Home Latest News ನಿಷೇಧಿತ ಪಟಾಕಿ ದಾಸ್ತಾನು ಇದ್ದಲ್ಲಿ ಗೋದಾಮು ಮುಟ್ಟುಗೋಲು
Latest NewschikamagalurHomenamma chikmagalur

ನಿಷೇಧಿತ ಪಟಾಕಿ ದಾಸ್ತಾನು ಇದ್ದಲ್ಲಿ ಗೋದಾಮು ಮುಟ್ಟುಗೋಲು

Share
????????????????????????????????????
Share

ಚಿಕ್ಕಮಗಳೂರು:  ದೀಪಾವಳಿ ಹಬ್ಬದ ಆಚರಣೆ ಸಂದರ್ಭದಲ್ಲಿ ಪಟಾಕಿಗಳನ್ನು ಬಳಸುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯವು ನಿರ್ದೇಶಿಸಿರುವ ಅಂಶಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

ಎಲ್ಲ್ಲ ಪಟಾಕಿ ಮಾರಾಟಗಾರರ ಗೋದಾಮುಗಳಲ್ಲಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳ ಉತ್ಪಾದನೆ, ಸಂಗ್ರಹ ಮತ್ತು ಮಾರಾಟವನ್ನು ಮಾಡುತ್ತಿದ್ದಲ್ಲಿ, ಈ ಕೂಡಲೇ ಅದನ್ನು ಪರಿಶೀಲಿಸಿ, ಅಲ್ಲಿ ಹಸಿರು ಪಟಾಕಿಯಲ್ಲದೇ ಇನ್ನಾವುದಾದರೂ ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡಿದ್ದಲ್ಲಿ ಇಡೀ ಗೋದಾಮನ್ನು ಮುಟ್ಟುಗೋಲು ಹಾಕಿಕೊಳ್ಳುವುದು ಹಾಗೂ ಉಲ್ಲಂಘಿಸಿದವರ ವಿರುದ್ಧ ಕಾನೂನು ಪ್ರಕಾರ ತೀವ್ರವಾದ ಕ್ರಮ ಕೈಗೊಳ್ಳಬೇಕೆಂದು ತಿಳಿಸಲಾಗಿದೆ. ಈ ಬಾರಿಯ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹಾಗೂ ಇನ್ನಾವುದೇ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿ ಹೊರತುಪಡಿಸಿ, ನಿಷೇಧಿತ ಪಟಾಕಿಗಳ ಉತ್ಪಾದನೆ, ಸಂಗ್ರಹ ಮತ್ತು ಮಾರಾಟ ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಅವರು ನೀಡಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಪಟಾಕಿ ಸಿಡಿಸುವುದು ವಾಡಿಕೆಯಾಗಿದ್ದರೂ ಪಟಾಕಿ ತಯಾರಿಕೆಯಲ್ಲಿ ಅನೇಕ ರಾಸಾಯನಿಕಗಳನ್ನು ಬಳಕೆ ಮಾಡಲಾಗುತ್ತಿದೆ. ಪಟಾಕಿ ಸಿಡಿಸಿದ ಮೇಲೆ ಅದರಿಂದ ಬಿಡುಗಡೆಯಾಗುವ ರಾಸಾಯನಿಕ ವಸ್ತುಗಳು ವಾತಾವರಣದಲ್ಲಿ ಬಿಡುಗಡೆಗೊಂಡು ವಾಯುಮಾಲಿನ್ಯಕ್ಕೆ ಕಾರಣವಾಗುತ್ತಿದೆ.

ಈ ನಿಟ್ಟಿನಲ್ಲಿ ಮಾನ್ಯ ಸರ್ವೋಚ್ಛ ನ್ಯಾಯಾಲಯವು ಪಟಾಕಿಗಳಿಗೆ ಸಂಬಂಧಿಸಿದಂತೆ, ರಿಟ್ ಪಿಟಿಷನ್(ಸಿ) ನಂ.೭೨೮/೨೦೧೫ ರಲ್ಲಿ ದಿನಾಂಕ:೨೩/೧೦/೨೦೧೮ ಮತ್ತು ದಿನಾಂಕ:೩೧/೧೦/೨೦೧೮ ಹಾಗೂ ತದನಂತರ ಹಲವಾರು ನಿರ್ದೇಶನಗಳನ್ನು ನೀಡಿದ್ದು, ಈ ಆದೇಶದಲ್ಲಿ ಮಾನ್ಯ ಸರ್ವೋಚ್ಚ ನ್ಯಾಯಾಲಯವು ಸಮಯ ರಾತ್ರಿ ೮ ಗಂಟೆಯಿಂದ ರಾತ್ರಿ ೧೦ ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಿದೆ. ಇದಲ್ಲದೆ ಮಾನ್ಯ ಸರ್ವೋಚ್ಚ ನ್ಯಾಯಾಲಯವು ತನ್ನ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಹ ನಿಷೇಧಿಸಿದೆ.

ಹಸಿರು ಪಟಾಕಿ ಕುರಿತು ಸರ್ಕಾರದ ಆದೇಶ ಸಂಖ್ಯೆ: ಆರ್ಡಿ ೪೬೫ ಟಿಎನ್‌ಆರ್ ೨೦೨೦ ದಿನಾಂಕ:೧೨/೧೧/೨೦೨೦ರಲ್ಲಿ ವಿವರಣೆಯನ್ನು ನೀಡಲಾಗಿದ್ದು, ರಾಜ್ಯ ಪರಿಸರ ಮತ್ತು ಜೀವಿ ಪರಿಸ್ಥಿತಿ ಇಲಾಖೆಯು ತನ್ನ ಆದೇಶ ಸಂಖ್ಯೆ ಎಫ್‌ಇಇ:೪೬ ಇಎನ್‌ವಿ:೨೦೦೦, ಬೆಂಗಳೂರು ದಿನಾಂಕ :೨೯.೦೧.೨೦೦೪ ರಂತೆ ಪ್ರತಿ ಜಿಲ್ಲೆಯಲ್ಲಿ ಈಗಾಗಲೇ ಸ್ಥಾಪಿತಗೊಂಡಿರುವ ಜಿಲ್ಲಾ ಪರಿಸರ ಸಂರಕ್ಷಣಾ ಪ್ರಾಧಿಕಾರಕ್ಕೆ ಶಬ್ದ ಮಾಲಿನ್ಯ ನಿಯಂತ್ರಣ ಕಾರ್ಯವನ್ನು ವಹಿಸಲಾಗಿದೆ ಎಂದು ಈ ಸಂಬಂಧದ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

Warehouses may be seized if there is a stockpile of banned fireworks.

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...