Home namma chikmagalur ಸಿ.ಟಿ.ರವಿಯಿಂದ ಮುಖ್ಯಮಂತ್ರಿಗೆ ಬಹಿರಂಗ ಪತ್ರ
namma chikmagalurchikamagalurHomeLatest News

ಸಿ.ಟಿ.ರವಿಯಿಂದ ಮುಖ್ಯಮಂತ್ರಿಗೆ ಬಹಿರಂಗ ಪತ್ರ

Share
Share

ಚಿಕ್ಕಮಗಳೂರು: ಹಿಂದುಳಿದ ವರ್ಗದಿಂದ ನಡೆಸುತ್ತಿರುವ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ಹಲವು ನ್ಯೂನತೆಗಳಿದ್ದು, ಸಮೀಕ್ಷಾ ದಾರರು ಎದುರಿಸುತ್ತಿರುವ ಸವಾಲುಗಳನ್ನು ಮುಖ್ಯಮಂತ್ರಿ ಕೂಡಲೇ ಪರಿಹರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮುಖ್ಯಮಂತ್ರಿಗೆ ಬಹಿರಂಗ ಪತ್ರ ಬರೆದು ಆಗ್ರಹಿಸಿದ್ದಾರೆ.

ಕೆಲವೆಡೆ ಗಣತಿದಾರರಿಗೆ ಸ್ಥಳ ನಿಯುಕ್ತಿ ಸೇರಿ  ಸಮೀಕ್ಷೆಯ ಮಾಹಿತಿ ಸಂಗ್ರಹಿಸಲು ನಿಗದಿಪಡಿಸಿರುವ ಅಪ್ಲಿಕೇಷನ್ ಸರಿಯಾಗಿ ಕಾರ್ಯ ನಿರ್ವಹಿಸದಿರುವುದು ಮತ್ತು ಗುಡ್ಡಗಾಡು ಪ್ರದೇಶದಲ್ಲಿ ನೆಟ್‌ವರ್ಕ್ ಸರಿಯಾಗಿ ಲಭ್ಯವಾಗದೆ ಇರುವುದರಿಂದ ಶಿಕ್ಷಕರು ಸಮಸ್ಯೆಗೆ ಈಡಾಗಿದ್ದಾರೆ. ಸಮೀಕ್ಷೆಗೆ ಸರಿಯಾದ ಪೂರ್ವ ತಯಾರಿ, ಯೋಜನೆ ಮತ್ತು ತಾಂತ್ರಿಕ ವ್ಯವಸ್ಥೆ ರೂಪಿಸಿಲ್ಲ. ಪ್ರಾಯೋಗಿಕವಾಗಿ ನಡೆಸಿ, ಅದರ ಅನುಭವದ ಮೇಲೆ ಸಂಪೂರ್ಣ ಸಮೀಕ್ಷಾ ಕಾರ್ಯವನ್ನು ಆರಂಭಿಸಬೇಕಾಗಿತ್ತು. ಆದರೆ, ಇಲ್ಲಿ ಇದ್ಯಾವುದನ್ನು ಮಾಡಿದಂತೆ ಕಾಣಿಸುತ್ತಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಸಮೀಕ್ಷೆದಾರರು ತಾಂತ್ರಿಕ ಹಾಗೂ ಪ್ರಾಯೋಗಿಕ ತೊಂದರೆಗಳಿಂದ ಗೊಂದಲಕ್ಕೀಡಾಗಿದ್ದಾರೆ. ಸಮೀಕ್ಷೆಯ ಸಮರ್ಪಕ ಪೂರ್ವತಯಾರಿ ಹಾಗೂ ತಾಂತ್ರಿಕ ಸೌಲಭ್ಯಗಳ ಕೊರತೆಯಿಂದ, ನಿರೀಕ್ಷಿತ ರೀತಿಯಲ್ಲಿ ಕಾರ್ಯ ಸಾಗುತ್ತಿಲ್ಲ. ಸಮೀಕ್ಷೆಯಲ್ಲಿ ಮನೆಗಳ ನಿಖರವಾಗಿ ಗುರುತಿಸಿಲ್ಲ. ಕೆಲವೊಮ್ಮೆ ಒಂದೇ ಮನೆಯನ್ನು ಎರಡು ಬಾರಿ ದಾಖಲು ಮಾಡುವ ಪರಿಸ್ಥಿತಿಯೂ ಎದು ರಾಗುತ್ತಿದೆ. ಕೆಲವು ಮನೆಗಳು ತಪ್ಪಿಹೋಗು ತ್ತಿರುವುದು ಕಂಡು ಬಂದಿದೆ. ಮನೆ ಗುರುತಿಸಲು ನೀಡಲಾಗಿರುವ ಯುಎಚ್‌ಐಡಿ ಸಂಖ್ಯೆಯ ಮೂಲಕ ಮಾಹಿತಿ ಹುಡುಕು ವಲ್ಲಿ ತಾಂತ್ರಿಕ ದೋಷ ಕಂಡುಬರುತ್ತಿವೆ. ಇದು ಗಣತಿದಾರರ ಸಮಯ ಮತ್ತು ಶ್ರಮ ವನ್ನು ವ್ಯರ್ಥಗೊಳಿಸುತ್ತಿದೆ ಎಂದಿದ್ದಾರೆ.

ಸಮೀಕ್ಷೆ ಸಂಪೂರ್ಣ ಆನ್‌ಲೈನ್ ಆಗಿರುವುದರಿಂದ ಗುಡ್ಡಗಾಡು ಪ್ರದೇಶಗಳಲ್ಲಿ ನೆಟ್‌ವರ್ಕ್ ಸಮಸ್ಯೆಯಿದೆ. ಒಟಿಪಿ ಸರಿಯಾಗಿ ಬಾರದೆ ಪ್ರಕ್ರಿಯೆ ಸ್ಥಗಿತಗೊಳ್ಳುತ್ತಿದೆ. ಪ್ರತಿಯೊಂದು ಮನೆಯ ಸಮೀಕ್ಷೆಗೆ 60 ಪ್ರಶ್ನೆಗಳನ್ನು ಕಡ್ಡಾಯಗೊಳಿಸಿರುವುದು ಸಮೀಕ್ಷೆದಾರರ ಮೇಲೆ ಅತಿಯಾದ ಹೊರೆಯಾಗಿದೆ. ಇದರಿಂದ ಮಾಹಿತಿದಾರರಿಗೂ ಬೇಸರ ಉಂಟಾಗಿದೆ. ಒಂಟಿ ಮಹಿಳಾ ಸಿಬ್ಬಂದಿ ಸಮೀಕ್ಷಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ವೇಳೆ ಸುರಕ್ಷತೆ ಹಾಗೂ ಸಾಮಾಜಿಕ ಮುಜುಗರದ ಸಮಸ್ಯೆಗಳು ಎದುರಾಗುತ್ತಿವೆ. ಕೂಡಲೇ ಪರಿಹರಿಸ ಬೇಕು ಎಂದು ಒತ್ತಾಯಿಸಿದ್ದಾರೆ.

Open letter from C.T. Ravi to the Chief Minister

Share

Leave a comment

Leave a Reply

Your email address will not be published. Required fields are marked *

Don't Miss

ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಸಲು ಸೆ.29ರಂದು ಧರಣಿ

ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಫೆಡರೇಶನ್ (AITUC) ವತಿಯಿಂದ ಸೆ.29ರಂದು...

ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಸುಳ್ಳು ಮಾಹಿತಿ ನೀಡಿ ₹2.20 ಲಕ್ಷ ವಂಚನೆ

ಚಿಕ್ಕಮಗಳೂರು: ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ನಲ್ಲಿ ಸುಳ್ಳು ವೈಯಕ್ತಿಕ ಮಾಹಿತಿ ನೀಡಿ ಮದುವೆಯಾಗುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಹಂತ ಹಂತವಾಗಿ *₹2.20 ಲಕ್ಷ ಹಣ ಹಾಗೂ ಮೊಬೈಲ್ ಫೋನ್ ಪಡೆದು ವಂಚಿಸಿರುವ ಆರೋಪ* ಕೇಳಿಬಂದಿದೆ. ಈ...

Related Articles

12 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ಜಿಲ್ಲೆಯ 12...

ಕಳಸದಲ್ಲಿ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷ

ಕಳಸ : ಮನೆಯಂಗಳದಲ್ಲೇ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿ ಸ್ಥಳೀಯರನ್ನು ಬೆಚ್ಚಿಬೀಳಿಸಿದ ಘಟನೆ ಕಳಸ ತಾಲೂಕಿನ...

ಕೆಎಸ್‌ಆರ್‌ಟಿಸಿ ಬಸ್–ಟ್ರ್ಯಾಕ್ಟರ್ ಇಂಜಿನ್ ಡಿಕ್ಕಿಗೆ ಚಾಲಕ ಸಾವು

ತರೀಕೆರೆ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟ್ರ್ಯಾಕ್ಟರ್ ಇಂಜಿನ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಟ್ರ್ಯಾಕ್ಟರ್...

ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಪ್ರಜಾಸೇವ ಆಂದೋಲನದ ಉದ್ದೇಶ

ಚಿಕ್ಕಮಗಳೂರು:  ಜನರ ಸಮಸ್ಯೆಗಳನ್ನು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಒಗ್ಗೂಡಿ ಆಲಿಸಿ, ಸಾಧ್ಯವಾದಷು ಶೀಘ್ರವಾಗಿ ಇತ್ಯರ್ಥ ಪಡಿಸುವ...