ಚಿಕ್ಕಮಗಳೂರು: ರಾಜ್ಯದ ಕ್ರಿಶ್ಚಿಯನ್ ಅಲ್ಪಸಂಖ್ಯಾತ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ರಾಜ್ಯ ಸರ್ಕಾರ ಹಲವು ಯೋಜನೆ ಜಾರಿ ಮಾಡಿದ್ದು, ಸಮುದಾಯದವರು ಬಳಸಿಕೊಳ್ಳಬೇಕು ಎಂದು ಕರ್ನಾಟಕ ಕ್ರಿಶ್ಚಿಯನ್ ಸಮು ದಾಯ ಅಭಿವೃದ್ಧಿ ನಿಗಮದ ನಿರ್ದೇಶಕ ಹರ್ಷ ಮೆಲ್ವಿನ್ ಲಸ್ರಾದೊ ತಿಳಿಸಿದರು.
ಸಮುದಾಯದ ನಿರುದ್ಯೋಗಿ, ಕೃಷಿಕರು, ನವೋದ್ಯಮಿಗಳು, ವಿದ್ಯಾರ್ಥಿ ಗಳು ಹಾಗೂ ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡು ಯೋಜನೆ ಗಳನ್ನು ರೂಪಿಸಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕರ್ನಾಟಕ ರಾಜ್ಯದ ಕ್ರಿಶ್ಚಿಯನ್ ಅಲ್ಪ ಸಂಖ್ಯಾತ ಸಮುದಾಯದ, ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಯನ್ನು ಆಧರಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ನಿಗಮವು ರೂಪಿಸಿರುವ ವಿವಿಧ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ ಎಂದರು.
ಯೋಜನೆಗಳ ಮಾಹಿತಿಗೆ ಸುಗಮ ಪ್ರವೇಶ ಹಾಗೂ ಸರಳ ಅರ್ಜಿ ಪ್ರಕ್ರಿಯೆ, ಅರ್ಜಿ ಸ್ಥಿತಿಯ ಮಾಹಿತಿ ಹಂಚಿಕೆ, ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ, ಸುಲಭ ಆನ್ಲೈನ್ ಸಾಲ ಮರು ಪಾವತಿ, ನಿಗಮದ ಯೋಜನೆಗಳು ಸೇರಿದಂತೆ ಕ್ರಿಶ್ಚಿಯನ್ ಸಮುದಾಯದ ಸಾಮಾಜಿಕ ಹಾಗೂ ಆರ್ಥಿಕ ಹಿತಕ್ಕಾಗಿ ಮತ್ತು ಅವರ ಸಂಸ್ಥೆಗಳ ಬಲವರ್ಧನೆಗಾಗಿ ಕರ್ನಾಟಕ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿದೆ ಎಂದು ಹೇಳಿದರು.
ನಿಗಮಕ್ಕೆ ₹250 ಕೋಟಿ ಅನುದಾನ ಒದಗಿಸಿದ್ದಾರೆ. ಇತರ ಕಾರ್ಯಕ್ರಮಗಳನ್ನು ಪಾರದರ್ಶಕ ಮತ್ತು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಉದ್ದೇಶಕ್ಕಾಗಿ ಈ ಕಾರ್ಯಕ್ರಮ ಸಿದ್ಧಪಡಿಸಲಾಗಿದೆ. ಮಾಹಿತಿಗೆ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ವೆಬ್ಸೈಟ್ www.kccdclonline.karnataka.gov.in ನೋಡಬಹುದು ಎಂದರು.
ಸಮುದಾಯದ ಮುಖಂಡರಾದ ಜೇಮ್ಸ್ ಡಿಸೋಜ, ಸಂಜು, ಅಮರ್ ಡಿಸೋಜ, ಸಿ.ಎಂ. ಜಾರ್ಜ್ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.
The state government has several schemes for the development of the Christian minority community.
Leave a comment