Home Latest News ಶೃಂಗೇರಿಯಲ್ಲಿ ಸಮ ಸಮಾಜ ನಿರ್ಮಾಣ ಕುರಿತ ಸಭೆ
Latest NewschikamagalurHomenamma chikmagalur

ಶೃಂಗೇರಿಯಲ್ಲಿ ಸಮ ಸಮಾಜ ನಿರ್ಮಾಣ ಕುರಿತ ಸಭೆ

Share
Share

ಶೃಂಗೇರಿ: ರೈತರು, ಕಾರ್ಮಿಕರ, ಶಿಕ್ಷಣ, ಆರೋಗ್ಯ ವಿಷಯದಲ್ಲಿ ಕಾರ್ಯ ನಿರ್ವಹಿಸುವ ಸಂಘಟನೆಗಳನ್ನು ಒಂದು ಸಿದ್ದಾಂತದ ಅಡಿಯಲ್ಲಿ ಒಗ್ಗೂಡಿಸುವ, ಆ ಮೂಲಕ ರಾಜಕೀಯ ಪರಿವರ್ತನೆ ತರುವ ಪ್ರಯತ್ನ ಮಾಡಲಾಗುತ್ತಿದೆ. ವ್ಯವಸ್ಥೆಗೆ ಪರ್ಯಾಯ ರಾಜಕಾರಣ ಬೇಕು. ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದು ನಟ ಚೇತನ್ ಅಂಹಿಸಾ ಹೇಳಿದರು.

ಶೃಂಗೇರಿಯ ಶಾರದಾ ನಗರದಲ್ಲಿ ಕರ್ನಾಟಕ ಜನಶಕ್ತಿ ಆಯೋಜಿಸಿದ್ದ ಸಮ ಸಮಾಜ ನಿರ್ಮಾಣ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.

ಪರಿಸರ ಎಂಬುದು ಪ್ರಾಣಿ, ಪಕ್ಷಿಗಳಿಗೆ ಸೀಮಿತವಾಗಿರದೆ ಪರಿವರ್ತನ ಪರಿಸರವಾದ ಆಗಬೇಕು. ಪರಿವರ್ತನೆಯ ಪರಿಸರ ಕಾಳಜಿಯನ್ನು ಜನರಲ್ಲಿ ಬಿತ್ತುವ ಕಾರ್ಯ ಮಾಡಬೇಕು. ಈ ಮೂಲಕ ಪರಿಸರದ ಮೇಲೆ ನಡೆಯುತ್ತಿರುವ ದಬ್ಬಾಳಿಕೆಗೆ ಕಡಿವಾಣ ಹಾಕಬೇಕು. ಪರಿಸರ ರಕ್ಷಣೆ, ಅಭಿವೃದ್ಧಿ ಮತ್ತು ಮುಂದಿನ ತಲೆಮಾರಿಗೆ ಹೇಗೆ ಉಳಿಸಿಕೊಡಬೇಕು ಎಂಬುದರ ಬಗ್ಗೆ ಚಿಂತನೆ ಮಾಡಬೇಕು. ಸಮಾಜದಲ್ಲಿನ ಅಸಮಾನತೆ ಪರಿಸರದ ಮೇಲೆ ದೊಡ್ಡ ಪರಿಣಾಮ ಬೀರುತ್ತಿದೆ ಎಂದರು.

ಪರಿಸರವಾದಿ ಕಲ್ಕುಳಿ ವಿಠಲ್ ಹೆಗ್ಡೆ ಮಾತನಾಡಿ, ರಾಜಕಾರಣಿಗಳು ಜನರ ಸೇವೆಯ ಬದಲು ತಮ್ಮ ವೈಯಕ್ತಿಕ ಆದಾಯ ಹೆಚ್ಚಿಸಿಕೊಳ್ಳುವಲ್ಲಿ ಗಮನ ಹರಿಸಿದ್ದಾರೆ. ಪರಿಸರದ ಮೇಲೆ ಮಾನವನ ಒತ್ತಡ ಹೆಚ್ಚಾಗುತ್ತಿದೆ. ಇದರ ಪರಿಣಾಮವನ್ನು ನಾವು ಎದುರಿಸುತ್ತಿದ್ದೇವೆ. ಪರಿಸರದಲ್ಲಿ ಆಗುತ್ತಿರುವ ಬದಲಾವಣೆಗಳು ಇಡೀ ಜೀವಸಂಕುಲಕ್ಕೆ ಅಪಾಯ ತಂದೊಡ್ಡುತ್ತಿವೆ ಎಂದರು.

ಕರ್ನಾಟಕ ಜನಶಕ್ತಿಯ ಸುಕೇಶ್ ಗಡಿಕಲ್ಲು, ವೆಂಕಟೇಶ್, ಕೌಳಿ ರಾಮು, ಮಣಿ, ಶೇಖರ, ಕರುಣಾಕರ, ಮನೋಜ್, ಗುರುಪ್ರಸಾದ್ ಭಾಗವಹಿಸಿದ್ದರು.

Meeting on building an equal society in Sringeri

Share

Leave a comment

Leave a Reply

Your email address will not be published. Required fields are marked *

Don't Miss

ಭತ್ತದ ಗದ್ದೆಯಲ್ಲಿ 12 ಅಡಿ ಉದ್ದದ ಬೃಹತ್ ಗಾತ್ರದ ಕಾಳಿಂಗ ಸರ್ಪ

ಕಳಸ: ಭತ್ತದ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತರ ಕಣ್ಣಿಗೆ ಸುಮಾರು 12 ಅಡಿ ಉದ್ದದ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಏಕಾಏಕಿ ಗೋಚರಿಸಿದ್ದು, ಸ್ಥಳೀಯರಲ್ಲಿ ಕೆಲಕಾಲ ತೀವ್ರ ಆತಂಕದ ವಾತಾವರಣ ಸೃಷ್ಟಿಯಾಗಿತ್ತು....

ತಂದೆ-ಮಗಳ ಗಾಯನ ಮಾಧುರ್ಯಕ್ಕೆ ಮನಸೋತ ಶ್ರೋತೃಗಳು

ಚಿಕ್ಕಮಗಳೂರು: ನಗರದ ಕುವೆಂಪು ಕಲಾಮಂದಿರದಲ್ಲಿ ಶನಿವಾರ ಸಂಜೆ ಅನುರಣಿಸಿದ ಕರ್ನಾಟಕ ಶಾಸ್ತ್ರೀಯ ಹಾಗೂ ಹರಿದಾಸ ಸಾಹಿತ್ಯದ ಶ್ರೇಷ್ಠ ಗಾಯಕ ಡಾ.ವಿದ್ಯಾಭೂಷಣ ಹಾಗೂ ಅವರ ಪುತ್ರಿ ಮೇಧಾ ವಿದ್ಯಾಭೂಷಣ ಅವರ ಅಮೋಘ ಗಾಯನ...

Related Articles

ಅಧಿಕಾರಿಗಳು ಶೌಚಾಲಯ ನೀಡಲೂ ಜಾತಿ ಕೇಳುತ್ತಾರೆ

ಶೃಂಗೇರಿ: ಮೂಲಸೌಕರ್ಯ ಕಲ್ಪಿಸಬೇಕಾದ ಅಧಿಕಾರಿಗಳು ಶೌಚಾಲಯ ನೀಡಲೂ ಜಾತಿ ಕೇಳುತ್ತಾರೆ ಎಂದರೆ ನಂಬುತ್ತೀರಾ? ಹೌದು, ಇಂತಹದ್ದೊಂದು...

ಪೌರಕಾರ್ಮಿಕರು ಒಳಚರಂಡಿ ಮ್ಯಾನ್‌ಹೋಲ್‌ಗೆ ಇಳಿಯಬಾರದು

ಚಿಕ್ಕಮಗಳೂರು : ನಗರಸಭೆಯ ಯುಜಿಡಿ ಹಾಗೂ ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್‌ಗೆ ಸಂಬಂಧಿಸಿದ ಸುರಕ್ಷತಾ ನಿಯಮಗಳ ಕುರಿತು ನಡೆದ...

ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಯಮವೇ ಅಸ್ತ್ರ

ಚಿಕ್ಕಮಗಳೂರು : ಯುವಜನರು ಮಾದಕವಸ್ತು ಹಾಗೂ ಇತರ ದುಶ್ಚಟಗಳಿಂದ ದೂರವಿದ್ದು, ಸಂಯಮ ಮತ್ತು ಶಿಸ್ತಿನ ಜೀವನವನ್ನು...

ಬಂಟರ ಯಾನೆ ನಾಡವರ ಸಂಘದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

ಚಿಕ್ಕಮಗಳೂರು: ಸಮಾಜದಲ್ಲಿ ದುಡಿದಿದ್ದನ್ನು ಸಮಾಜಕ್ಕೆ ವಿನಿಯೋಗಿಸಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು ಸಾಧ್ಯ ಎಂದು ಉದ್ಯಮಿ...