Home namma chikmagalur ಬಯಲು ಸೀಮೆಯ ರೈತರ ಸಹಾಯಕ್ಕೆ ಶಾಶ್ವತ ನೀರಾವರಿ ಯೋಜನೆ ರೂಪಿಸಬೇಕು
namma chikmagalurchikamagalurHomeLatest News

ಬಯಲು ಸೀಮೆಯ ರೈತರ ಸಹಾಯಕ್ಕೆ ಶಾಶ್ವತ ನೀರಾವರಿ ಯೋಜನೆ ರೂಪಿಸಬೇಕು

Share
Share

ಚಿಕ್ಕಮಗಳೂರು: ತಾಲೂಕಿನ ಅಂಬಳೆ, ಲಕ್ಯಾ, ಸಖರಾಯಪಟ್ಟಣ ಭಾಗಗಳು ಸೇರಿದಂತೆ ಜಿಲ್ಲೆಯ ಬಯಲು ಸೀಮೆಯ ರೈತರ ಬದುಕನ್ನು ಹಸನು ಮಾಡುವ ನಿಟ್ಟಿನಲ್ಲಿ ಆ ಭಾಗಕ್ಕೆ ಶಾಶ್ವತ ನೀರಾವರಿ ಯೋಜನೆಯನ್ನು ರೂಪಿಸಬೇಕು ಎಂದು ಕೆ ಪಿ ಸಿ ಸಿ ವಕ್ತಾರ ಹೆಚ್.ಹೆಚ್.ದೇವರಾಜ್ ಒತ್ತಾಯಿಸಿದರು.

ಕ್ಯಾತನಬೀಡು ಪ್ರತಿಷ್ಠಾನ ಹೊನ್ನ ಬಿತ್ತೇವು ಹೊಲಕೆಲ್ಲಾ ಕಾರ್ಯಕ್ರಮದಡಿ ತಾಲೂಕಿನ ಚಿಕ್ಕಗೌಜ ಗ್ರಾಮದಲ್ಲಿ ಸೋಮವಾರ ಏರ್ಪಡಿಸಿದ್ದ ವರ್ತಮಾನದ ಕೃಷಿ ಬಿಕ್ಕಟ್ಟುಗಳ ಕುರಿತ ಚರ್ಚೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ಬಯಲು ಭಾಗ ಸದಾ ಮಳೆ ಕೊರತೆಯನ್ನು ಎದುರಿಸುತ್ತದೆ, ಹಾಗಾಗಿ ಮಳೆಯನ್ನೇ ನಂಬಿ ಬದುಕುತ್ತಿರುವ ಅಲ್ಲಿನ ರೈತರು, ಕೃಷಿಕರು, ಬರಗಾಲದ ನೆರಳಿನಲ್ಲ್ಲೇ ಬದುಕುತ್ತಿದ್ದಾರೆ, ಮಳೆ ಇಲ್ಲದೇ ಬೆಳೆ ನಷ್ಟ ಅನುಭವಿಸುತ್ತಿದ್ದಾರೆ, ಕುಡಿಯುವ ನೀರಿಗೂ ಪರದಾಡುತ್ತಿದ್ದಾರೆ, ಹಾಗಾಗಿ ಆ ಭಾಗಕ್ಕೆ ಶಾಶ್ವತ ನೀರಾವರಿ ಯೋಜನೆಯನ್ನು ರೂಪಿಸಬೇಕು, ಆ ಮೂಲಕ ರೈತರ ಭೂಮಿಗೆ, ಮನೆಗಳಿಗೆ ನೀರು ನೀಡುವ ಕೆಲಸವನ್ನು ಮಾಡಬೇಕು ಎಂದು ಆಗ್ರಹಿಸಿದರು.

ಬಯಲು ಭಾಗದ ರೈತರು ತಮ್ಮ ಸಮಸ್ಯೆಗಳ ನಿವಾರಣೆ ಮತ್ತು ಹಕ್ಕಿಗಾಗಿ ಹೋರಾಟ ನಡೆಸಬೇಕು ಎಂದು ಸಲಹೆ ಮಾಡಿದರು. ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಕಲ್ಮರುಡಪ್ಪ ಮಾತನಾಡಿ ರೈತರ ಬದುಕು ಹಸನಾಗಬೇಕಾದರೆ ಸರ್ಕಾರ ಬೆಳೆ ನೀತಿ, ಬೆಲೆ ನೀತಿ ಜಾರಿಗೆ ತರಬೇಕು, ರೈತರ ಬೆಳೆಗಳಿಗೆ ಸರಿಯಾದ ಬೆಲೆ ನಿಗದಿಪಡಿಸಬೇಕು ಎಂದು ಹೇಳಿದರು.

ಸದಾ ಬರಗಾಲದ ನೆರಳಿನಲ್ಲಿರುವ ಲಕ್ಯಾ ಭಾಗಕ್ಕೆ ನೀರಾವರಿ ಯೋಜನೆ ರೂಪಿಸಬೇಕು ಎಂದು ಒತ್ತಾಯಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರೈತ ಸಂಘದ ಮಾಜಿ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಭೂಮಿಯಲ್ಲಿನ ಫಲವತ್ತತೆಯನ್ನು ಹೆಚ್ಚಿಸುವುದರ ಜೊತೆಗೆ ಮುಂದಿನ ಪೀಳಿಗೆಗೆ ಕೃಷಿ ಭೂಮಿಯನ್ನು ಉಳಿಸುವ ನಿಟ್ಟಿನಲ್ಲಿ ರೈತರು ರಾಸಾಯನಿಕ ಕೃಷಿಯನ್ನು ಬಿಟ್ಟು ಪರ್ಯಾಯ ಕೃಷಿಯತ್ತ ವಾಲಬೇಕು ಎಂದು ಸಲಹೆ ಮಾಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕ್ಯಾತನ ಬೀಡು ಪ್ರತಿಷ್ಠಾನದ ಕಾರ್ಯದರ್ಶಿ ರವೀಶ್ ಕ್ಯಾತನಬೀಡು, ರೈತರು, ಕೃಷಿಕರ ಮನೆಮನೆಗೆ ತೆರಳಿ ಅವರ ಕಷ್ಟ ಸುಖ, ಸಮಸ್ಯೆಗಳನ್ನು ವಿಚಾರಿಸುವುದರ ಜೊತೆಗೆ ಅವುಗಳ ಬಗ್ಗೆ ಚರ್ಚಿಸಿ, ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಕ್ಯಾತನ ಬಿಡು ಪ್ರತಿಷ್ಠಾನ ಕಳೆದ ೩೦ ವರ್ಷಗಳಿಂದ ನಿರಂತರವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು, ರೈತಪರ, ಜನಪರ ಹೋರಾಟಗಳನ್ನು ನಡೆಸುತ್ತಾ ಬಂದಿದೆ, ಎಂದ ಅವರು ದಾಸರಹಳ್ಳಿ ಕೆರೆಯ ನೀರನ್ನು ಶುದ್ಧೀಕರಿಸಿ ಬಿಡಬೇಕು, ಕೆರೆಯನ್ನು ಅಭಿವೃದ್ಧಿಪಡಿಸಬೇಕು, ಆ ನಿಟ್ಟಿನಲ್ಲಿ ಸ್ಥಳೀಯ ರೈತರು ಹೋರಾಟಕ್ಕೆ ಮುಂದಾಗಬೇಕು ಎಂದು ಹೇಳಿದರು.

ಕ್ಯಾತನಬೀಡು ಪ್ರತಿಷ್ಠಾನದ ಕಾರ್ಯಕ್ರಮ ಸಂಯೋಜಕ, ಸಾಹಿತಿ, ಡಿ.ಎಂ.ಮಂಜುನಾಥ ಸ್ವಾಮಿ, ಪತ್ರಕರ್ತ ಎನ್.ರಾಜು, ರೈತ ಸಂಘದ ಜಿಲ್ಲಾಧ್ಯಕ್ಷ ಮಹೇಶ್, ಉದ್ಯಮಿ ಶ್ರೀನಿವಾಸ್, ಗ್ರಾಪಂ ಸದಸ್ಯ ಸುರೇಶ್, ಪಿಳ್ಳೇನಹಳ್ಳಿ ವಿಜಯಕುಮಾರ್, ಮುಖಂಡರಾದ ಚಂದ್ರೇಗೌಡ, ನಾಗೇಗೌಡ, ಹಾಲಪ್ಪ, ಚಂದ್ರಮ್ಮ, ಚನ್ನೇಗೌಡ, ಪ್ರಗತಿಪರ ಕೃಷಿಕ ಮಾಸ್ತೇಗೌಡ, ಸಿ.ಎಚ್.ರವಿ ಜಾನಸಾಲೆ, ಅಹಿಂದ ಜಿಲ್ಲಾಧ್ಯಕ್ಷ ತ್ರಿಭುವನ್, ಲಿಂಗೇಗೌಡ, ಗಂಗಯ್ಯ, ದೇವೇಗೌಡ ಉಪಸ್ಥಿತರಿದ್ದರು.

A permanent irrigation scheme should be devised to help farmers in the plains.

 

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು ತಾಲೂಕು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೆ ಆಗ್ರಹ

ಚಿಕ್ಕಮಗಳೂರು: ಈ ಬಾರಿಯ ಮುಂಗಾರು ಅವಧಿಯಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಕೃಷಿ, ತೋಟಗಾರಿಕೆ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗುವ ಆತಂಕವಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು...

ಕಡೂರು ಬಸ್ ನಿಲ್ದಾಣದಲ್ಲಿ 50 ಗ್ರಾಂ ತೂಕದ ಚಿನ್ನದ ಸರ ಕಳ್ಳತನ

ಕಡೂರು: ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಕಳ್ಳರ ಗ್ಯಾಂಗ್ ಒಂದು, ಬಸ್ ಹತ್ತುವ ವೇಳೆ ಮಹಿಳೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಬರೋಬ್ಬರಿ 50 ಗ್ರಾಂ ತೂಕದ ಚಿನ್ನದ ಸರವನ್ನು ಕ್ಷಣಾರ್ಧದಲ್ಲಿ ಎಗರಿಸಿ...

Related Articles

ಕೋಟ್ಯಂತರ ರೂಪಾಯಿ ವಂಚಿಸಿದ ನಕಲಿ ಲೇಡಿ ಪಿಎಸ್‌ಐ ಬಂಧನ

ಚಿಕ್ಕಮಗಳೂರು: ತಾನು ಬೆಂಗಳೂರಿನ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಎಂದು ನಂಬಿಸಿ, ಚಿನ್ನ, ಹಣ, ಮೊಬೈಲ್ ಹಾಗೂ ಕಾರು...

ನಲಪಾಡ್ ಹೇಳಿಕೆ ಖಂಡಿಸಿ ಜೆಡಿಎಸ್ ಅಲ್ಪಸಂಖ್ಯಾತ ಘಟಕ ಆಕ್ರೋಶ

ಚಿಕ್ಕಮಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯ ಯುವ ಘಟಕದ...

ಮಳಲೂರು ಏತ ನೀರಾವರಿ ಯೋಜನೆ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಅನುಷ್ಠಾನ ಮತ್ತು ಅರಸನ ನಾಲೆ ಪುನಶ್ಚೇತನ ಯೋಜನೆಗಳ ಕಾಮಗಾರಿಗಳಿಗೆ ಉಂಟಾಗಿರುವ...

2ಬಿ ಮೀಸಲಾತಿ ಮರುಸ್ಥಾಪನೆಗೆ ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಚಿಕ್ಕಮಗಳೂರು: ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತಿದ್ದ ಶೇ.4ರಷ್ಟು 2ಬಿ ಮೀಸಲಾತಿಯನ್ನು ಮರುಸ್ಥಾಪಿಸಲು ರಾಜ್ಯ ಸರ್ಕಾರ ಕೂಡಲೇ...