Home Latest News ಕಡೂರು ಪೊಲೀಸ್‌ ಠಾಣೆಯಲ್ಲಿ ಬೆಳ್ಳಿಪ್ರಕಾಶ್‌ ಪ್ರತಿಭಟನೆ
Latest NewschikamagalurHomenamma chikmagalur

ಕಡೂರು ಪೊಲೀಸ್‌ ಠಾಣೆಯಲ್ಲಿ ಬೆಳ್ಳಿಪ್ರಕಾಶ್‌ ಪ್ರತಿಭಟನೆ

Share
Share

ಕಡೂರು: ಪಟ್ಟಣದ ಶ್ರೀಬಸವೇಶ್ವರ ವೃತ್ತದಲ್ಲಿ ಭಾನುವಾರ ರಾತ್ರಿ ಕಾರು ಹಿಂತೆಗೆಯುವ ವಿಷಯಕ್ಕೆ ಸಂಬಂಧಿಸಿ ಯುವಕರ ಮಧ್ಯೆ ಮಾತಿನ ಚಕಮಕಿ ನಡೆದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಬಗ್ಗೆ ಕಡೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೂಲತಃ ಚಿಕ್ಕಮಗಳೂರಿನ ಸಂದೇಶ್‌ ಎಂಬುವರು ಭಾನುವಾರ ರಾತ್ರಿ ಕಡೂರಿನಲ್ಲಿರುವ ಪತ್ನಿಯ ಮನೆಗೆ ಬರುವಾಗ ಬಸವೇಶ್ವರ ವೃತ್ತದಲ್ಲಿ ಇನ್ನೊಂದು ಬದಿಯಿಂದ ಬಂದ ಕಾರೊಂದು ಅವರ ಕಾರಿನ ಮುಂದೆ ನಿಂತಿತು. ಸಂದೇಶ್‌ ಕೈಸನ್ನೆ ಮಾಡಿ ಕಾರನ್ನು ಮುಂದೆ ತೆಗೆಯಲು ತಿಳಿಸಿದ್ದರು.

ಆದರೆ, ಈ ಸಂದರ್ಭದಲ್ಲಿ ಎದುರು ಇದ್ದವರು ಕಾರನ್ನು ಮುಂದಕ್ಕೆ ತೆಗೆಯುವ ಬದಲು ನಿಂದಿಸಿದರು. ಏಕೆ ನಿಂದಿಸುತ್ತೀರಿ ಎಂದು ಪ್ರಶ್ನಿಸುವಾಗ ಇನ್ನೋವಾ ಕಾರಿನಿಂದ ಇಳಿದ ಸಂತೋಷ್‌ ಸೇರಿದಂತೆ ಐವರು ಹೊಡೆದು, ಚಿನ್ನದ ಸರವನ್ನು ಕಿತ್ತು ಹಾಕಿದ್ದಾರೆ. ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ’ ಎಂದು ಸಂದೇಶ್‌ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಸಂದೇಶ್‌ ಅವರು ಮಾಜಿ ಶಾಸಕ ಹಾಗೂ ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷ ಬೆಳ್ಳಿಪ್ರಕಾಶ್‌ ಅವರ ಅಳಿಯನಾಗಿದ್ದು, ಹಲ್ಲೆಯನ್ನು ಖಂಡಿಸಿ ಹಲ್ಲೆ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಬೆಳ್ಳಿಪ್ರಕಾಶ್‌ ನೇತೃತ್ವದಲ್ಲಿ ಕಡೂರು ಠಾಣೆ ಮುಂದೆ ಪ್ರತಿಭಟನೆ ನಡೆಸಿದರು.

ಸಿಪಿಐ ಜತೆ ಮಾತುಕತೆ ನಡೆಸಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿಕ್ರಮ ಅಮಟೆ ಅವರು ಕಡೂರಿಗೆ ಬಂದು, ಪ್ರತಿಭಟನಾ ನಿರತರೊಂದಿಗೆ ಮಾತನಾಡಿ, ಆರೋಪಿ ಸಂತೋಷ್‌ ಮತ್ತು ನಾಲ್ವರು ಸ್ನೇಹಿತರ ಮೇಲೆ ಎಫ್‌ಐಆರ್‌ ದಾಖಲಿಸಿ ಬಂಧಿಸಲು ತಂಡ ರಚಿಸಿರುವುದಾಗಿ ಮಾಹಿತಿ ನೀಡಿದರು.

ತಡರಾತ್ರಿ ‌2 ಗಂಟೆ ವೇಳೆಗೆ ಪ್ರತಿಭಟನೆ ಹಿಂಪಡೆದರು. ಆರೋಪಿ ಸಂತೋಷ್‌, ಸಹಚರರು ನಾಪತ್ತೆಯಾಗಿದ್ದು ಪೊಲೀ ಸರು ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

Belliprakash protest at Kadur police station

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...