Home namma chikmagalur ಸೇವಾ ನ್ಯೂನತೆ ಆರೋಪ: ಬಡ್ಡಿ ಸಹಿತ ಹಣ ವಾಪಸಿಗೆ ಆದೇಶ
namma chikmagalurchikamagalurHomeLatest News

ಸೇವಾ ನ್ಯೂನತೆ ಆರೋಪ: ಬಡ್ಡಿ ಸಹಿತ ಹಣ ವಾಪಸಿಗೆ ಆದೇಶ

Share
Share

ಚಿಕ್ಕಮಗಳೂರು: ಒಪ್ಪಿಗೆ ಪಡೆಯದೆ ಗುಂಪು ಆರೋಗ್ಯ ವಿಮೆಗಾಗಿ ಹಣ ಕಡಿತಗೊಳಿಸಿ ಸೇವಾ ನ್ಯೂನತೆ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಹಾಗೂ ಇನ್‌ಶೂರೆನ್ಸ್ ಕಂಪನಿಗಳ ವಿರುದ್ಧ ತೀರ್ಪು ನೀಡಿರುವ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಬಡ್ಡಿ ಸಹಿತ ಹಣ ಮರಳಿಸುವಂತೆ ಕಂಪನಿಗಳಿಗೆ ಆದೇಶ ನೀಡಿದೆ.

ನಗರದ ಕೋಟೆ ಚೆನ್ನಾಪುರದ ಎ,ಪಿ.ನಾಗೇಶ್ ಗೌಡ ಎಂಬುವವರು ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನ ವಸ್ತಾರೆ ಶಾಖೆಯಲ್ಲಿ ಉಳಿತಾಯ ಖಾತೆ ಹೊಂದಿದ್ದಾರೆ. ನಾಗೇಶ್ ಗೌಡರ ಖಾತೆಯಿಂದ ತಲಾ ೭೬,೭೯೩ ರೂ.ಗಳಂತೆ ಒಟ್ಟು ೧,೫೩,೫೮೬ ರೂ.ಗಳನ್ನು ಕಡಿತಗೊಳಿಸಿದ್ದು, ಈ ಬಗ್ಗೆ ಬ್ಯಾಂಕ್ ವ್ಯವಸ್ಥಾಪಕರನ್ನು ಸಂಪರ್ಕಿಸಿದ ಅವರು ಈ ಹಣವನ್ನು ಮರಳಿಸುವಂತೆ ಮನವಿ ಮಾಡಿಕೊಂಡಿದ್ದರು.

ಆದರೆ ಹಣ ಮರಳಿಸದೆ ಸೇವಾ ನ್ಯೂನತೆ ಎಸಗಿದ್ದರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಬ್ಯಾಂಕ್ ವ್ಯವಸ್ಥಾಪಕರು,  ಹೆಚ್‌ಡಿಎಫ್‌ಸಿ ಎರ್ಗೊ ಜನರಲ್ ಇನ್‌ಶೂರೆನ್ಸ್ ಕಂಪನಿಯ ಮಂಗಳೂರು ಹಾಗೂ ಬೆಂಗಳೂರು ಕಚೇರಿಯ ವ್ಯವಸ್ಥಾಪಕರುಗಳು ಹಾಗೂ ಈ ಸಂಸ್ಥೆಯ ಕಾರ್ಯಾಚರಣೆ ಮತ್ತು ಸೇವಾ ಗುಂಪಿನ ಹಿರಿಯ ಉಪಾಧ್ಯಕ್ಷರು ಹಾಗೂ ಅಧ್ಯಕ್ಷರ ವಿರುದ್ಧ ಕಳೆದ ಡಿಸೆಂಬರ್ ೪ ರಂದು ನಾಗೇಶ್‌ಗೌಡ ಅವರು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ಸಲ್ಲಿಸಿದ್ದರು.

ಈ ಬಗ್ಗೆ ವಿಚಾರಣೆ ನಡೆಸಿದ ಆಯೋಗವು ಇತ್ತೀಚೆಗೆ ತೀರ್ಪು ನೀಡಿ ವಿಮೆ ಮೊತ್ತವಾದ ಎರಡು ಬಾರಿ ಖಾತೆಯಿಂದ ಕಡಿತಗೊಳಿಸಿದ ಒಟ್ಟು ಮೊತ್ತ ೧,೫೩,೫೮೬ ರೂ.ಗಳನ್ನು ಶೇ.೯ರ ವಾರ್ಷಿಕ ಬಡ್ಡಿ ಸಹಿತ ದೂರುದಾರರಿಗೆ ಮರಳಿಸುವಂತೆ ಹಾಗೂ ಪರಿಹಾರವಾಗಿ ೨೦ ಸಾವಿರ ರೂ.ಗಳು ಮತ್ತು ಪ್ರಕರಣದ ಖರ್ಚು-ವೆಚ್ಚಕ್ಕಾಗಿ ೧೦ ಸಾವಿರ ರೂ.ಗಳನ್ನು ನೀಡುವಂತೆ ಆದೇಶ ನೀಡಿದೆ.

Service deficiency allegation: refund order with interest

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧ ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ’ರಾಷ್ಟ್ರೀಯ ಲೋಕ್ ಅದಾಲತ್’ ಹಮ್ಮಿಕೊಳ್ಳಲಾಗಿದೆ ಎಂದು ಗೌ.ಪ್ರಧಾನ ಜಿಲ್ಲಾ...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ ಸಂಚಾರ) ಬಂದ ಕಾರೊಂದು ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ದುಡುಕುತನದಿಂದ ಡಿಕ್ಕಿ ಹೊಡೆದ ಪರಿಣಾಮ...

Related Articles

ಅಮೃತ್ 2.0 ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ

ಚಿಕ್ಕಮಗಳೂರು: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಮೃತ್ 2.0 ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಕುಡಿಯುವ ನೀರಿನ...

ವಿಕಲಚೇತನ ವ್ಯಕ್ತಿಯ ₹8 ಲಕ್ಷ ಬ್ಯಾಂಕ್ ಸಾಲ ಕೇವಲ ₹15,000 ಕ್ಕೆ ಇತ್ಯರ್ಥ

ಚಿಕ್ಕಮಗಳೂರು:  ಇಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಮ್ಮಿಕೊಂಡಿದ್ದ ಮೆಗಾ ಲೋಕ ಅದಾಲತ್‌ನಲ್ಲಿ ನ್ಯಾಯಾಂಗದ ವಿಶೇಷ...

ಎಟಿಎಂ ಕಾರ್ಡ್ ಬದಲಿಸಿ ₹3.09 ಲಕ್ಷ ವಂಚನೆ

ಕಡೂರು: ಪಟ್ಟಣದ ಜೈನ್ ಟೆಂಪಲ್ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಹಣ ಹಿಂಪಡೆಯಲು ಯತ್ನಿಸುತ್ತಿದ್ದ ವೇಳೆ...

ಕೆಪಿಟಿಸಿಎಲ್ ಸಿಎಸ್‌ಆರ್ ಅನುದಾನ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಕಣ್ಣಾವಲಿಗೆ ನೆರವು

ಚಿಕ್ಕಮಗಳೂರು: ಸರ್ಕಾರದ ಅನುದಾನದ ಕೊರತೆ ನಡುವೆ ಕೆಪಿಟಿಸಿಎಲ್ ಸಿಎಸ್‌ಆರ್ (ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿ) ಅನುದಾನ...