ಚಿಕ್ಕಮಗಳೂರು: ಸರ್ಕಾರಿ ಸೌಲಭ್ಯಗಳನ್ನು ಪರಿಶಿಷ್ಟ ಜಾತಿ ಸಮುದಾಯದವರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಆರ್.ಧರ್ಮಸೇನಾ ತಿಳಿಸಿದರು.
ಬುಧವಾರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಪಂಚ ಗ್ಯಾರೆಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದೆ. ಚಿತ್ರದುರ್ಗ ದಲ್ಲಿ ನಡೆದ ಸಮಾವೇಶದಲ್ಲಿ ನೀಡಿದ ಭರವಸೆಗಳನ್ನು ಮುಖ್ಯಮಂತ್ರಿಗಳು ಈಡೇರಿಸಿದ್ದಾರೆ ಎಂದರು.
ಪರಿಶಿಷ್ಟ ಜಾತಿ ಅಭಿವೃದ್ಧಿ ಹಾಗೂ ಸರ್ಕಾರಿ ಯೋಜನೆಗಳು ತಲುಪುತ್ತಿವೆಯೆ, ಸ್ಥಳೀಯ ಶಾಸಕರು, ಸಂಸದರು ಸಮಸ್ಯೆಗಳಿಗೆ ಸ್ಪಂಧಿಸುತ್ತಿದ್ದಾರೆಯೆ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲು ಎಐಸಿಸಿ ಹಾಗೂ ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವ ಕುಮಾರ್ ಅವರ ಸೂಚನೆಯಂತೆ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿರುವುದಾಗಿ ತಿಳಿಸಿದರು.
ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಸಭೆಯನ್ನು ನಡೆಸಿದ್ದು, ನಿಗಮ ಮಂಡಳಿ ನೇಮಕ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನ ಸೇರಿದಂತೆ ಇತರೆ ಹುದ್ದೆಗಳನ್ನು ಪರಿಶಿಷ್ಟರಿಗೆ ನೀಡಬೇಕೆಂದು ಮನವಿ ಮಾಡಿದ್ದಾರೆ. ಜತೆಗೆ ಕೆಲವೊಂದು ಸಮಸ್ಯೆಗಳನ್ನು ಗಮನಕ್ಕೆ ತಂದಿದ್ದು, ಪರಿಶಿಷ್ಟ ಜಾತಿ ವಿಭಾಗದ ರಾಷ್ಟ್ರೀಯ ಅಧ್ಯಕ್ಷರ ಗಮನಕ್ಕೆ ಹಾಗೂ ಸರ್ಕಾರದ ಗಮನಕ್ಕೆ ತರಲಾಗುವುದು ಎಂದ ಅವರು, ಪದಾಧಿಕಾರಿಗಳು ಗೂಗಲ್ ಮೇಬರ್ಶೀಫ್ ಮಾಡಲು ಗಮನಹರಿಸಲಾಗುವುದು ಎಂದರು.
ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲೆ ವಕೀಲ ಶೂ ಎಸೆದಿರುವ ಪ್ರಕರಣವನ್ನು ಖಂಡಿಸಿದ ಅವರು, ನ್ಯಾಯಾಧೀಶರಿಗೆ ಭದ್ರತೆ ಒದಗಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಆರೋಪಿಸಿ, ಶೂ ಎಸೆದ ವಕೀಲನ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ದೂರಿದರು.
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರು ಮತಕಳ್ಳತನ ಆರೋಪ ಮಾಡಿದ್ದು, ಕೇಂದ್ರ ಚುನಾವಣಾ ಆಯೋಗ ಸ್ಪಷ್ಟೀಕರಣ ನೀಡಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಟಿಯಲ್ಲಿ ಗ್ಯಾರೆಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಂ.ಸಿ.ಶಿವಾನಂದ ಸ್ವಾಮಿ, ಮಲ್ಲೇಶ ಸ್ವಾಮಿ, ಎಚ್.ಪಿ.ಮಂಜೇಗೌಡ, ಎಂ.ಎಸ್.ಅನಂತ್, ಶಾಂತಕುಮಾರ್, ನೇತ್ರಾವತಿ, ಹಿರೇಮಗಳೂರು ರಾಮಚಂದ್ರ ಇದ್ದರು.
The community should make good use of government facilities.
Leave a comment