Home namma chikmagalur ನಕಲಿ ವೆಬೈಟ್ ತೆರೆದು ಕೋಟ್ಯಾಂತರ ರೂಪಾಯಿ ವಂಚನೆ
namma chikmagalurchikamagalurCrime NewsHomeLatest News

ನಕಲಿ ವೆಬೈಟ್ ತೆರೆದು ಕೋಟ್ಯಾಂತರ ರೂಪಾಯಿ ವಂಚನೆ

Share
Share

ಚಿಕ್ಕಮಗಳೂರು : ರಾಜ್ಯದ ಪ್ರತಿಷ್ಠಿತ ದೇವಾಲಯಗಳ ಹೆಸರಿನಲ್ಲಿ ನಕಲಿ ವೆಬೈಟ್ ತೆರೆದು ಕೋಟ್ಯಾಂತರ ರೂಪಾಯಿ ವಂಚನೆ ಎಸಗುತ್ತಿದ್ದ ತೆಲಂಗಾಣ ಮೂಲದ ಇಬ್ಬರು ಆರೋಪಿಗಳನ್ನು ಇದೀಗ ಚಿಕ್ಕಮಂಗಳೂರು ಸೆನ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ, ಶೃಂಗೇರಿ ಮಠ ಸೇರಿದಂತೆ ರಾಜ್ಯದ ಪ್ರತಿಷ್ಠಿತ ದೇವಾಲಯಗಳ ಪ್ರಸಾದ, ಪೂಜ್ಯ ಹೆಸರಲ್ಲಿ ಈ ಇಬ್ಬರು ಆರೋಪಿಗಳು ನಕಲಿ ವೆಬೈಟ್ ಓಪನ್ ಮಾಡಿ, ಹಣ ಪಡೆದು ವಂಚನೆ ಎಸಗುತ್ತಿದ್ದರು.

ಹಣ ಪಡೆದು ವಂಚನೆ ಎಸಗುತ್ತಿದ್ದ ತೆಲಂಗಾಣದ ಮೂಲದ ಇಬ್ಬರು ಆರೋಪಿಗಳನ್ನ ಅರೆಸ್ಟ್ ಮಾಡಲಾಗಿದೆ. ತೆಲಂಗಾಣ ಮೂಲದ ಸುದೀಪ್ ಮತ್ತು ಅನಿಲ್ ಕುಮಾರ್ ಬಂಧಿತ ಆರೋಪಿಗಳು.

ಚಿಕ್ಕಮಗಳೂರು ಸೆನ್ ಪೊಲೀಸ್ ಠಾಣೆ ಡಿವೈಎಸ್ಪಿ ನೇತೃತ್ವದಲ್ಲಿ ಅರೆಸ್ಟ್ ಮಾಡಲಾಗಿದೆ. www.devaraseve.com ಹೆಸರಿನಲ್ಲಿ ಪ್ರತಿಷ್ಠಿತ ದೇವಾಲಯಗಳ ಹೆಸರು ಬಳಕೆ ಮಾಡುತ್ತಿದ್ದರು. ರಾಜ್ಯ ಮತ್ತು ದೇಹದ ಪ್ರತಿಷ್ಠಿತ ದೇಗುಲಗಳ ಬಗ್ಗೆ ವೆಬ್ಬೆಟ್ನಲ್ಲಿ ಪೋಸ್ಟ್ ಹಂಚಿಕೊಳ್ಳುತ್ತಿದ್ದು, ವಿಶೇಷ ಪೂಜೆ, ಪ್ರಸಾದ ಮತ್ತು ವಿಶೇಷ ಸೇವೆ ಹೆಸರಿನ ಲಿಂಕ್ ಅಲ್ಲಿ ವಂಚನೆ ಎಸಗುತ್ತಿದ್ದರು.

ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದ ಹೆಸರಿನಲ್ಲಿ ಕೂಡ ಹಣ ಪಡೆದು ವಂಚನೆ ವಂಚನೆಯ ಬಗ್ಗೆ ಹೊರನಾಡು ದೇವಾಲಯಕ್ಕೆ ನಿರಂತರವಾಗಿ ದೂರು ಬಂದ ಹಿನ್ನೆಲೆಯಲ್ಲಿ ನಕಲಿ ವೆಟ್ ಸಂಬಂಧಪಟ್ಟ ಕಳೆದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಹೊರನಾಡು ದೇವಾಲಯದ ಉಪ ವ್ಯವಸ್ಥಾಪಕರ ರಾಘವೇಂದ್ರ ಅವರು ದೂರು ದಾಖಲಿಸಿದ್ದರು. ಚಿಕ್ಕಮಗಳೂರು ಎಸ್ ಪಿ ವಿಕ್ರಮ್ ಅವರು ವಿಶೇಷ ತಂಡ ರಚಿಸಿದ್ದರು.

Fraud of crores of rupees by opening a fake website

Share

Leave a comment

Leave a Reply

Your email address will not be published. Required fields are marked *

Don't Miss

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ-ಜಿಲ್ಲಾಧಿಕಾರಿ

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇದೇ ಮಾರ್ಚ್ ೧೮ ರಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು. ಜಿ.ಪಂ.ನ ಅಬ್ದುಲ್...

ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್‌ಗೆ ಕೊರತೆ ಇಲ್ಲ

ಚಿಕ್ಕಮಗಳೂರು, ಮಾ.೧೩: ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆಬಾಗಿಲಿಗೆ ಸರಬರಾಜು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ...

Related Articles

ವಿದ್ಯುತ್ ಸ್ಪರ್ಶಕ್ಕೆ ಯುವಕನ ಧಾರುಣ ಸಾವು

ಅಜ್ಜಂಪುರ: ವಿದ್ಯುತ್ ಸ್ಪರ್ಶದಿಂದ ಪ್ರವೀಣ್ ಎಂಬ ಯುವಕ ಮೃತಪಟ್ಟಿದ್ದಾನೆ ಸೊಕ್ಕೆ ಪರಮೇಶಣ್ಣ ಅವರ ಮಗ. ಹೆಬ್ಬೂರು...

ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಮನಸೋಇಚ್ಛೆ ಹಲ್ಲೆ

ಮೂಡಿಗೆರೆ:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ...

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ 25ಕ್ಕೂ ಹೆಚ್ಚುಕಡೆ ಬೆಂಕಿ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು  ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ...

3.50 ಕೋಟಿ ರೂ ವೆಚ್ಚದ ವಿವಿಧ ರಸ್ತೆಗಳ ಲೋಕಾರ್ಪಣೆ

ಚಿಕ್ಕಮಗಳೂರು:  ಬಡವರ ಬಗ್ಗೆ ಕಾಳಜಿ ಇಲ್ಲದ ಕೇಂದ್ರ ಸರ್ಕಾರ ಧರ್ಮ ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ...