Home Latest News ಪ್ರಧಾನ ಮಂತ್ರಿಗೆ ಏಕೆ ಗೋಮಾಂಸದ ಬಿರಿಯಾನಿ ಕಳಿಸಿಕೊಡಲಿಲ್ಲ
Latest NewschikamagalurHomenamma chikmagalur

ಪ್ರಧಾನ ಮಂತ್ರಿಗೆ ಏಕೆ ಗೋಮಾಂಸದ ಬಿರಿಯಾನಿ ಕಳಿಸಿಕೊಡಲಿಲ್ಲ

Share
Share
ಚಿಕ್ಕಮಗಳೂರು: ಜಿಲ್ಲಾ ಪೊಲೀಸ್‌ ಅಧಿಕಾರಿಗೆ ನೀಡಿದ ಗೋಮಾಂಸದ ಬಿರಿಯಾನಿಯನ್ನು ಯಾರು ತಯಾರು ಮಾಡಿದ್ದು, ಯಾರು ತಂದುಕೊಟ್ಟರು ಎಂಬು ದರ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಪಿ.ಮಂಜೇಗೌಡ ಆಗ್ರಹಿಸಿದರು.
ಗುರುವಾರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಹಿಂದೂ ಹಿತರಕ್ಷಣ ವೇದಿಕೆ, ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ಬುಧವಾರ ನಗರದಲ್ಲಿ ನಡೆದ ಪ್ರತಿಭಟನೆ ಬಳಿಕ ಗೋಮಾಂಸದ ಬಿರಿಯಾನಿ ಮತ್ತು ಕಬಾಬು ಪೊಲೀಸ್‌ ಅಧಿಕಾರಿಗೆ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ನೀಡಿದ್ದು, ಮುಂದಿನ ದಿನಗಳ ಲ್ಲಿ ಅಧಿಕಾರಿಗಳ ಮನೆಗಳಿಗೆ ಮತ್ತು ಮುಖ್ಯಮಂತ್ರಿಗಳಿಗೆ ಕಳಿಸುವುದಾಗಿ ಎಚ್ಚರಿಕೆ ನೀಡಿದ್ದು, ಗೋಮಾಂಸದ ಬಿರಿಯಾನಿ, ಕಬಾಬ್‌ ಯಾರು ತಯಾರಿಸಿದರು. ಎಲ್ಲಿಂದ ತರಲಾಯಿತು ಹಾಗೂ ಬಿರಿಯಾನಿ ನೀಡಿದವರು ಮತ್ತು ಪಡೆದು ಕೊಂಡವರ ಮೇಲೆ ಸೂಕ್ತ ತನಿಖೆಯಾಗಬೇಕು. ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಬಿ.ಎಸ್‌.ಯಡಿಯೂರಪ್ಪ, ಬಸವರಾಜ್‌ ಬೊಮ್ಮಾಯಿ, ಸದಾನಂದ ಗೌಡ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಏಕೆ ಗೋಹತ್ಯೆ ತಡೆಗೆ ಕ್ರಮ ಕೈಗೊಳ್ಳ ಲಿಲ್ಲ ಹಾಗೂ ಗೋಮಾಂಸದ ಬಿರಿಯಾನಿ, ಕಬಾಬ್‌ ನೀಡಲು ಸಿ.ಟಿ.ರವಿಯವರು ನೀಡಲು ಮುಂದಾಗಲಿಲ್ಲ ಎಂದು ಪ್ರಶ್ನಿಸಿದರು.
ವಿದೇಶಕ್ಕೆ ಗೋಮಾಂಸ ರಫ್ತಿಯಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ. ಪ್ರಧಾನ ಮಂತ್ರಿ, ಗೃಹಮಂತ್ರಿ, ರಕ್ಷಣಾ ಸಚಿವರಿಗೆ ಏಕೆ ಗೋಮಾಂಸದ ಬಿರಿಯಾನಿ, ಕಬಾಬ್‌ ಕಳಿಸಿಕೊಡಲಿಲ್ಲ ಎಂದ ಅವರು, ರಾಜಕೀಯವಾಗಿ ಕಳೆದು ಹೋಗುತ್ತಿದ್ದೇನೆಂದು ಭಾವಿಸಿ ಇಂತಹ ಕ್ಷುಲಕ ಕಾರಣಗಳನ್ನು ಮುಂದಿಟ್ಟು ಕೊಂಡು ರಾಜಕೀಯ ಮಾಡಲಾಗುತ್ತಿದೆ ಎಂದು ದೂರಿದರು.
ರಾಜ್ಯದಲ್ಲಿ ಸುಭದ್ರ ಸರ್ಕಾರವಿದೆ. ವಿರೋಧಿಸಲು ಸಕಾರಣವಿಲ್ಲದೆ ಗೋಮಾಂಸ ಬಿರಿಯಾನಿ ಪ್ರದರ್ಶಿಸಿ ಕೀಳು ಮಟ್ಟಕ್ಕೆ ಇಳಿದಿದ್ದಾರೆ ಎಂದ ಅವರು, 19 ವರ್ಷಗಳಿಂದ ಶಾಸಕರಾಗಿದ್ದ ಸಿ.ಟಿ.ರವಿಯವರು ಎಷ್ಟು ಗೋಮಾಂಸದ ಅಂಗಡಿಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಎಷ್ಟು ಹೋರಾಟ ಮಾಡಿದ್ದಾರೆ ಎಂದು ಪ್ರಶ್ನಿಸಿ ಗೋಮಾಂಸದ ಬಿರಿಯಾನಿ ಪ್ರದರ್ಶಿಸಿದವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಜಿಲ್ಲೆ ಶಾಂತಿಯಿಂದ ಇದ್ದು, ಶಾಂತಿಯನ್ನು ಕದಡುವ ಕೆಲಸ ಬಿಜೆಪಿ, ವಿಶ್ವ ಹಿಂದೂ ಪರಿಷತ್‌, ಭಜರಂಗದಳ ಮಾಡಬಾರದು ಎಂದು ಹೇಳಿದರು. ಹಿರೇಗೌಜ ಶಿವಕುಮಾರ್ ಮಾತನಾಡಿ, ವಿದೇಶಕ್ಕೆ ಗೋಮಾಂಸ ರಫ್ತು ಮಾಡುವಲ್ಲಿ ದೇಶ ಎರಡನೇ ಸ್ಥಾನದಲ್ಲಿದೆ ಹಾಗಿದ್ದರೇ ಸಂಸದರ ಮೂಲಕ ಪ್ರಧಾನ ಮಂತ್ರಿಗಳಿಗೆ ಗೋಮಾಂಸದ ಬಿರಿಯಾನಿ ಹಾಗೂ ಕಬಾಬ್‌ ಕಳಸಿಕೊಡುತ್ತಾರೆಯೇ ಎಂದು ಪ್ರಶ್ನಿಸಿದರು.
ಸುದ್ದಿಗೋಷ್ಟಿಯಲ್ಲಿ ಬಿಳಕೆರೆ ಪ್ರವೀಣ್, ಕುರುವಂಗಿ ರಾಜೇಶ್‌, ಹಿರೆಕೊಳಲೆ ಪ್ರಕಾಶ್‌ ಸೇರಿದಂತೆ ಇತರರು ಇದ್ದರು.
Why not serve beef biryani to the Prime Minister
Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....