Home namma chikmagalur ವಿಜಯಪುರ ಬಡಾವಣೆಯಲ್ಲಿ ಮೂಕ ಪ್ರಾಣಿಯ ಮೇಲೆ ವಿಕೃತಿ
namma chikmagalurchikamagalurHomeLatest News

ವಿಜಯಪುರ ಬಡಾವಣೆಯಲ್ಲಿ ಮೂಕ ಪ್ರಾಣಿಯ ಮೇಲೆ ವಿಕೃತಿ

Share
Share

ಚಿಕ್ಕಮಗಳೂರು: ನಗರದ ವಿಜಯಪುರ ಬಡಾವಣೆಯಲ್ಲಿ ಮೂಕ ಪ್ರಾಣಿಯ ಮೇಲೆ ವಿಕೃತಿ ಮೆರೆದ ಘಟನೆ ನಡೆದಿದೆ. ಹಸುವಿನ ಬಾಲಕ್ಕೆ ಸೆಂಟ್ ಸ್ಟೇ ಮಾಡಿ ಬೆಂಕಿ ಹಚ್ಚಿದ ೧೬ ವರ್ಷದ ಬಾಲಕನ ಕೃತ್ಯ ಸ್ಥಳೀಯರಲ್ಲಿ ಆಕ್ರೋಶ ಮೂಡಿಸಿದೆ.

ಸಂಜೆಯ ವೇಳೆ ರಸ್ತೆಯಲ್ಲಿ ಹಸು ನಿಂತಿದ್ದಾಗ, ಅಪ್ರಾಪ್ತ ಬಾಲಕ ತನ್ನ ಕೈಯಲ್ಲಿದ್ದ ಸೆಂಟ್ ಸ್ಟೇಯನ್ನು ಹಸುವಿನ ಬಾಲಕ್ಕೆ ಹೊಡೆದು ಬೆಂಕಿ ಹಚ್ಚಿದ್ದಾನೆ. ಈ ದೃಶ್ಯವನ್ನು ಕಂಡ ಸ್ಥಳೀಯರು ತಕ್ಷಣ ಬಾಲಕನನ್ನು ಹಿಡಿದು ಪೊಲೀಸರಿಗೆ ಕರೆ ಮಾಡಿದ್ದಾರೆ. ಈ ವೇಳೆ ಘಟನೆಯ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಬಾಲಕನ ಹುಚ್ಚಾಟಕ್ಕೆ ಕೋಪಗೊಂಡು ಆತನಿಗೆ ಥಳಿಸಿರುವ ಆರೋಪವು ಕೇಳಿ ಬಂದಿದೆ.

ಘಟನೆಯ ಬಗ್ಗೆ ಮಾಹಿತಿ ದೊರೆತ ಬಸವನಹಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಹಸುವಿನ ಬಾಲಕ್ಕೆ ಬೆಂಕಿ ಹಚ್ಚಿದ ಕುರಿತು ಬಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇನ್ನೊಂದೆಡೆ, ಬಾಲಕನ ತಾಯಿ ತನ್ನ ಮಗನ ಮೇಲೆ ಹಿಂದೂ ಸಂಘಟನೆಯ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆಂದು ಪ್ರತಿದೂರು ನೀಡಿದ್ದು ದೂರು, ಪ್ರತಿದೂರು ಠಾಣೆಯಲ್ಲಿ ದಾಖಲಾಗಿದೆ ಎನ್ನಲಾಗಿದೆ.

ಅಪ್ರಾಪ್ತನಾದ ಬಾಲಕನಿಂದ ಪ್ರಾಣಿಹಿಂಸೆ ನಡೆದಿರುವುದು ನಾಗರಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಸಮಾಜದಲ್ಲಿ ಪ್ರಾಣಿಗಳ ಮೇಲಿನ ಕ್ರೌರ್ಯ ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.ಇಂತಹ ಘಟನೆಗಳನ್ನು ತಡೆಗಟ್ಟಲು ಸಮಾಜ, ಪೋಷಕರು ಹಾಗೂ ಶಿಕ್ಷಣ ಸಂಸ್ಥೆಗಳು ಹೆಚ್ಚಿನ ಜಾಗೃತಿ ಮೂಡಿಸಬೇಕೆಂದು ಸ್ಥಳೀಯರು ತಿಳಿಸಿದ್ದಾರೆ.

ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ತನಿಖೆ ಮುಂದುವರಿಯುತ್ತಿದ್ದು, ಕಾನೂನು ಪ್ರಕ್ರಿಯೆ ಅನುಸಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Mutant animal attacked in Vijayapura Layout

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...