Home namma chikmagalur ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಸಾವು
namma chikmagalurchikamagalurCrime NewsHomeLatest News

ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಸಾವು

Share
Share

ಚಿಕ್ಕಮಗಳೂರು: ಕಿವಿಯ ಶಸ್ತ್ರ ಚಿಕಿತ್ಸೆಗೆ ಬಂದಿದ್ದ ಮಹಿಳೆಗೆ ವೈದ್ಯರು ಅನಸ್ತೇಷಿಯಾ ಕೊಡುತ್ತಿದ್ದಂತೆ ಹೃದಯಾ ಘಾತದಿಂದ  ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಮೃತರನ್ನು 33 ವರ್ಷದ ಭಾಗ್ಯ ಎಂದು ಗುರುತಿಸಲಾಗಿದೆ.

ಈ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಚಿಕ್ಕಮಗಳೂರು ನಗರದ ಮೂಡಿಗೆರೆ ಮಾರ್ಗದ ಅನ್ನಪೂರ್ಣ ಖಾಸಗಿ ಆಸ್ಪತ್ರೆಯಲ್ಲಿ ಈ ದುರ್ಘಟನೆ ನಡೆದಿದೆ.

ಮಂತ್ರಾಲಯದಿಂದ ಬಂದು ಕಳೆದ ಹತ್ತು ವರ್ಷಗಳಿಂದ ಚಿಕ್ಕಮಗಳೂರು ನಗರದ ಹಿರೇಮಗಳೂರಿನಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಭಾಗ್ಯ ಕಿವಿ ಸಂಬಂಧಿತ ಸಮಸ್ಯೆಗೆ ಶಸ್ತ್ರ ಚಿಕಿತ್ಸೆ ಪಡೆಯಲು ನಿನ್ನೆ ಸಂಜೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಕಿವಿ ಶಸ್ತ್ರ ಚಿಕಿತ್ಸೆಗೂ ಮುನ್ನ ವೈದ್ಯರು ಭಾಗ್ಯ ಅವರಿಗೆ ಅನಸ್ತೇಷಿಯಾ ನೀಡಿದ್ದಾರೆ. ಈ ವೇಳೆ ಹೃದಯಾಘಾತದಿಂದ ಭಾಗ್ಯ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಆದರೆ, ವೈದ್ಯರ ನಿರ್ಲಕ್ಷ್ಯದಿಂದಲೇ ಭಾಗ್ಯ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಆಸ್ಪತ್ರೆ ಎದುರು ಗೋಳಾಟ ನಡೆಸಿದ್ದಾರೆ.  ಮೃತ ಭಾಗ್ಯ ಅವರಿಗೆ ಎರಡು ಹೆಣ್ಣು ಮತ್ತು ಒಂದು ಗಂಡು ಮಗು ಇದ್ದು ಒಂದು ಮಗು ವಿಕಲ ಚೇತನವಾಗಿದೆ. ಗಂಡ-ಹೆಂಡತಿ ಇಬ್ಬರೂ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

ಇದೀಗ, ಭಾಗ್ಯ ಅವರ ಅಕಾಲಿಕ ಸಾವಿನಿಂದಾಗಿ ಕುಟುಂಬ ತಬ್ಬಲಿಯಾಗಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಘಟನೆಯ ನಿಖರ ಕಾರಣ ತಿಳಿದುಬರಲಿದೆ. ಈ ಸಾವಿಗೆ ಕಾರಣರಾದ ವೈದ್ಯರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕುಟುಂಬಸ್ಥರು ಮತ್ತು ಸಂಬಂಧಿಕರು ಆಗ್ರಹಿಸಿದ್ದಾರೆ.

Woman dies due to doctor’s negligence at private hospital

Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...