Home namma chikmagalur ಭಕ್ತಾದಿಗಳ ಸುರಕ್ಷತೆಯ ದೃಷ್ಟಿಯಿಂದ ದೇವೀರಮ್ಮ ಬೆಟ್ಟಕ್ಕೆ ಎಸ್ಪಿ ಭೇಟಿ
namma chikmagalurchikamagalurHomeLatest News

ಭಕ್ತಾದಿಗಳ ಸುರಕ್ಷತೆಯ ದೃಷ್ಟಿಯಿಂದ ದೇವೀರಮ್ಮ ಬೆಟ್ಟಕ್ಕೆ ಎಸ್ಪಿ ಭೇಟಿ

Share
Share

ಚಿಕ್ಕಮಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಬಿಂಡಿಗಾ ದೇವೀರಮ್ಮ ದೀಪೋತ್ಸವದ ಅಂಗವಾಗಿ ಬೆಟ್ಟ ಹತ್ತುವ ಭಕ್ತಾದಿಗಳ ಸುರಕ್ಷತೆಯ ದೃಷ್ಟಿಯಿಂದ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಕುರಿತು ಭಕ್ತರು ಸಾಗುವ ಹಾದಿ ಮತ್ತು ಸ್ಥಳಗಳನ್ನು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಡಾ.ವಿಕ್ರಮ್ ಅಮಟೆ ನೇತೃತ್ವದಲ್ಲಿಪರಿಶೀಲಿಸಲಾಯಿತು.

ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಲ್ಲೇನಹಳ್ಳಿ ಬಿಂಡಿಗಾ ದೇವೀರಮ್ಮ ದೀಪೋತ್ಸವದ ಅಂಗವಾಗಿ ಪೂರ್ವಭಾವಿಯಾಗಿ ಜಿಲ್ಲಾ ಪೊಲೀಸ್ ವತಿಯಿಂದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಲ್ಲಿ ದೇವೀರಮ್ಮ ಬೆಟ್ಟದಲ್ಲಿ ದೇವರ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳ ಸುರಕ್ಷತೆಯ ದೃಷ್ಟಿಯಿಂದ ಅವರ ಅನುಕೂಲಕ್ಕಾಗಿ ಯಾವುದೇ ತುರ್ತು ಪರಿಸ್ಥಿತಿಯಲ್ಲಿ ಸಹಾಯಕ್ಕಾಗಿ ತಕ್ಷಣ ಪ್ರತಿಕ್ರಿಯಿಸಲು ರಕ್ಷಣಾ ತಂಡಗಳನ್ನು ನೇಮಿಸಲಾಯಿತು.

ಪರ್ವತಾರೋಹಣ ಮತ್ತು ಬೆಟ್ಟದ ಪ್ರದೇಶಗಳಲ್ಲಿ ರಕ್ಷಣಾ ಕೆಲಸಗಳಿಗೆ ತರಬೇತಿ ಹೊಂದಿರುವ ವಿಶೇಷ ತಂಡಗಳನ್ನು ನೇಮಿಸಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಮಲ್ಲೇನಹಳ್ಳಿಯಿಂದ ಬೆಟ್ಟದ ತುತ್ತ ತುದಿಯವರೆಗೆ ಕಾಲ್ನಡಿಗೆಯಲ್ಲಿ ಸಾಗುವ ಹಾದಿ ಮತ್ತು ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆ ಹಾಗೂ ತಿಳುವಳಿಕೆಗಳನ್ನು ನೀಡಿರುತ್ತಾರೆ.

ದೇವೀರಮ್ಮ ದೀಪೋತ್ಸವದ ಅಂಗವಾಗಿ ತೆಗೆದುಕೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತಾಗಿ ಪೂರ್ವಭಾವಿಯಾಗಿ ಇಂದು ನಡೆದ ಪರಿಶೀಲನೆಯ ಸಮಯದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಹೆಚ್.ಎಸ್. ಕೀರ್ತನಾ, ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಸಿ.ಟಿ.ಜಯಕುಮಾರ್, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ತಾಲೂಕು ಉಪ ವಿಭಾಗಾಧಿಕಾರಿಗಳು, ತಹಸೀಲ್ದಾರ್ ಸೇರಿದಂತೆ ಆರೋಗ್ಯ ಇಲಾಖೆ, ಅಗ್ನಿಶಾಮಕ ತುರ್ತುಸೇವೆಗಳ ಇಲಾಖೆ, ಆರ್‌ಟಿಓ, ಪ್ರವಾಸೋದ್ಯಮ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ದೇವಸ್ಥಾನ ಕಮಿಟಿ ಸದಸ್ಯರು, ಮಲ್ಲೇನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಇದ್ದರು.

SP visits Deviramma Hill for safety of devotees

Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...