Home namma chikmagalur ಕ್ರೇನ್–ಸ್ಕೂಟರ್ ಡಿಕ್ಕಿ; ಅಂಗನವಾಡಿ ಶಿಕ್ಷಕಿ ಸಾವು
namma chikmagalurchikamagalurCrime NewsHomeLatest News

ಕ್ರೇನ್–ಸ್ಕೂಟರ್ ಡಿಕ್ಕಿ; ಅಂಗನವಾಡಿ ಶಿಕ್ಷಕಿ ಸಾವು

Share
Share

ಮೂಡಿಗೆರೆ: ಚಾಲಕನ ನಿಯಂ ತ್ರಣ ತಪ್ಪಿದ ಕ್ರೇನ್ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನ ಪ್ಪಿದ್ದ ಘಟನೆ ಬುಧವಾರ ಬೆಳಿಗ್ಗೆ  ಪಟ್ಟಣದ ಕಾಲೇಜು ರಸ್ತೆಯಲ್ಲಿ ನಡೆದಿದೆ.

ತಾಲ್ಲೂಕಿನ ಹಳ್ಳದಗಂಡಿ ಗ್ರಾಮದ ಅಂಗನವಾಡಿ ಶಿಕ್ಷಕಿ ಸಂಪ್ರೀತ (21) ಮೃತಪಟ್ಟವರು. ಹೆಸ್ಗಲ್ ಗ್ರಾಮದ ಕಡೆಮಾಡ್ಕಲ್ ಅಂಗನವಾಡಿ ಶಿಕ್ಷಕಿ ಸುಜಾತ (28) ಗಂಭೀರವಾಗಿ ಗಾಯಗೊಂಡಿದ್ದಾರೆ.

ಹೆಸ್ಗಲ್ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಉದ್ಘಾಟನಾ ಸಮಾರಂಭದ ತಯಾರಿ ನಡೆಸಿ, ಬಳಿಕ ಕಾರ್ಯಕ್ರಮಕ್ಕೆ ಕಾಲೇಜು ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ಚಾಲಕನ‌ ನಿಯಂತ್ರಣ ತಪ್ಪಿದ ಕ್ರೇನ್, ಸ್ಕೂಟರ್ ಮೇಲೇರಿದ್ದು ಸ್ಕೂಟರ್‌ನಲ್ಲಿದ್ದ ಸಂಪ್ರೀತ ಕ್ರೇನ್ ಅಡಿಗೆ‌ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಮೃತದೇಹವನ್ನು ಹೊರ ತೆಗೆಯಲು ಹರಸಾಹಸ ಪಡುವಂತಾಯಿತು. ಸ್ಕೂಟರ್ ನಜ್ಜುಗುಜ್ಜಾಗಿದ್ದು, ಗಾಯಗೊಂಡಿರುವ ಸುಜಾತ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತಪಟ್ಟ ಸಂಪ್ರೀತ ಅವರು, ಕೆಲವು ದಿನಗಳ ಹಿಂದೆ ಮನೆ‌ ನಿರ್ಮಿಸಿ ಗೃಹ ಪ್ರವೇಶ ನಡೆಸಿದ್ದರು. ಸುಜಾತ ಹೆಸ್ಗಲ್ ಗ್ರಾ.ಪಂ. ಕರವಸೂಲಿಗಾರ ರವಿ ಅವರ ಪತ್ನಿಯಾಗಿದ್ದು, ಒಂಬತ್ತು ತಿಂಗಳ ಮಗುವಿದೆ. ಆಸ್ಪತ್ರೆ ಆವರಣದಲ್ಲಿ ಸಂಬಂ ಧಿಕರ ಆಕ್ರಂದನ‌ ಮುಗಿಲು ಮುಟ್ಟಿತ್ತು.

Crane-scooter collision; Anganwadi teacher dies

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...