Home Latest News ಬಾಲಕನ ಸಾವಿನ ಬಗ್ಗೆ ಸಮಗ್ರ ತನಿಖೆಗೆ ದ.ಸಂ.ಸ ಆಗ್ರಹ
Latest NewschikamagalurHomenamma chikmagalur

ಬಾಲಕನ ಸಾವಿನ ಬಗ್ಗೆ ಸಮಗ್ರ ತನಿಖೆಗೆ ದ.ಸಂ.ಸ ಆಗ್ರಹ

Share
Share

ಚಿಕ್ಕಮಗಳೂರು:  ಮೂಡಿಗೆರೆ ತಾಲೂಕು ಬಾನಳ್ಳಿ ಗ್ರಾಮದ ಅಪ್ರಾಪ್ತ ಬಾಲಕನ ಸಾವಿನ ಬಗ್ಗೆ ಸಮಗ್ರ ತನಿಖೆಯಾಗಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಮುಖಂಡ ಮರ್ಲೆ ಅಣ್ಣಯ್ಯ ಆಗ್ರಹಿಸಿದರು.

ಅವರು ಇಂದು ಸಂತ್ರಸ್ಥರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಾನಳ್ಳಿ ಗ್ರಾಮದ ಶಿವಣ್ಣ ಎಂಬುವರ ಪುತ್ರ ೮ನೇ ತರಗತಿಯಲ್ಲಿ ಕಲಿಯುತ್ತಿದ್ದ ಪ್ರೀತಂ ಎಂಬ ಅಪ್ರಾಪ್ತ ಬಾಲಕ ಶಾಲೆಗೆ ಗೈರಾಗಿದ್ದ ಸಮಯದಲ್ಲಿ ರತ್ನಾಕರಗೌಡ ಎಂಬಾತ ಬಾಕನನ್ನು ಬಲವಂತವಾಗಿ ರಮೇಶ್ ಎಂಬುವರ ತೋಟಕ್ಕೆ ಟಿಂಬರ್ ಕೆಲಸಕ್ಕೆ ಕರೆದುಕಂಡು ಹೋಗಿದ್ದಾರೆ.

ಆ ಸಮಯದಲ್ಲಿ ಮರದ ದಿಮ್ಮಿಗಳನ್ನು ಟ್ರ್ಯಾಕ್ಟರ್‌ಗೆ ತುಂಬುವಾಗ ಮರದ ದಿಮ್ಮಿ ಪ್ರೀತಂನ ಮೇಲೆ ಬಿದ್ದು ತೀವ್ರವಾಗಿ ಗಾಯಗೊಂಡ ಆತ ಮೃತಪಟ್ಟಿದ್ದಾನೆ. ಇದು ವಾಸ್ತವ ಸತ್ಯ. ರತ್ನಾಕರಗೌಡ ಎಂಬಾತ ಯಾವುದೇ ಮುನ್ನೆಚ್ಚರಿಕೆ ವಹಿಸದೆ ನಿರ್ಲಕ್ಷ್ಯ ತಾಳಿದ ಪರಿಣಾಮ ಪ್ರೀತಂ ಸಾವಾಗಿದೆ.
ಆದರೆ, ಈ ಸಾವನ್ನು ಮರೆಮಾಚಲು ಪ್ರೀತಂ ಪಿಡ್ಸ್ ಬಂದು ತಲೆ ಸುತ್ತಿ ಬಿದ್ದಿದ್ದಾನೆ ಎಂದು ಕಥೆಕಟ್ಟಿ ಬಾಲಕನ ತಂದೆಗೆ ಮಾಹಿತಿ ತಿಳಿಸಿದ್ದಾರೆ. ಕೂಡಲೇ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ದರೂ ಪ್ರೀತಂ ಬದುಕುಳಿಯಲಿಲ್ಲ ಎಂದು ಹೇಳಿದರು.

ಈ ಪ್ರಕರಣ ಸಂಬಂಧ ಬಣಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ ಈವರೆಗೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಮನಕ್ಕೆ ತಂದಿದ್ದರೂ ಪ್ರಯೋಜನವಾಗಿಲ್ಲ. ಶವ ಪರೀಕ್ಷೆ ವರದಿಯನ್ನು ಕೂಡ ಪೊಲೀಸರು ನಮಗೆ ನೀಡುತ್ತಿಲ್ಲ. ಶಾಲೆಗೆ ಹೋಗುತ್ತಿದ್ದ ನನ್ನ ಅಪ್ರಾಪ್ತ ವಯಸ್ಸಿನ ಮಗನನ್ನು ಬಲವಂತವಾಗಿ ಟಿಂಬರ್ ಕೆಲಸಕ್ಕೆ ಕರೆದುಕೊಂಡು ಹೋಗಿ ಅವನ ಸಾವಿಗೆ ಕಾರಣಕರ್ತರಾಗಿರುವ ಆರೋಪಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರಕರಣ ಸಂಬಂಧ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೂ ದೂರು ನೀಡಿ ಕ್ರಮಕ್ಕೆ ಒತ್ತಾಯಿಸಲಾಗುವುದು ಎಂದು ಮೃತ ಪ್ರೀತಂ, ತಂದೆ ಶಿವಣ್ಣ ಹೇಳಿದರು.

D.S̤.S demands a thorough investigation into the boy’s death

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...