Home namma chikmagalur ಅಭಿನಂದನಾ ಸಮಾರಂಭಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಹ್ವಾನ
namma chikmagalurchikamagalurHomeLatest News

ಅಭಿನಂದನಾ ಸಮಾರಂಭಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಹ್ವಾನ

Share
Share

ಮೂಡಿಗೆರೆ: ವಿಧಾನಪರಿಷತ್ ನೂತನ ಸದಸ್ಯೆ ಆರತಿ ಕೃಷ್ಣ ಅವರಿಗೆ ಕಾಂಗ್ರೆಸ್ ತಾಲ್ಲೂಕು ಘಟಕದ ವತಿಯಿಂದ ಹಮ್ಮಿಕೊಂಡಿರುವ ಅಭಿನಂದನಾ ಸಮಾರಂಭಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಆಹ್ವಾನಿಸ ಲಾಗಿದೆ ಎಂದು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಎಚ್.ಜಿ.ಸುರೇಂದ್ರ ತಿಳಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ನಮ್ಮ ಜಿಲ್ಲೆಯವರಾದ ಮಾಜಿ ಶಾಸಕ ಬೇಗಾನೆ ರಾಮಯ್ಯ ಅವರ ಪುತ್ರಿ ಆರತಿಕೃಷ್ಣ ವಿಧಾನಪರಿಷತ್ ಸದಸ್ಯರಾಗಿ ನಾಮ ನಿರ್ದೇಶನಗೊಂಡಿದ್ದು, ಅವರಿಗೆ ಕಾಂಗ್ರೆಸ್ ತಾಲ್ಲೂಕು ಘಟಕದ ವತಿಯಿಂದ ಶಾಸಕಿ ನಯನಾ ಮೋಟಮ್ಮ ಅವರ ಅಧ್ಯಕ್ಷತೆಯಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಲು ನಿರ್ಧರಿಸಲಾಗಿದೆ.

ಈ ಕಾರ್ಯಕ್ರಮಕ್ಕೆ ಡಿ.ಕೆ.ಶಿವಕುಮಾರ್ ಅವರನ್ನು ಆಹ್ವಾನಿಸಲಾಗಿದೆ. ಕಳೆದ ಶನಿವಾರ ಕಾಂಗ್ರೆಸ್ ನಿಯೋಗ ಬೆಂಗಳೂರಿನ ಡಿ.ಕೆ.ಶಿವಕುಮಾರ್ ಅವರ ನಿವಾಸದಲ್ಲಿ ಭೇಟಿಯಾಗಿ ಆಹ್ವಾನ ನೀಡಲಾಯಿತು. ಉಪಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಬರಲು ಒಪ್ಪಿಗೆ ಸೂಚಿಸಿದ್ದು, ಅವರ ಅನುಕೂಲ ದಿನಾಂಕವನ್ನು ಪರಿಗಣಿಸಿ ನವೆಂಬರ್‌ನಲ್ಲಿ ಕಾರ್ಯಕ್ರಮ ನಿಗದಿ ಮಾಡಲಾಗುವುದು’ ಎಂದರು.

ನಿಯೋಗದಲ್ಲಿ ಕಾಂಗ್ರೆಸ್ ಮುಖಂಡರಾದ ಬಿ.ಬಿ.ನಿಂಗಯ್ಯ, ಎಂ.ಪಿ.ಕುಮಾರಸ್ವಾಮಿ, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಎಸ್. ಜಯರಾಂ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಪಿ. ಮನು, ಮುಖಂಡರಾದ ಪಿ.ಆರ್.ವಿನಯ ಕುಮಾರ್, ಸಿ.ಕೆ.ಇಬ್ರಾಹಿಂ, ಪಿ.ಆರ್.ವಿನಯಕುಮಾರ್, ಇಮ್ತಿಯಾಜ್, ಎ.ಸಿ. ಅಯೂಬ್, ಉಮ್ಮರ್, ಬಣಕಲ್ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಇರ್ಫಾನ್, ಮಜೀದ್, ಇಮ್ರಾನ್, ನಿಖಿಲ್ ಚಕ್ರವರ್ತಿ ಮುಂತಾದವರು ಇದ್ದರು.

Deputy Chief Minister D.K. Shivakumar invited for the felicitation ceremony

Share

Leave a comment

Leave a Reply

Your email address will not be published. Required fields are marked *

Don't Miss

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಹಲವು ಅವಾಂತರಗಳು ಸೃಷ್ಟಿಯಾಗಿವೆ. ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಸುರಿಯುತ್ತಿರುವ ಮಳೆಗೆ ಹಲವು...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್ ಎಂಬುವವರ ಮನೆ ಮುಂದೆ ನಿಲ್ಲಿಸಲಾಗಿದ್ದ ಆಟೋರಿಕ್ಷಾ ಹಾಗೂ ಅವರ ಮನೆಯ ಮೇಲೆ ಬೃಹತ್ ಮರವೊಂದು...

Related Articles

ವೀರಶೈವ ಲಿಂಗಾಯತ ಸಮಾರಂಭದಲ್ಲಿ “ಕುರ್ಚಿ” ತಿಕ್ಕಾಟ ಹಲವು ಸ್ವಾಮಿಜೀಗಳ ವಿರೋದ

ಚಿಕ್ಕಮಗಳೂರು: ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಸ್ವಾಮಿಗಳ ಮಧ್ಯೆ ಕುರ್ಚಿಗಾಗಿ ಪ್ರತಿರೋಧ ಪ್ಯಕ್ತಪಡಿಸಿ ಹೊರ ನಡೆದ ಘಟನೆ...

ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ

ಕಡೂರು: ಮುಂಗಾರು ಮಳೆಯ ಕೊರತೆಯಿಂದ ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ ಎದುರಾಗಿದ್ದು, ಕುಡಿಯುವ ನೀರು, ಜಾನುವಾರುಗಳ...

ಜು.21ಕ್ಕೆ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶ

ಚಿಕ್ಕಮಗಳೂರು : ೪೬ನೇ ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶವನ್ನು ಜು.೨೧...

ಅಕ್ರಮವಾಗಿ ಸಾಗಿಸುತ್ತಿ ಕಾಡುಜಾತಿಯ ಮರಗಳ ದಿಮ್ಮಿಗಳ ವಶ

ಮೂಡಿಗೆರೆ: ಕಾಡುಜಾತಿಯ ಮರಗಳ ದಿಮ್ಮಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದುದನ್ನು ತಾಲ್ಲೂಕಿನ ಹಂಡುಗುಳಿ ಗ್ರಾಮದ ಸಮೀಪ ಅರಣ್ಯ ಇಲಾಖೆ...