Home Latest News ಪತ್ನಿಯ ಕತ್ತುಸೀಳಿ ಕೊಲೆ ಪ್ರಕರಣ : ಮೂವರ ಬಂಧನ
Latest NewschikamagalurCrime NewsHomenamma chikmagalur

ಪತ್ನಿಯ ಕತ್ತುಸೀಳಿ ಕೊಲೆ ಪ್ರಕರಣ : ಮೂವರ ಬಂಧನ

Share
Share

ಚಿಕ್ಕಮಗಳೂರು: ಕೌಟುಂಬಿಕ ಕಲಹ ಹಿನ್ನಲೆ ಪತ್ನಿಯನ್ನು ಪತಿ ಕತ್ತುಸೀಳಿ ಕೊಲೆ ಮಾಡಿರುವ ಪ್ರಕರಣದಲ್ಲಿ ಮೃತ ಮಹಿಳೆಯ ಪತಿ ಮತ್ತು ಮಾವನನ್ನು ಬಂಧಿಸಿ, ಅತ್ತೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ವಿಕ್ರಮ್‌ ಅಮಟೆ ತಿಳಿಸಿದರು.

ಮೃತ ನೇತ್ರಾವತಿ ಪತಿ ನವೀನ್‌ ಹಾಗೂ ಮಾವ ಮಂಜೇಗೌಡ ವಿರುದ್ಧ ಪ್ರಕರಣ ದಾಖಲಿಸಿ, ಅವರನ್ನು ಬಂಧಿಸಲಾಗಿದೆ. ಅತ್ತೆ ಕುಸುಮ ವಿರುದ್ಧ ಪ್ರಕರಣ ದಾಖ ಲಿಸಲಾಗಿದೆ ಎಂದು ತಿಳಿಸಿದರು.

ಆಲ್ದೂರು ಸಮೀಪದ ಹೊಸಳ್ಳಿ ಗ್ರಾಮದ ನೇತ್ರಾವತಿ ಸಕಲೇಶಪುರದ ನವೀನ್‌ನನ್ನು ಐದು ತಿಂಗಳ ಹಿಂದೆ ಧರ್ಮಸ್ಥಳದಲ್ಲಿ ಮದುವೆಯಾಗಿದ್ದರು. ಕೌಟುಂಬಿಕ ಕಲಹದ ಹಿನ್ನಲೆ ಪತಿ ನವೀನ್‌ ಸಕಲೇಶಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇಬ್ಬರನ್ನು ಸಖಿ ಕೇಂದ್ರಕ್ಕೆ ಕರೆಸಿ ಕೌನ್ಸಿಲಿಂಗ್‌ ಕೂಡ ನಡೆಸಲಾಗಿತ್ತು. ಆದರೆ, ಇಬ್ಬರ ನಡುವೆ ಹೊಂದಾಣಿಕೆ ಬಾರದ ಹಿನ್ನಲೆ ನೇತ್ರಾವತಿ ಕಳೆದ ಮೂರು ತಿಂಗಳಿಂದ ಆಲ್ದೂರು ಸಮೀಪದ ಹೊಸಳ್ಳಿ ಗ್ರಾಮದಲ್ಲಿನ ತವರು ಮನೆ ಸೇರಿದ್ದರು ಎಂದರು.

ಅ.12ರ ಸಂಜೆ 6:30ಕ್ಕೆ ನೇತ್ರಾವತಿ ಮನೆಗೆ ಆಗಮಿಸಿದ ಪತಿ ನವೀನ್‌ ನೇತ್ರಾವತಿಯ ಕತ್ತು ಸೀಳಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದ. ಗಂಭೀರ ಗಾಯಗೊಂಡಿದ್ದ ನೇತ್ರಾವತಿ ಅವರನ್ನು ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ನೇತ್ರಾವತಿ ಸಂಬಂಧಿಕರು ನೀಡಿದ ದೂರಿನನ್ವಯ ಕಾರ್ಯಪ್ರವೃತ್ತರಾದ ಆಲ್ದೂರು ಪೊಲೀಸ್‌ ಠಾಣೆಯ ಪೊಲೀಸರು ನೇತ್ರಾವತಿ ಅವರ ಪತಿ ನವೀನ್‌, ಅವರ ಮಾವ ಮಂಜೇಗೌಡ ಅವರನ್ನು ಬಂಧಿಸಿದ್ದಾರೆ. ನೇತ್ರಾವತಿ ಅತ್ತೆ ಕುಸುಮ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆಂದು ತಿಳಿಸಿದರು.

Wife’s throat slitting murder case: Three arrested
Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...