Home namma chikmagalur ದಸರಾ ಬಯಲು ಜಂಗಿ ಕುಸ್ತಿ ಸ್ಪರ್ಧೆಗೆ ಚಾಲನೆ
namma chikmagalurHomeLatest NewsTarikere

ದಸರಾ ಬಯಲು ಜಂಗಿ ಕುಸ್ತಿ ಸ್ಪರ್ಧೆಗೆ ಚಾಲನೆ

Share
Share

ತರೀಕೆರೆ: ಗ್ರಾಮೀಣ ಕ್ರೀಡೆ ಕುಸ್ತಿಯಿಂದ ಯುವ ಜನರಿಗೆ ಸದೃಢ ದೇಹ, ಆರೋಗ್ಯ ಮತ್ತು ಏಕಾಗ್ರತೆ ಹೆಚ್ಚುತ್ತದೆ ಎಂದು ಪಟ್ಟಣದ ಕೀಲು ಮತ್ತು ಮೂಳೆ ತಜ್ಞ ಡಾ.ದೇವರಾಜ್ ಹೇಳಿದರು.

ಪಟ್ಟಣದ ಬಯಲು ರಂಗಮಂದಿರದಲ್ಲಿ ಶ್ರೀಗುರು ರೇವಣಸಿದ್ದೇಶ್ವರ ಕುರುಬರ ಸಮಾಜ, ಶ್ರೀಗುರು ರೇವಣಸಿದ್ದೇಶ್ವರ ಗರಡಿ ಕುಸ್ತಿ ಸಂಘ, ಪುರಸಭೆ ತರೀಕೆರೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ 100ನೇ ವರ್ಷದ ರಾಜ್ಯ ಮಟ್ಟದ ದಸರಾ ಬಯಲು ಜಂಗಿ ಕುಸ್ತಿ ಸ್ಪರ್ಧೆಯಲ್ಲಿ ಮೊದಲನೇ ಕುಸ್ತಿ ಜೋಡಣೆ ನೆರವೇರಿಸಿ ಅವರು ಮಾತನಾಡಿ  ಕ್ರೀಡಾಪಟುಗಳಿಗೆ ಉತ್ತೇಜನ ನೀಡಬೇಕು. ಆಯೋಜಕರು ಮತ್ತು ಸರ್ಕಾರವನ್ನು ಗೌರವಿಸಬೇಕು ಎಂದರು.

ಶ್ರೀಗುರು ರೇವಣಸಿದ್ದೇಶ್ವರ ಕುರುಬರ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಟಿ.ಎಸ್. ರಮೇಶ್ (ಬೈಟು) ಮಾತನಾಡಿ, ಸ್ವಾತಂತ್ರ್ಯ‌ ಪೂರ್ವದಲ್ಲಿ ತರೀಕೆರೆಯನ್ನು ಆಳಿದ ಪಾಳೆಗಾರರು ಈ ಕ್ರೀಡೆಯನ್ನು ನಡೆಸಿಕೊಂಡು ಬರುತ್ತಿದ್ದರು. ಸ್ವಾತಂತ್ರ್ಯ ನಂತರದ ದಿನಗಳಲ್ಲಿ ನಮ್ಮ ಸಮಾಜಕ್ಕೆ ವಹಿಸಿದ್ದು, ಅಂದಿನಿಂದಲೂ ಈ ಕ್ರೀಡೆಗೆ ಮತ್ತು ಹೊರಗಿನಿಂದ ಬರುವ ಕ್ರೀಡಾಪಟುಗಳಿಗೆ ಚ್ಯುತಿ ಬಾರದ ರೀತಿಯಲ್ಲಿ ನಡೆಸಿಕೊಂಡು ಬರುತ್ತಿದ್ದೇವೆ ಎಂದರು.

ಪುರಸಭೆ ಸದಸ್ಯ ಟಿ.ದಾದಾಪೀರ್ ಮಾತನಾಡಿ, ‘ಕುಸ್ತಿ ಶೌರ್ಯದ ಸಂಕೇತ. ಇದನ್ನು ಪಾಳೆಗಾರರ ನಂತರ ಎಲ್ಲಾ ಸಮಾಜದವರ ಸಹಕಾರದಿಂದ ಕುರುಬ ಸಮುದಾಯ ನಡೆಸಿಕೊಂಡು ಬರುತ್ತಿದೆ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಪುರಸಭೆ ಅಧ್ಯಕ್ಷ ವಸಂತಕುಮಾರ್, ಪಾಳೇಗಾರರು ಹಿಂದಿನಿಂದಲೂ ನಡೆಸಿಕೊಂಡು ಬಂದಿರುವ ಕ್ರೀಡೆಯನ್ನು ಪ್ರತಿಯೊಬ್ಬರೂ ಯಶಸ್ವಿಗೊಳಿಸಬೇಕು ಎಂದರು.

ಪುರಸಭಾ ಸದಸ್ಯ  ಟಿ.ಜಿ.ಲೋಕೇಶ್‍ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕುಸ್ತಿಗೆ ಬರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದರ ಸೊಬಗನ್ನು ನಮ್ಮವರು ಉಳಿಸಿಕೊಂಡು ಬರುತ್ತಿದ್ದಾರೆ. ರಾಜ್ಯಮಟ್ಟದ ಈ ಕ್ರೀಡೆಗೆ ಕ್ರೀಡಾಂಗಣ, ಊಟ, ವಸತಿ, ಬಹುಮಾನಗಳು ಮತ್ತು ಇನ್ನಿತರೆ ವ್ಯವಸ್ಥೆಗಳನ್ನು ಒಬ್ಬೊಬ್ಬರು ಒಂದೊಂದು ಜವಾಬ್ದಾರಿ ವಹಿಸಿಕೊಂಡು, ಕ್ರೀಡೆಗೆ ಪ್ರೋತ್ಸಾಹ ನೀಡುತ್ತಿರುವುದರಿಂದ ಕ್ರೀಡೆ ಪ್ರತಿವರ್ಷ ಯಶಸ್ವಿಯಾಗಿ ನಡೆಯುತ್ತಿದೆ ಎಂದರು.

ಪುರಸಭಾ ಉಪಾಧ್ಯಕ್ಷೆ ಪಾರ್ವತಮ್ಮ, ಸಮಿತಿಯ ಗೌರವ ಅಧ್ಯಕ್ಷ ವಗ್ಗಪ್ಪರ ಮಂಜಣ್ಣ, ರಾಜ್ಯ ಮಟ್ಟದ ಮಹಿಳಾ ಕುಸ್ತಿ ಪಟು ಅನುಷಾ ಗಂಗಾಧರ್ ಮಾತನಾಡಿದರು.

ಅಖಾಡದ ಉದ್ಘಾಟನೆಯನ್ನು ತರೀಕೆರೆ ವಲಯ ಅರಣ್ಯ ವಲಯಾಧಿಕಾರಿ ಆಶೀಫ್ ಅಹಮದ್ ನೆರವೇರಿಸಿದರು. ಕುಸ್ತಿ ಸಂಘದ ನಿಕಟಪೂರ್ವ ಅಧ್ಯಕ್ಷ ಜಯಸ್ವಾಮಿ ಕಾರೆ, ದರ್ಶನ್, ರೇವಣ್ಣ, ಭಾಗವಹಿಸಿದ್ದರು. ಸಂಘದ ಉಪಾಧ್ಯಕ್ಷ ಟಿ.ಡಿ.ರವಿಕುಮಾರ್ ಸ್ವಾಗತಿಸಿದರು. ಸುಜೀತ್ ಗುರುದೇವ್ ಪ್ರಾರ್ಥಿಸಿದರು. ನಿವೃತ್ತ ಬಿಇಒ ಸೋಮಶೇಖರಯ್ಯ ನಿರೂಪಿಸಿ ವಂದಿಸಿದರು.

Dasara open-air wrestling competition kicks off

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...