Home State News ಅಭ್ಯರ್ಥಿ ಗರಿಷ್ಠ ವಯೋಮಿತಿಯಲ್ಲಿ ಒಮ್ಮೆ ಅನ್ವಯವಾಗುವಂತೆ 3 ವರ್ಷ ಸಡಿಲಿಕೆ
State News

ಅಭ್ಯರ್ಥಿ ಗರಿಷ್ಠ ವಯೋಮಿತಿಯಲ್ಲಿ ಒಮ್ಮೆ ಅನ್ವಯವಾಗುವಂತೆ 3 ವರ್ಷ ಸಡಿಲಿಕೆ

Share
Share

ಚಿಕ್ಕಮಗಳೂರು:  ರಾಜ್ಯ ಸರ್ಕಾರದ ಎಲ್ಲಾ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಹಲವಾರು ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು ಸಲ್ಲಿಸಿದ ಮನವಿ ಪರಿಗಣಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಅನುಮೋದನೆಯೊಂದಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಪ್ರಕಟಿಸಿದೆ.

ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿಯಾಗುವವರೆಗೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಅಥವಾ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಮುಂದಿನ ಆದೇಶದವರೆವಿಗೂ ಹೊರಡಿಸಬಾರದೆಂದು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಲಾಗಿತ್ತು.

ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಅಗತ್ಯ ಮಾರ್ಪಾಡುಗಳೊಂದಿಗೆ ಅಂಗೀಕರಿಸಿ, ಪರಿಶಿಷ್ಟ ಜಾತಿಯಲ್ಲಿರುವ ೧೦೧ ಜಾತಿಗಳನ್ನು ೫ ಪ್ರವರ್ಗಗಳ ಬದಲಾಗಿ ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು ೩ ಪ್ರವರ್ಗಗಳಾಗಿ ವರ್ಗೀಕರಿಸಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಶೇ.೧೭ ರಷ್ಟು ಮೀಸಲಾತಿಯನ್ನು ಪ್ರವರ್ಗ- ಎ.ರಲ್ಲಿನ ಸಮುದಾಯಗಳಿಗೆ ಶೇ.೬ ರಷ್ಟು, ಪ್ರವರ್ಗ-ಬಿ ರಲ್ಲಿನ ಸಮುದಾಯಗಳಿಗೆ ಶೇ.೬ ರಷ್ಟು ಮತ್ತು ಪ್ರವರ್ಗ – ಸಿ.ರಲ್ಲಿನ ಸಮುದಾಯಗಳಿಗೆ ಶೇ.೫ ರಷ್ಟು ನಿಗದಿಪಡಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ.

ಈ ಹಿಂದೆ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆ ಬಯಸಿ ಅರ್ಜಿಗಳನ್ನು ಸಲ್ಲಿಸಿ ಭಾಗವಹಿಸುವ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಗೆ ಕ್ರಮವಾಗಿ ೨ ವರ್ಷಗಳ ಸಡಿಲಿಕೆ ನೀಡಲು ತೀರ್ಮಾನಿಸಲಾಗಿತ್ತು.

ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳ ಅನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ ೨ ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿತ್ತು. ಆದರೆ ಹಲವಾರು ಜನಪ್ರತಿನಿಧಿಗಳು ಮತ್ತು ಸಂಘ ಸಂಸ್ಥೆಗಳಿಂದ ಮನವಿ ಸಲ್ಲಿಸಿ ರಾಜ್ಯ ಸಿವಿಲ್ ಸೇವೆಗಳಿಗೆ ಮಾಡುವ ನೇರ ನೇಮಕಾತಿಯಲ್ಲಿ ಗರಿಷ್ಠ ವಯೋಮಿತಿಯಲ್ಲಿ ೫ ವರ್ಷಗಳ ಸಡಿಲಿಕೆ ನೀಡುವಂತೆ ಕೋರಲಾಗಿತ್ತು.

ಈ ಮನವಿಗಳನ್ನು ಸರ್ಕಾರವು ಪರಿಶೀಲಿಸಿ ಒಂದು ಬಾರಿಗೆ ಮಾತ್ರ ವಯೋಮಿತಿಯಲ್ಲಿ ೩ ವರ್ಷಗಳ ಸಡಿಲಿಕೆ ನೀಡಲು ತೀರ್ಮಾನಿಸಿ, ದಿನಾಂಕ: ೦೬.೦೯.೨೦೨೫ರ ಆದೇಶ ಹಿಂಪಡೆದು, ಈ ಆದೇಶ ಹೊರಡಿಸಿದ ದಿನಾಂಕದ ನಂತರ ಮುಂದಿನ ದಿನಾಂಕ ೩೧-೧೨-೨೦೨೭ ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ ೩ ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, (ಸೇವಾ ನಿಯಮಗಳು) ಆದೇಶ ಹೊರಡಿಸಿದೆ.

3 years relaxation in the maximum age limit of the candidate applicable once

Share

Leave a comment

Leave a Reply

Your email address will not be published. Required fields are marked *

Don't Miss

ಲಕ್ಯಾ-ಸಖರಾಯಪಟ್ಟಣ ಹೋಬಳಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಇಂಧನ ಸಚಿವ ಮನವಿ

ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಯಾ ಹಾಗೂ ಸಖರಾಯಪಟ್ಟಣ ಹೋಬಳಿಗಳಲ್ಲಿ ರೈತರು ಎದುರಿಸುತ್ತಿರುವ ತೀವ್ರ ವಿದ್ಯುತ್ ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ ಅವರು...

ಬಿರಂಜಿ ಹೊಳೆಯಿಂದ ರೈತಾಪಿ ವರ್ಗದ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು:  ಜಾವಣಿಗೆ ನಾಡಿನ ರೈತರ ಜಮೀನುಗಳಿಗೆ ನೀರು ಹರಿಸುವಲ್ಲಿ ವಿಫಲಗೊ ಂಡಿರುವ ಸರ್ಕಾರದ ಆಡಳಿತ ವ್ಯವಸ್ಥೆ ವಿರುದ್ಧ ಮಂಗಳವಾರ ರೈತ ಸಂಘ- ಹಸಿರುಸೇನೆ ತಾಲ್ಲೂಕು ಘಟ ಕ ಕರೆ ನೀಡಿದ್ಧ ಪ್ರತಿಭಟನೆಯಲ್ಲಿ...

Related Articles

ಮೌಲ್ಯ – ಸೇವೆ ಮರೆತು ಹಣ ದೂಚಲು ಪ್ರಜಾಪ್ರಭುತ್ವದ ಕಗ್ಗೂಲೆ…

ಅದಲು-ಬದಲು ಯಾವ ಪಕ್ಷಗಳಿಗೆ ಸಿದ್ದಾಂತ, ನೈತಿಕತೆ ಇದೆ ಭಾರತದಲ್ಲಿ ಸಾಧ್ಯವಿಲ್ಲ. ಎಲ್ಲಾ ಪಕ್ಷಗಳು ಬೆರಿಕೆಯ ತುರಿಕೆಯಲ್ಲಿವೆ.ಅದರಲ್ಲೂ...

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದ 13 ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ತಮ್ಮ ಸಂಪುಟದ (Cabinet) ಮೊದಲ 13 ಸಚಿವರಿಗೆ ಖಾತೆಯನ್ನು...

ರಾಜ್ಯದಲ್ಲಿ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

ಬೆಂಗಳೂರು: ಡಿಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ 18ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ...