Home namma chikmagalur ಈಜಲು ತೆರಳಿದ್ದ ಅಪ್ರಾಪ್ತ ಬಾಲಕನ ಸಾವು
namma chikmagalurHomeKadurLatest News

ಈಜಲು ತೆರಳಿದ್ದ ಅಪ್ರಾಪ್ತ ಬಾಲಕನ ಸಾವು

Share
Share

ಚಿಕ್ಕಮಗಳೂರು: ಸ್ನೇಹಿತರೊಂದಿಗೆ ಕೆರೆಗೆ ಈಜಲು ತೆರಳಿದ್ದ ಅಪ್ರಾಪ್ತ ಬಾಲಕನೋರ್ವ ಕೆರೆಯಲ್ಲಿ ಮುಳುಗಿ ದಾರುಣ ಅಂತ್ಯ ಕಂಡಿರುವ ಘಟನೆ ಕಡೂರು ತಾಲೂಕಿನ ಅಯ್ಯನಕೆರೆಯಲ್ಲಿ ನಡೆದಿದೆ.

ಮೃತ ಬಾಲಕನನ್ನು ಮಲ್ಲೇನಹಳ್ಳಿ ಸಮೀಪದ ಹೊಸಪೇಟೆ ಗ್ರಾಮದ ರುದ್ರೇಶ್ (೧೬) ಎಂದು ಗುರುತಿಸಲಾಗಿದೆ. ನಾಲ್ವರು ಸ್ನೇಹಿತರೊಂದಿಗೆ ಈಜಲು ಕೆರೆಗೆ ತೆರಳಿದ್ದ ರುದ್ರೇಶ್‌ಗೆ ಈಜುಬರದೆ ನೀರಿನಡಿಯೇ ಸಿಲುಕಿ ಜೀವ ಕಳೆದುಕೊಂಡಿದ್ದಾನೆ. ಜೊತೆಯಿದ್ದ ಮೂವರು ಸ್ನೇಹಿತರು ಸುರಕ್ಷಿತವಾಗಿ ದಡ ಸೇರಿದ್ದಾರೆ.

ಈ ಘಟನೆ ಗಮನಿಸಿದ ಪ್ರವಾಸಿ ಮಿತ್ರರು ತಕ್ಷಣವೇ ಸಖರಾಯಪಟ್ಟಣ ಪೊಲೀಸ್ ಠಾಣೆ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಕಡೂರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಶೋಧ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಕೆರೆಯಿಂದ ಹೊರತೆಗೆದಿದ್ದಾರೆ.

ಈ ಘಟನೆ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದಸರಾ ರಜೆಯ ಸಂತಸದ ನಡುವೆ ಈ ದುರ್ಘಟನೆ ಕುಟುಂಬ ಹಾಗೂ ಸ್ಥಳೀಯರಲ್ಲಿ ವಿಷಾದ ಮೂಡಿಸಿದೆ.

Death of a minor boy who had gone swimming

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...