Home Latest News ಅಕ್ರಮವಾಗಿ ಸಾಗುವಾನಿ ಕಡಿತ- ಮೂವರ ಬಂಧನ
Latest NewschikamagalurCrime NewsHomenamma chikmagalur

ಅಕ್ರಮವಾಗಿ ಸಾಗುವಾನಿ ಕಡಿತ- ಮೂವರ ಬಂಧನ

Share
Share

ಕೊಟ್ಟಿಗೆಹಾರ : ಮಲೆನಾಡಿನ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಾಗುವಾನಿ ಮರಗಳನ್ನು ಕತ್ತರಿಸಿ ಸಾಗಿಸುತ್ತಿದ್ದ ಕಳ್ಳರ ಮೇಲೆ ಅರಣ್ಯ ಇಲಾಖೆಯ ಮಿಂಚಿನ ಕಾರ್ಯಾಚರಣೆ ನಡೆದಿದೆ.

ಮೂಡಿಗೆರೆ ಪ್ರಾದೇಶಿಕ ಅರಣ್ಯ ವಲಯದ ಭಾರತಿಬೈಲು ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸುಹಾಸ್ ಅವರ ನೇತೃತ್ವದಲ್ಲಿ ಖಚಿತ ಮಾಹಿತಿ ಆಧರಿಸಿ ನಡೆಸಿದ ದಾಳಿಯಲ್ಲಿ, ಮಾರುತಿ ಓಮ್ನಿ ವಾಹನವನ್ನು ಬೆನ್ನಟ್ಟಿ ತಡೆದು ಪರಿಶೀಲನೆ ನಡೆಸಲಾಗಿದ್ದು, ಅದರಲ್ಲಿ ಅಕ್ರಮವಾಗಿ ಕತ್ತರಿಸಲಾದ ೦೫ ಸಾಗುವಾನಿ ತುಂಡುಗಳು ಪತ್ತೆಯಾದವು.

ಸದ್ಯದ ವಾಹನ ಹಾಗೂ ಸಾಗುವಾನಿ ದಿಮ್ಮಿಗಳನ್ನು ಸರ್ಕಾರದ ಪರವಾಗಿ ಜಪ್ತಿ ಮಾಡಲಾಗಿದ್ದು, ಮೂರು ಮಂದಿ ಆರೋಪಿಗಳನ್ನು ಬಂಧಿಸಿ, ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ಸುಹಾಸ್ ಅವರೊಂದಿಗೆ ಅರಣ್ಯ ರಕ್ಷಕರಾದ ಲಕ್ಷ್ಮಣ, ಗಿರೀಶ್ ಮತ್ತು ಸುಧೀರ್ ಶ್ರಮಿಸಿ, ಯಶಸ್ವಿ ಕಾರ್ಯಾಚರಣೆಗೆ ಕಾರಣರಾದರು.

ಕಾರ್ಯಾಚರಣೆಯ ದಕ್ಷತೆಯನ್ನು ಪರಿಗಣಿಸಿ, ಅರಣ್ಯ ಇಲಾಖೆಯ ವತಿಯಿಂದ ಸುಹಾಸ್ ಹಾಗೂ ಅವರ ತಂಡಕ್ಕೆ ಉತ್ತೇಜನಕಾರಿ ಪ್ರೋತ್ಸಾಹ ಧನ ನೀಡಿ ಗೌರವಿಸಲಾಯಿತು. ಮೂಡಿಗೆರೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆಕರ್ಷ ಹಾಗೂ ವಲಯ ಅರಣ್ಯಾಧಿಕಾರಿ ಮಂಜುನಾಥ ಅವರ ಮಾರ್ಗದರ್ಶನದಲ್ಲಿ ನಡೆದ ಈ ಮಿಂಚಿನ ದಾಳಿ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಸಾಗುವಾನಿ ಕಳ್ಳತನಕ್ಕೆ ತಡೆಯೊಡ್ಡುವಂತೆ ಮಾಡಿದೆ

Three arrested for illegally cutting sago

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...