Home namma chikmagalur ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ
namma chikmagalurchikamagalurHomeLatest News

ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ

Share
Share

ಚಿಕ್ಕಮಗಳೂರು: ಹವಮಾನ ಪೈಪರೀತ್ಯದಿಂದ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅಬ್ಬರಿಸುತ್ತಿದೆ. ಧಾರಾಕಾರ ಮಳೆಯಿಂದ ಇಲ್ಲಿನ ಜನಜೀವನ ಅಸ್ತವ್ಯಸ್ತ ಗೊಂಡಿದ್ದು, ದೀಪಾವಳಿ ಹಬ್ಬದ ಸಡಗರಕ್ಕೆ ಮಳೆ ಅಡ್ಡಿಯಾಗಿದೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು, ಚಾರ್ಮಾಡಿಘಾಟಿ, ಕೊಟ್ಟಿಗೆಹಾರ ಸೇರಿದಂತೆ ಸುತ್ತಮುತ್ತ ಮಳೆಯಾಗಿದೆ. ಕಳಸ ತಾಲೂಕು ವ್ಯಾಪ್ತಿಯಲ್ಲಿ ಮಳೆಯಾಗಿದೆ. ನರಸಿಂಹರಾಜಪುರ ತಾಲೂಕು ವ್ಯಾಪ್ತಿಯ ಬಾಳೆಹೊನ್ನೂರು ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಧಾರಾಕಾರ ಮಳೆಯಾಗಿದೆ.

ಕೊಪ್ಪ ತಾಲೂಕು ಬಸರೀಕಟ್ಟೆ, ಜಯಪುರ ಸೇರಿದಂತೆ ಇತರೆಡೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಶೃಂಗೇರಿ ಸುತ್ತಮುತ್ತ ಧಾರಾಕಾರ ಮಳೆಯಾಗಿದ್ದು, ಮಳೆಯ ಆರ್ಭಟಕ್ಕೆ ಪಟ್ಟಣದ ಸಂತೆ ಮಾರುಕಟ್ಟೆ ರಸ್ತೆ, ಆಟೋ ನಿಲ್ದಾಣ ಜಲಾವೃತಗೊಂಡಿದೆ, ರಸ್ತೆಯಲ್ಲಿ ಒಂದು ಅಡಿಯಷ್ಟು ಮಳೆ ನೀರು ಹರಿದಿದೆ. ರಸ್ತೆ ಗುಂಡಿಗಳಲ್ಲಿ ಮಳೆಯ ನೀರು ತುಂಬಿದ ಪರಿಣಾಮ ವಾಹನ ಸವಾರರು ಪರದಾಡಿದರು.

ಚಿಕ್ಕಮಗಳೂರು ತಾಲೂಕು ವ್ಯಾಪ್ತಿಯಲ್ಲಿ ಶನಿವಾರ ಸಂಜೆಯಿಂದ ಗುಡುಗು ಮಿಂಚು ಸಹಿತ ಮಳೆಯಾಗುತ್ತಿದೆ. ಅ.೧೯ ಮತ್ತು ೨೦ರಂದು ಬಿಂಡಿಗಾ ದೇವಿರಮ್ಮ ದೇವಸ್ಥಾನ ಜಾತ್ರಾಮಹೋತ್ಸವ ಅಂಗವಾಗಿ ಬೆಟ್ಟದ ಮೇಲಿನ ದೇವಿರಮ್ಮ ದೇವಿಯ ದರ್ಶನಕ್ಕೂ ಮಳೆ ಅಡ್ಡಿಯಾಗಿದೆ.

ಅಡಿಕೆ ಕೊಯ್ಲಿಗೆ ಬಂದಿದ್ದು, ಕಾಫಿ ಹಣ್ಣಾಗಿ ನಿಂತಿದೆ. ಹವಮಾನ ವೈಪರೀತ್ಯದಿಂದ ಮಳೆಯಾಗುತ್ತಿದ್ದು, ರೈತರು ಬೆಳೆಗಾರರು ಕಂಗಲಾಗಿದ್ದಾರೆ. ಧಾರಾಕಾರ ಮಳೆಯ ಜತೆಗೆ ಗುಡುಗು, ಮಿಂಚು, ಸಿಡಿಲು ಸಹಿತ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಳೆಗಾರರು ಮತ್ತು ರೈತರನ್ನು ಕಂಗಾಲು ಗೊಳಿಸುವ ಜತೆಗೆ ದೀಪಾವಳಿ ಹಬ್ಬದ ಸಡಗರಕ್ಕೆ ಮಳೆ ಅಡ್ಡಿಯಾಗುವ ಆಂತಕವೂ ಇದೆ.

Heavy rain in hilly parts of the district

 

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧ ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ’ರಾಷ್ಟ್ರೀಯ ಲೋಕ್ ಅದಾಲತ್’ ಹಮ್ಮಿಕೊಳ್ಳಲಾಗಿದೆ ಎಂದು ಗೌ.ಪ್ರಧಾನ ಜಿಲ್ಲಾ...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ ಸಂಚಾರ) ಬಂದ ಕಾರೊಂದು ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ದುಡುಕುತನದಿಂದ ಡಿಕ್ಕಿ ಹೊಡೆದ ಪರಿಣಾಮ...

Related Articles

ಅಮೃತ್ 2.0 ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ

ಚಿಕ್ಕಮಗಳೂರು: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಮೃತ್ 2.0 ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಕುಡಿಯುವ ನೀರಿನ...

ವಿಕಲಚೇತನ ವ್ಯಕ್ತಿಯ ₹8 ಲಕ್ಷ ಬ್ಯಾಂಕ್ ಸಾಲ ಕೇವಲ ₹15,000 ಕ್ಕೆ ಇತ್ಯರ್ಥ

ಚಿಕ್ಕಮಗಳೂರು:  ಇಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಮ್ಮಿಕೊಂಡಿದ್ದ ಮೆಗಾ ಲೋಕ ಅದಾಲತ್‌ನಲ್ಲಿ ನ್ಯಾಯಾಂಗದ ವಿಶೇಷ...

ಎಟಿಎಂ ಕಾರ್ಡ್ ಬದಲಿಸಿ ₹3.09 ಲಕ್ಷ ವಂಚನೆ

ಕಡೂರು: ಪಟ್ಟಣದ ಜೈನ್ ಟೆಂಪಲ್ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಹಣ ಹಿಂಪಡೆಯಲು ಯತ್ನಿಸುತ್ತಿದ್ದ ವೇಳೆ...

ಕೆಪಿಟಿಸಿಎಲ್ ಸಿಎಸ್‌ಆರ್ ಅನುದಾನ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಕಣ್ಣಾವಲಿಗೆ ನೆರವು

ಚಿಕ್ಕಮಗಳೂರು: ಸರ್ಕಾರದ ಅನುದಾನದ ಕೊರತೆ ನಡುವೆ ಕೆಪಿಟಿಸಿಎಲ್ ಸಿಎಸ್‌ಆರ್ (ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿ) ಅನುದಾನ...