Home namma chikmagalur ಹಿಂದೂ ಫ್ಯಾಸಿಸ್ಟ್ ನೀತಿ ಸೋಲಿಸಲು ಐಕ್ಯ ಹೋರಾಟ
namma chikmagalurchikamagalurHomeLatest News

ಹಿಂದೂ ಫ್ಯಾಸಿಸ್ಟ್ ನೀತಿ ಸೋಲಿಸಲು ಐಕ್ಯ ಹೋರಾಟ

Share
Share

ಚಿಕ್ಕಮಗಳೂರು: ಹಿಂದೂ ಫ್ಯಾಸಿಸ್ಟ್ ನೀತಿಯನ್ನು ಸೋಲಿಸಲು ಐಕ್ಯ ಹೋರಾಟ ಏಕೈಕ ಮಾರ್ಗವೆಂದು ಸಿಪಿಐ(ಎಂ.ಎಲ್.)ರೆಡ್‌ಸ್ಟಾರ್ ಪಕ್ಷದ ಪಾಲಿಟ್‌ಬ್ಯುರೋ ಕಬೀರ್ ಪ್ರತಿಪಾದಿಸಿದರು.

ನಗರದ ಕುವೆಂಪು ಕಲಾಮಂದಿರದಲ್ಲಿ ಸಿಪಿಐ(ಎಂ.ಎಲ್),ದಲಿತ ಸಂಘಟನೆಗಳ ಒಕ್ಕೂಟ ಸೇರಿದಂತೆ ಜಿಲ್ಲೆಯ ಪ್ರಗತಿಪರ ಸಂಘಟನೆಗಳು ಸಹಯೋಗದಲ್ಲಿ ಶನಿವಾರ ಆರ್.ಎಸ್.ಎಸ್.ಹಿಂದುತ್ವ- ಸಂವಿಧಾನ ಮತ್ತು ಪ್ರಜಾಪ್ರಭುತ್ವ ಕುರಿತು ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಮಾತನಾಡಿ ಫ್ಯಾಸಿಸ್ಟ್ ಶಕ್ತಿಯನ್ನು ಸೋಲಿಸಬೇಕಾದರೆ ನಾವೆಲ್ಲರೂ ಒಂದೇ ವೇದಿಕೆಯಡಿ ಬರಬೇಕಾಗಿದೆ ಎಂದು ಹೇಳಿದರು.

ಕೇರಳದಿಂದ ಪಂಜಾಬ್‌ವರೆಗೆ ಫ್ಯಾಸಿಸ್ ವಿರೋಧಿ ಜನತಾ ಸಮಾವೇಶ ನಡೆಸಲಾಗುತ್ತಿದೆ.ಹೈದರಬಾದ್‌ನಲ್ಲಿ ಡಿ.೬ಕ್ಕೆ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಿಬೇಕಾದರೆ ನಮ್ಮೊಳಗಿರುವ ಸಣ್ಣ,ಪುಟ್ಟ ವಿಚಾರಗಳನ್ನು ಮರೆತು ಒಗ್ಗೂಡಬೇಕಾಗಿದೆ ಎಂದು ತಿಳಿಸಿದರು.

ದೇಶವನ್ನು ವಿಭಜಿಸುವ ಯತ್ನಗಳು ನಡೆಯುತ್ತಿವೆ. ದಾರ್ಶನಿಕರ ಆಶಯಗಳಿಗೆ ಧಕ್ಕೆ ಬಂದೊದಗಿದೆ. ದೇಶದಲ್ಲಿ ಹಣಕಾಸು ಬಂಡವಾಳ ಫ್ಯಾಸಿಸ್ಟ್ ಶಕ್ತಿಯನ್ನು ಮುನ್ನಡೆಸುತ್ತಿದೆ.ಸಂಘ ಪರಿವಾರ ಶಕ್ತಿಗಳಿಗೆ ಹಣಕಾಸು ಬಂಡವಾಳ ಅನುಕೂಲಮಾಡಿಕೊಡುತ್ತಿದೆ.ಕಾರ್ಮಿಕರು ಹೋರಾಟದ ಮೂಲಕ ಪಡೆದ ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ತರಲಾಗಿದೆ.ದುಡಿಯುವ ವರ್ಗದ ಮೇಲೆ ಸವಾರಿ ಮಾಡಲಾಗುತ್ತಿದ್ದು, ಬಂಡವಾಳಿಗರ ಪರವಾಗಿ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.

ಕೃಷಿ ಕ್ಷೇತ್ರವನ್ನು ಬಂಡವಾಳಶಾಹಿಗಳ ಕೈಗೆ ನೀಡಲಾಗಿದೆ. ಕೃಷಿ ಕ್ಷೇತ್ರದ ಮೇಲೆ ದಾಳಿಗಳು ಮುಂದುವರೆದಿದ್ದು, ವ್ಯಾಪಾರಿ ಕ್ಷೇತ್ರವನ್ನು ಅದು ಬಿಟ್ಟಿಲ್ಲ,ಬಹುಸಂಖ್ಯಾತರ ಹೆಸರಿನಲ್ಲಿ ಅಲ್ಪಸಂಖ್ಯಾತರನ್ನು ಹೆದರಿಸುವ ಕೆಲಸ ನಡೆದಿದೆ.ಫ್ಯಾಸಿಸ್ಟ್ ಶಕ್ತಿಗಳು ಬಹುಸಂಖ್ಯಾರನ್ನು ಓಲೈಸಿಕೊಂಡು ಅವರನ್ನು ಅಲ್ಪಸಂಖ್ಯಾತರ ಮೇಲೆ ಎತ್ತಿಕಟ್ಟುವ ಕೆಲಸ ನಡೆದಿದೆ ಎಂದು ಆತಂಕ ವ್ಯಕ್ತಪಡಿಸಿದರು.

ದೇಶದಲ್ಲಿ ಬಹುತ್ವವನ್ನು ಬದಿಗೆ ಸರಿಸಿ, ಹಿಂದೂತ್ವವನ್ನು ಹೇರಲಾಗುತ್ತಿದೆ. ನಿರಂಕುಶ ಆಡಳಿತವನ್ನು ಹೇರುವ ಹವಣಿಕೆ ನಿರಂತರವಾಗಿ ನಡೆಯುತ್ತಿದೆ.ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ತಿರುಚಲಾಗುತ್ತಿದೆ. ಸಂಘಪರಿವಾರದವರು ಸ್ವಾತಂತ್ರ್ಯಹೋರಾಟದಲ್ಲಿ ಸಕ್ರಿಯ ಪಾತ್ರವಹಿಸಿದ್ದರು ಎಂದು ಹಸಿಸುಳ್ಳನ್ನು ಯುವಜನತೆ ತಲೆಗೆ ತುಂಬಲಾಗುತ್ತಿದೆ ಎಂದು ಹೇಳಿದರು.

ಫ್ಯಾಸಿಸ್ಟ್ ಶಕ್ತಿಯನ್ನು ಮಣಿಸಲು, ದೇಶದ ಸಂವಿಧಾನವನ್ನು ರಕ್ಷಿಸಲು ಎಡಪಕ್ಷಗಳು, ಪ್ರಗತಿಪರ ಸಂಘಟನೆಗಳು ಒಗ್ಗೂಡುವ ಮೂಲಕ ಐಕ್ಯ ಹೋರಾಟಕ್ಕೆ ಮುಂದಾಗಬೇಕೆಂದು ಸಿಪಿಐ(ಎಂ.ಎಲ್)ರೆಡ್‌ಸ್ಟಾರ್ ಪಕ್ಷದ ಕೇಂದ್ರ ಸಮಿತಿ ಸದಸ್ಯ ಬಸೀರ್ ಮನವಿ ಮಾಡಿದರು.

ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಜ್ ಪೆಡಂಬೂರು ಮಾತನಾಡಿ, ದೇಶದ ಉಸಿರು ಸಂವಿಧಾನ. ಇಂತಹ ಸಂವಿಧಾನಕ್ಕೆ ಆಪತ್ತು ಬಂದೊದಗಿದೆ. ದೇಶವನ್ನು ಬೇರೆ ದಿಕ್ಕಿಗೆ ಕೊಂಡೊಯ್ಯುವ ಕೆಲಸ ನಡೆದಿದೆ. ದೇಶದಲ್ಲಿ ಆರ್.ಎಸ್.ಎಸ್.ಫ್ಯಾಸಿಸ್ಟ್ ಶಕ್ತಿಯನ್ನು ವಿರೋಧಿಸುವವರು ಒಟ್ಟಾಗಬೇಕಾಗಿದೆ. ಸಂವಿಧಾನದಲ್ಲಿರುವ ಜಾತ್ಯತೀತ, ಸಮಾಜವಾದ ಪದವನ್ನು ತೆಗೆದುಹಾಕಬೇಕೆಂಬ ಒತ್ತಡಗಳು ಬರುತ್ತಿದ್ದು, ಇದಕ್ಕೆ ನಾವುಗಳು ಅವಕಾಶಮಾಡಿಕೊಡಬಾರದೆಂದು ತಿಳಿಸಿದರು.

ಬಿಜೆಪಿ ಸೇರಿದಂತೆ ಸಂಘಪರಿವಾರವನ್ನು ವಿರೋಧಿಸುವವರ ಧ್ವನಿ ಅಡಗಿಸುವ ಕೆಲಸ ದೇಶದಲ್ಲಿ ನಡೆದಿದೆ. ಕೇಂದ್ರ ಸರ್ಕಾರವನ್ನು ಟೀಕಿಸುವವರ ಮೇಲೆ ಯುಎಪಿಎ ಕಾಯ್ದೆಯನ್ನು ಬಳಸುವ ಮೂಲಕ ಅವರುಗಳನ್ನು ಜೈಲಿಗೆ ತಳ್ಳುವ ಕೆಲಸಗಳು ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಇಂತಹವುಗಳಿಗೆ ಅವಕಾಶ ದೊರೆಯದಂತೆ ನೋಡಿಕೊಳ್ಳಬೇಕಾಗಿದೆ ಎಂದು ಹೇಳಿದರು.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ಕೇಂದ್ರ ಸರ್ಕಾರ ಮತ್ತು ಆರ್.ಎಸ್.ಎಸ್. ನೀತಿಯನ್ನು ಟೀಕಿಸುತ್ತಿದ್ದು, ಇವರಿಗೆ ಆ ಪಕ್ಷದ ನಾಯಕರಿಂದ ಬೆಂಬಲ ನೀಡುತ್ತಿಲ್ಲ ಬದ್ಧತೆಯನ್ನು ಪ್ರದರ್ಶಿಸುತ್ತಿಲ್ಲ, ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಇಂತಹ ಕೆಲಸಗಳನ್ನು ನಿರ್ವಹಿಸುತ್ತ ಬಂದಿದ್ದರೆ ಆರ್.ಎಸ್.ಎಸ್.ನವರಿಗೆ ಅಧಿಕಾರ ಹಿಡಿಯುವ ಅವಕಾಶ ದೊರೆಯುತ್ತಿರಲಿಲ್ಲವೆಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಾಹಿತಿ ರವೀಶ್ ಬಸಪ್ಪ,ಬಹುತ್ವದ ಭಾರತವನ್ನು ಉಳಿಸಿಕೊಳ್ಳಬೇಕಾಗಿದೆ. ಮನುಷ್ಯರ ನಡುವೆ ಮುಳ್ಳಿನಬೇಲಿ,ಮ ತಡೆಗೋಡೆಯನ್ನು ನಿರ್ಮಿಸುತ್ತಿದ್ದು, ಇದನ್ನು ಚಿದ್ರಗೊಳಿಸಬೇಕಾಗಿದೆ. ಜೀವಪರವನ್ನು ಗಟ್ಟಿಗೊಳಿಸಬೇಕಾಗಿದ್ದು, ಸತ್ಯದ ಪರವಾಗಿ ಧ್ವನಿಎತ್ತು ಕೆಲಸವಾಗಬೇಕಾಗಿದೆ ಎಂದು ತಿಳಿಸಿದರು.

ದಲಿತ ಸಂಘರ್ಷ ಸಮಿತಿ ರಾಜ್ಯ ಸಮಿತಿ ಸದಸ್ಯ ಮರ್ಲೆ ಅಣ್ಣಯ್ಯ ಪ್ರಾಸ್ತಾವಿಕವಾಗಿ ಮಾತನಾಡಿ,ಸಂವಿಧಾನಕ್ಕೆ ಅಪಾಯದ ಸ್ಥಿತಿಬಂದೊದಗಿದೆ.ಪ್ರಗತಿಪರ ಸಂಘಟನೆಗಳು ಒಗ್ಗೂಡಿ ಹೋರಾಟ ನಡೆಸುವ ಮೂಲಕ ಪ್ರಪಂಚದಲ್ಲಿಯೇ ಉತ್ತಮ ಸಂವಿಧಾನವೆಂದು ಕರೆಸಿಕೊಳ್ಳುವ ಭಾರತ ದೇಶದ ಸಂವಿಧಾನ ರಕ್ಷಣೆಗೆ ಸಂಕಲ್ಪ ತೊಡಬೇಕಾಗಿದೆ ಎಂದು ಹೇಳಿದರು.

ಅಧ್ಯಕ್ಷತೆವಹಿಸಿ ಸಿಪಿಐ(ಎಂ.ಎಲ್.) ರಾಜ್ಯಿಕಾರ್ಯದರ್ಶಿ ಬಿ.ರುದ್ರಯ್ಯ ಮಾತನಾಡಿ, ಆರ್.ಎಸ್.ಎಸ್.ಗೆ ೧೦೦ ವರ್ಷ ತುಂಬಿರುವ ಹಿನ್ನಲೆಯಲ್ಲಿ ಫ್ಯಾಸಿಸ್ಟ್ ವಿರೋಧ ಹೋರಾಟವನ್ನು ತೀವ್ರಗೊಳಿಸಬೇಕಾಗಿದೆ. ಆರ್.ಎಸ್.ಎಸ್. ದೊಡ್ಡ ಸಂಘಟನೆಯಾಗಿದ್ದು ರಾಜ್ಯ, ಜಿಲ್ಲಾಮಟ್ಟದಲ್ಲಿ ದೊಡ್ಡಮಟ್ಟದ ಹೋರಾಟವನ್ನು ತೀವ್ರಗೊಳಿಸಬೇಕಾಗಿದೆ ಎಂದು ಹೇಳಿದರು.

ಆರ್.ಎಸ್.ಎಸ್. ದೊಡ್ಡ ಆತಂಕವಾಗಿ ಸಂಘಟನೆಯಾಗಿದ್ದು,ದೇಶ ಪ್ರೇಮಿಗಳನ್ನು ದೇಶದ್ರೋಹಿಗಳಂತೆ ಚಿತ್ರಿಸಲಾಗುತ್ತಿದೆ.ದೇಶ ಪ್ರೇಮದ ಬಗ್ಗೆ ಮಾತನಾಡುತ್ತಾ,ದೇಶದ ಸೇವಾ ವಲಯವನ್ನು ಕಾರ್ಪೋರೆಟ್ ಶಕ್ತಿಗಳಿಗೆ ಮಾರಾಟ ಮಾಡಲಾಗುತ್ತಿದೆ.ಹಿಂದಿ,ಹಿಂದೂ, ಹಿಂದೂಸ್ತಾನ್ ಘೋಷಣೆ ಮೂಲಕ ಏಕ ಸಂಸ್ಕೃತಿಯನ್ನು ಬಲವಂತವಾಗಿ ಹೇರುವ ಕೆಲಸಕ್ಕೆ ಮುಂದಾಗಿದೆ ಎಂದು ಟೀಕಿಸಿದರು.

ಕಾಂಗ್ರೆಸ್ ಕೆಪಿಸಿಸಿ ವಕ್ತಾರ ದೇವರಾಜ್ ಮಾತನಾಡಿ, ರೈತಸಂಘದ ಮುಖಂಡರಾಗಿದ್ದ ಪ್ರೊ. ನಂಜುಂಡಸ್ವಾಮಿ ಅವರ ಗರಡಿಯಲ್ಲಿ ಸಾಗಿಬಂದವರು.ಜೀವದ ಹಂಗುತೊರೆದು ಆರ್.ಎಸ್.ಎಸ್.ವಿರುದ್ಧ ಹೋರಾಟ ನಡೆಸಲಾಯಿತು.ಬೂಕರ್ ಪ್ರಶಸ್ತಿಪುರಸ್ಕೃತರಾದ ಬಾನುಮಸ್ತಾಕ್ ದಸರಾ ಉದ್ಘಾಟನೆಗೆ ಒಂದು ವರ್ಗ ವಿರೋಧ ವ್ಯಕ್ತಪಡಿಸಿದ್ದು, ಸಾಹಿತಿಯ ಪರವಾಗಿ ನಾವೆಲ್ಲ ಜಿಲ್ಲೆಯಲ್ಲಿ ಧ್ವನಿಎತ್ತಬೇಕಾಗಿತ್ತೆಂದರು.

ರೈತ ಸಂಘದ ಜಿಲ್ಲಾಧ್ಯಕ್ಷ ಡಿ.ಮಹೇಶ್ ಮಾತನಾಡಿ, ಚಿಕ್ಕಂದಿನಲ್ಲೇ ಜಾತಿವ್ಯವಸ್ಥೆಯನ್ನು ವಿರೋಧಿಸಿಕೊಂಡು ಬಂದವರು ನಾವುಗಳು, ನಂಜುಂಡಸ್ವಾಮಿಯವರ ಪ್ರಭಾವಕ್ಕೆ ಒಳಗಾಗಿ ರೈತ ಚಳವಳಿಗೆ ಬಂದಿರುವುದಾಗಿ ತಿಳಿಸಿದರು.

ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ದಂಟರಮಕ್ಕಿ ಶ್ರೀನಿವಾಸ ಮಾತನಾಡಿ, ಆರ್.ಎಸ್.ಎಸ್. ಫ್ಯಾಸಿಸ್ಟ್ ನೀತಿಯನ್ನು ವಿರೋಧಿಸಿಕೊಂಡು ಬಂದವರು. ಶಕ್ತಿಯನ್ನು ಮಣಿಸಬೇಕಾದರೆ ನಾವೆಲ್ಲರೂ ಒಗ್ಗೂಡಿ ಕೆಲಸ ನಿರ್ವಹಿಸಬೇಕಾಗಿದೆ. ನಮ್ಮ ಸಂಘಟನೆಗಳು ಬೇರೆಬೇರೆಯಾಗಿರಬಹುದು. ಬಾವುಗಳು ಒಂದೇ ಸಂವಿಧಾನದ ವಿಷಯ ಬಂದಾಗ ನಾವೆಲ್ಲ ಒಗ್ಗಟ್ಟನ್ನು ಪ್ರದರ್ಶಿಸುತ್ತೇವೆಂದು ಹೇಳಿದರು.ಸಂವಿಧಾನ ಉಳಿಸಿ ಹೋರಾಟ ವೇದಿಕೆ ಮುಖಂಡ ಕೃಷ್ಣಮೂರ್ತಿ ಮಾತನಾಡಿದರು.

ವಿವಿಧಸಂಘಟನೆ ಮುಖಂಡರಾದ ಗುರುಶಾಂತಪ್ಪ, ಗೌಸ್‌ಮೊಹಿಯುದ್ದೀನ್, ಅಂಗಡಿಚಂದ್ರು, ಗಂಗಾಧರ, ಉಮೇಶ್‌ಕುಮಾರ್, ಮಂಜುನಾಥ,ಕೃಷ್ಣಪ್ಪ, ಬೊಗಸೆ ಸಂದೀಪ, ನಾಗೇಶ್, ಹುಲ್ಲೇಮನೆಶಂಕರ್, ಕಾರ್ಮಿಕ ಸಂಘಟನೆಯ ಕೃಷ್ಣಪ್ಪ, ಬಾಚಿಗನಹಳ್ಳಿ ಮಂಜಯ್ಯ, ಹುಣಸೆಮಕ್ಕಿ ಲಕ್ಷ್ಮಣ್, ಛಲವಾದಿ ಸಂಘಟನೆಯ ರಘು, ಎಸ್‌ಡಿಪಿಐ ಗೌಸ್‌ಮುನೀರ್ ಇದ್ದರು. ಹರೀಶ್ ನೆಲ್ಕೆ ನಿರೂಪಿಸಿದರು.

United struggle to defeat Hindu fascist policies

Share

Leave a comment

Leave a Reply

Your email address will not be published. Required fields are marked *

Don't Miss

ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಸಲು ಸೆ.29ರಂದು ಧರಣಿ

ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಫೆಡರೇಶನ್ (AITUC) ವತಿಯಿಂದ ಸೆ.29ರಂದು...

ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಸುಳ್ಳು ಮಾಹಿತಿ ನೀಡಿ ₹2.20 ಲಕ್ಷ ವಂಚನೆ

ಚಿಕ್ಕಮಗಳೂರು: ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ನಲ್ಲಿ ಸುಳ್ಳು ವೈಯಕ್ತಿಕ ಮಾಹಿತಿ ನೀಡಿ ಮದುವೆಯಾಗುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಹಂತ ಹಂತವಾಗಿ *₹2.20 ಲಕ್ಷ ಹಣ ಹಾಗೂ ಮೊಬೈಲ್ ಫೋನ್ ಪಡೆದು ವಂಚಿಸಿರುವ ಆರೋಪ* ಕೇಳಿಬಂದಿದೆ. ಈ...

Related Articles

12 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ಜಿಲ್ಲೆಯ 12...

ಕಳಸದಲ್ಲಿ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷ

ಕಳಸ : ಮನೆಯಂಗಳದಲ್ಲೇ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿ ಸ್ಥಳೀಯರನ್ನು ಬೆಚ್ಚಿಬೀಳಿಸಿದ ಘಟನೆ ಕಳಸ ತಾಲೂಕಿನ...

ಕೆಎಸ್‌ಆರ್‌ಟಿಸಿ ಬಸ್–ಟ್ರ್ಯಾಕ್ಟರ್ ಇಂಜಿನ್ ಡಿಕ್ಕಿಗೆ ಚಾಲಕ ಸಾವು

ತರೀಕೆರೆ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟ್ರ್ಯಾಕ್ಟರ್ ಇಂಜಿನ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಟ್ರ್ಯಾಕ್ಟರ್...

ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಪ್ರಜಾಸೇವ ಆಂದೋಲನದ ಉದ್ದೇಶ

ಚಿಕ್ಕಮಗಳೂರು:  ಜನರ ಸಮಸ್ಯೆಗಳನ್ನು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಒಗ್ಗೂಡಿ ಆಲಿಸಿ, ಸಾಧ್ಯವಾದಷು ಶೀಘ್ರವಾಗಿ ಇತ್ಯರ್ಥ ಪಡಿಸುವ...