Home namma chikmagalur ಒಂದು ವಾರ ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆ
namma chikmagalurchikamagalurHomeLatest News

ಒಂದು ವಾರ ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆ

Share
Share
ಬೆಂಗಳೂರು: ಕರಾವಳಿ ಹಾಗೂ ದಕ್ಷಿಣ ಒಳನಾಡಿನ ವಿವಿಧೆಡೆ ಸೋಮವಾರದಿಂದ ಒಂದು ವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು, ಮಂಡ್ಯ ಮತ್ತು ಕೋಲಾರ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಂಟೆಗೆ 30 ಕಿ.ಮೀ ನಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಒಣಹವೆ ಇರುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಎಚ್ಚರಿಕೆ: ಸೋಮವಾರದಿಂದ ಗುರುವಾರದವರೆಗೂ ಕರಾವಳಿಯ ಉದ್ದಕ್ಕೂ ಗಂಟೆಗೆ 35 ಕಿ.ಮೀ ನಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳ ಕೆಲವೆಡೆ ಇದೇ 26ರವರೆಗೂ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಈ ಭಾಗದ ಎಲ್ಲ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಮಂಗಳವಾರದಿಂದ ಉತ್ತರ ಒಳನಾಡಿನ ಜಿಲ್ಲೆಗಳನ್ನೂ ಮಳೆ ವ್ಯಾಪಿಸಿಕೊಳ್ಳುವ ಸಾಧ್ಯತೆಯಿದೆ.

Heavy rain likely in various parts of the state for a week

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ ಬಳಸಲು ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ಕನ್ನಡಸೇನೆ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಭಂವರ್‌ಸಿಂಗ್...

ಕಾಫಿನಾಡಿನ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ

ಮೂಡಿಗೆರೆ: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕೊನೆಗೂ ಮಳೆಗಾಲದ ದರ್ಶನವಾಗಿದ್ದು, ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಒಂದೆಡೆ ಆತಂಕ, ಮತ್ತೊಂದೆಡೆ ಹರ್ಷದ ವಾತಾವರಣ ನಿರ್ಮಾಣವಾಗಿದೆ. ಮಳೆಗಾಲ ಆರಂಭವಾಗಿ ತಿಂಗಳು ಕಳೆದರೂ ನಿರೀಕ್ಷಿತ ಪ್ರಮಾಣದಲ್ಲಿ ಬಾರದ...

Related Articles

ಆಯುಷ್ಮಾನ್ ಆರೋಗ್ಯ ಕೇಂದ್ರದ ಕಾಮಗಾರಿಗೆ ಗುದ್ದಲಿ ಪೂಜೆ

ಚಿಕ್ಕಮಗಳೂರು: ಆರೋಗ್ಯ, ಶಿಕ್ಷಣ ಮತ್ತು ಜನರ ಬದುಕಿಗಾಗಿ ಆದ್ಯತೆಯ ಮೇಲೆ ಕೆಲಸ ಮಾಡಬೇಕಾಗಿರುವುದು ಚುನಾಯಿತ ಪ್ರತಿನಿಧಿಗಳ...

ಹಂದಿ ಬೇಟೆ: 7 ಜನರ ಬಂಧನ

ಕಡೂರು: ತಾಲ್ಲೂಕಿನ ಮಲ್ಲಾಘಟ್ಟ ಗ್ರಾಮದಿಂದ ಸಿಂಗಟಗೆರೆಗೆ ಹೋಗುವ ರಸ್ತೆಯಲ್ಲಿ ಭಾನುವಾರ ಮುಂಜಾನೆ ಹಂದಿ ಬೇಟೆಗೆ ಬಂದಿದ್ದ...

ಕೈಕುಸ್ತಿ(ಪಂಝಾ)ಆಡುತ್ತಿದ್ದ ವೇಳೆ ಯುವಕನ ಸಾವು

ಕಡೂರು:  ಕೈಕುಸ್ತಿ(ಪಂಝಾ)ಆಡುತ್ತಿದ್ದ ಸ್ನೇಹಿತರುಗಳ ನಡುವೆ ನಡೆದ ಮಾತಿನಚಕಮಕಿಯಿಂದ ಮಾರಣಾಂತಿಕ ಹಲ್ಲೆಗೆ ತಿರುಗಿ ಯುವಕನೊಬ್ಬನು ಮೃತಪಟ್ಟಿದ್ದು, ಕೊಲೆ...

ಉದ್ಯಮ ವಿಸ್ತರಣೆಗೆ ‘ಇ-ಹರಾಜು’ ಸುವರ್ಣಾವಕಾಶ

ಚಿಕ್ಕಮಗಳೂರು:  ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮದ್ಯದ ಅಂಗಡಿಗಳ ಲೈಸೆನ್ಸ್ ಇ-ಹರಾಜು ಪ್ರಕ್ರಿಯೆಯು ಜಿಲ್ಲೆಯ ಹಾಗೂ...