Home ಶಾಸಕ ಟಿ.ಡಿ.ರಾಜೇಗೌಡರ ನಿವಾಸದ ಮೇಲೆ ಲೋಕಯುಕ್ತ ದಾಳಿ
HomechikamagalurLatest Newsnamma chikmagalur

ಶಾಸಕ ಟಿ.ಡಿ.ರಾಜೇಗೌಡರ ನಿವಾಸದ ಮೇಲೆ ಲೋಕಯುಕ್ತ ದಾಳಿ

Share
Share

ಶೃಂಗೇರಿ:  ಕ್ಷೇತ್ರದ ಶಾಸಕರಾದ ಟಿ. ಡಿ. ರಾಜೇಗೌಡರ ಬಾಸಪುರದ ನಿವಾಸದ ಮೇಲೆ ಬೆಳಗ್ಗೆ ಲೋಕಯುಕ್ತ ದಾಳಿ ನಡೆಸಿ ತನಿಖೆ ಮಾಡುತ್ತಿದ್ದಾರೆ.

ಬಿಜೆಪಿಯ ದಿನೇಶ್ ಎಂಬುವವರು ಲೋಕಯುಕ್ತದವರಿಗೆ ಶಾಸಕ ರಾಜೇಗೌಡ ಅಕ್ರಮವಾಗಿ ಆಸ್ತಿ ಸಂಪಾದಿಸಿದ್ದಾರೆ ಎಂದು ದೂರು ಸಲ್ಲಿಸಿದ್ದು ಇದಕ್ಕೆ ಲೋಕಯುಕ್ತದವರು ಯಾವ ಉತ್ತರವನ್ನು ಒದಗಿಸಿಲ್ಲ ಎಂದು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿದ್ದರ ಹಿನ್ನೆಲೆಯಲ್ಲಿ ತಕ್ಷಣ ಎಫ್.ಐ.ಆರ್.ದಾಖಲಿಸಿ ತನಿಖೆ ನಡೆಸುವಂತೆ ಆದೇಶ ಮಾಡಿದ್ದರಿಂದ ಇಂದು ಲೋಕಯುಕ್ತ ದಾಳಿ ನಡೆದಿದೆ ಎನ್ನಲಾಗಿದೆ.

ಹಾಸನದ ಲೋಕಯುಕ್ತ ಎಸ್.ಪಿ.ಸ್ನೇಹ ನೇತೃತ್ವದಲ್ಲಿ ನಾಲ್ಕು ವಾಹನಗಳಲ್ಲಿ ಬಂದಿರುವ ಅಧಿಕಾರಿಗಳ ತಂಡ ಬೆಳಗ್ಗೆ ದಾಳಿ ನಡೆಸಿ ದಾಖಾಲೆಗಳ ಪತ್ತೆಗಾಗಿ ಹುಡುಕಾಟ ನಡೆಸಿದೆ ಎನ್ನಲಾಗಿದೆ.

ಚುನಾವಣೆ ಮತ್ತು ಪ್ರತಿವರ್ಷವೂ ಲೋಕಯುಕ್ತದವರಿಗೆ ನೀಡುವ ಲೆಕ್ಕಪತ್ರಕ್ಕಿಂತ ಅಧಿಕ ಹಣದ ವ್ಯವಹಾರ ನಡೆದಿದೆ ನೂರ ಇಪ್ಪತ್ತು ಕೋಟಿಯಷ್ಟು ವ್ಯವಹಾರ ನಡೆದಿದೆ ಎಂದು ದೂರಲಾಗಿದೆ.

ಟಿ.ಡಿ.ರಾಜೇಗೌಡ ಮತ್ತು ಅವರ ಪತ್ನಿ ಪುಷ್ಪ ಹಾಗೂ ಪುತ್ರ ರಾಜ್ ದೇವ್ ಮೇಲೆ ದೂರುದಾಖಲಾಗಿದ್ದು ಲೋಕಯುಕ್ತದ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದು ವಿದೇಶದಲ್ಲಿ ಇರುವ ಮಗನನ್ನು ತಕ್ಷಣ ವಾಪಸ್ ಬರುವಂತೆ ತಿಳಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Lokayukta raids MLA T.D. Rajegowda’s residence

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು ತಾಲೂಕು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೆ ಆಗ್ರಹ

ಚಿಕ್ಕಮಗಳೂರು: ಈ ಬಾರಿಯ ಮುಂಗಾರು ಅವಧಿಯಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಕೃಷಿ, ತೋಟಗಾರಿಕೆ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗುವ ಆತಂಕವಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು...

ಕಡೂರು ಬಸ್ ನಿಲ್ದಾಣದಲ್ಲಿ 50 ಗ್ರಾಂ ತೂಕದ ಚಿನ್ನದ ಸರ ಕಳ್ಳತನ

ಕಡೂರು: ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಕಳ್ಳರ ಗ್ಯಾಂಗ್ ಒಂದು, ಬಸ್ ಹತ್ತುವ ವೇಳೆ ಮಹಿಳೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಬರೋಬ್ಬರಿ 50 ಗ್ರಾಂ ತೂಕದ ಚಿನ್ನದ ಸರವನ್ನು ಕ್ಷಣಾರ್ಧದಲ್ಲಿ ಎಗರಿಸಿ...

Related Articles

ಕೋಟ್ಯಂತರ ರೂಪಾಯಿ ವಂಚಿಸಿದ ನಕಲಿ ಲೇಡಿ ಪಿಎಸ್‌ಐ ಬಂಧನ

ಚಿಕ್ಕಮಗಳೂರು: ತಾನು ಬೆಂಗಳೂರಿನ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಎಂದು ನಂಬಿಸಿ, ಚಿನ್ನ, ಹಣ, ಮೊಬೈಲ್ ಹಾಗೂ ಕಾರು...

ನಲಪಾಡ್ ಹೇಳಿಕೆ ಖಂಡಿಸಿ ಜೆಡಿಎಸ್ ಅಲ್ಪಸಂಖ್ಯಾತ ಘಟಕ ಆಕ್ರೋಶ

ಚಿಕ್ಕಮಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯ ಯುವ ಘಟಕದ...

ಮಳಲೂರು ಏತ ನೀರಾವರಿ ಯೋಜನೆ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಅನುಷ್ಠಾನ ಮತ್ತು ಅರಸನ ನಾಲೆ ಪುನಶ್ಚೇತನ ಯೋಜನೆಗಳ ಕಾಮಗಾರಿಗಳಿಗೆ ಉಂಟಾಗಿರುವ...

2ಬಿ ಮೀಸಲಾತಿ ಮರುಸ್ಥಾಪನೆಗೆ ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಚಿಕ್ಕಮಗಳೂರು: ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತಿದ್ದ ಶೇ.4ರಷ್ಟು 2ಬಿ ಮೀಸಲಾತಿಯನ್ನು ಮರುಸ್ಥಾಪಿಸಲು ರಾಜ್ಯ ಸರ್ಕಾರ ಕೂಡಲೇ...