಲ್ಲಿ ಯಾವುದೇ ಮುಲಾಜಿಲ್ಲದೆ ಕ್ರಮ ಜರುಗಿಸುತ್ತೇವೆ ಎಂದು ಹೇಳಿದರು.

ಚಿಕ್ಕಮಗಳೂರಿನ ಕುವೆಂಪು ಕಲಾ ಮಂದಿರದಲ್ಲಿ ನಡೆದ ಅಹವಾಲು ಸ್ವೀಕಾರ ಸಂದರ್ಭದಲ್ಲಿ 500ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ. ಇದರಲ್ಲಿ ಗರಿಷ್ಠ 50 ಪ್ರಕಣಗಳು ಮಾತ್ರ ಲೋಕಾಯುಕ್ತ ವ್ಯಾಪ್ತಿಗೆ ಬರುತ್ತವೆ. ಉಳಿದ ಪ್ರಕರಣಗಳು ಯಾವ ಸಂಸ್ಥೆಗಳ ವ್ಯಾಪ್ತಿಗೆ ಬರುತ್ತವೆ ಎನ್ನುವುದನ್ನು ಪರಿಶೀಲಿಸಿ ಆ ಸಂಸ್ಥೆಗೆ ಹಸ್ತಾಂತರಿಸುತ್ತೇವೆ. ಜೊತೆಗೆ ಪ್ರಕರಣಗಳನ್ನು ಶೀಘ್ರವೇ ಇತ್ಯರ್ಥ ಪಡಿಸುವಂತೆ ನಿರ್ದೇಶನ ನೀಡುವುದಾಗಿ ತಿಳಿಸಿದರು.

ಕೆಲವು ಸರ್ಕಾರಿ ಅಧಿಕಾರಿಗಳ ನಿರ್ಲಕ್ಷದಿಂದ ಸಾರ್ವಜನಿಕರಿಗೆ ಸಮಸ್ಯೆ ಆಗಿರಬಹುದು. ಆದರೆ ನಿರ್ಲಕ್ಷ ಎಲ್ಲಿ ಆಗಿದೆ ಎಂಬುದನ್ನು ಅರಿಯಬೇಕಿದೆ. ಹೀಗಾಗಿ ಸಾರ್ವಜನಿಕರು ತಮಗೆ ಎಲ್ಲಾದರೂ ಸಮಸ್ಯೆ ಉಂಟಾದಲ್ಲಿ ನೇರವಾಗಿ ಲೋಕಾಯುಕ್ತಕ್ಕೆ ದೂರು ನೀಡಬೇಕು ಎಂದು ಮನವಿ ಮಾಡಿದರು.

ಲಂಚದ ಪಿಡುಗು ತೊಲಗಿಸಲು ಎಲ್ಲರೂ ಕೈಜೋಡಿಸಬೇಕು. ದೂರು ನೀಡುವ ವೇಳೆ ಸೂಕ್ತ ಸಾಕ್ಷಾಧಾರ ಒದಗಿಸಬೇಕು. ಕೇವಲ ಯಾರೊಬ್ಬರ ಮೇಲೆ ಆರೋಪ ಮಾಡಿದರೆ ಪ್ರಯೋಜನವಿಲ್ಲ. ಒಂದು ಸರ್ಕಾರಿ ಕಚೇರಿಯಲ್ಲಿ ನಾಲ್ಕರಿಂದ ಐದು ಜನ ಲೋಕಾಯುಕ್ತ ಬಲೆಗೆ ಬಿದ್ದರೆ ಉಳಿದವರು ಎಚ್ಚರಗೊಳ್ಳುತ್ತಾರೆ. ಆಗ ಜನರ ಕೆಲಸ ಸಾಂಗವಾಗಿ ನಡೆಯುತ್ತದೆ. ಇದನ್ನು ಸಾರ್ವಜನಿಕರು ಅರ್ಥ ಮಾಡಿಕೊಂಡು ಮುನ್ನಡೆಯಬೇಕು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಉಪಲೋಕಾಯುಕ್ತರೊಂದಿಗೆ ಬಂದಿದ್ದ ನ್ಯಾಯಾಧೀಶರಾದ ಪೃಥ್ವಿರಾಜ್ ವರ್ಣೇಕರ್, ಅನಂತ ನಲವಾಡೆ, ಲೋಕಾಯುಕ್ತ ಎಸ್ ಪಿ ಸ್ನೇಹ ಉಪಸ್ಥಿತರಿದ್ದರು.

65 cases registered in the district were settled on the spot

Share

Leave a comment

Leave a Reply

Your email address will not be published. Required fields are marked *

Don't Miss

ನಲಪಾಡ್ ಹೇಳಿಕೆ ಖಂಡಿಸಿ ಜೆಡಿಎಸ್ ಅಲ್ಪಸಂಖ್ಯಾತ ಘಟಕ ಆಕ್ರೋಶ

ಚಿಕ್ಕಮಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ವಿರುದ್ಧ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ನೀಡಿರುವ ಹೇಳಿಕೆಯನ್ನು...

ಮಳಲೂರು ಏತ ನೀರಾವರಿ ಯೋಜನೆ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಅನುಷ್ಠಾನ ಮತ್ತು ಅರಸನ ನಾಲೆ ಪುನಶ್ಚೇತನ ಯೋಜನೆಗಳ ಕಾಮಗಾರಿಗಳಿಗೆ ಉಂಟಾಗಿರುವ ತಾಂತ್ರಿಕ ಅಡಚಣೆಗಳನ್ನು ಪರಿಶೀಲಿಸಿ ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್...

Related Articles

ಭದ್ರೆಯ ಕೃಪೆಯಿಂದ ಕೋಡಿಬಿದ್ದ ಕುಕ್ಕಸಮುದ್ರ ಕೆರೆ

ಚಿಕ್ಕಮಗಳೂರು: ಭದ್ರಾ ಮೇಲ್ದಂಡೆಯ ಚಿತ್ರದುರ್ಗ ಶಾಖಾ ಕಾಲುವೆ ಮೂಲಕ ಹರಿದು ಬಂದ ಭದ್ರಾ ನೀರು ಕಡೂರು...

ಮಹೇಶ್ ಜೋಷಿಗೆ ಹಿನ್ನೆಡೆ-ಮತ್ತೆ ಕೋರ್ಟ್ ನಲ್ಲಿ ಹೋರಾಟಕ್ಕೆ ಜಯ

ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ನಡೆದಿದೆ ಎನ್ನಲಾದ ಆಡಳಿತಾತ್ಮಕ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಕುರಿತು ಹಿರಿಯ ಸಾಹಿತಿಗಳು,...

ಅ.8ರಂದು ಚಿಕ್ಕಮಗಳೂರಿನಲ್ಲಿ ದಲಿತ ಸಂಘರ್ಷ ಸಮಿತಿಯ ಮಹಿಳಾ ಮಹಾಸಭೆ

ಚಿಕ್ಕಮಗಳೂರು:  ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ರಾಜ್ಯ ಸಮಿತಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಸಮಿತಿ...

 ಅ.8ರಂದು ಚಿಕ್ಕಮಗಳೂರಿನಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ

ಚಿಕ್ಕಮಗಳೂರು: ದೇಶಾದ್ಯಂತ ನಡೆಯುತ್ತಿರುವ ‘ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ–ದೇಶ ಬಚಾವೋ’ ಚಳುವಳಿಯ ಭಾಗವಾಗಿ ಅ.8ರಂದು ಚಿಕ್ಕಮಗಳೂರು...