ಮೂಡಿಗೆರೆ: ತಾಲ್ಲೂಕಿನ ಚಾರ್ಮಾಡಿ ಘಾಟಿಯಲ್ಲಿ ಸೋಮವಾರ ಬೆಳಿಗ್ಗೆ ಕಾರು ಉರುಳಿ ಮೂವರು ಗಾಯಗೊಂಡಿದ್ದಾರೆ.
ಮೂಡುಬಿದಿರೆಯಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಕಾರು ಚಾರ್ಮಾಡಿ ಘಾಟಿಯ ಅಣ್ಣಪ್ಪಸ್ವಾಮಿ ದೇವಸ್ಥಾನ ಸಮೀಪ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದೆ. ಕಾರು ಜಖಂಗೊಂಡಿದೆ.
ಘಟನೆಯು ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಗಾಯಾಳುಗಳನ್ನು ಸಹ ಪ್ರಯಾಣಿಕರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
Three injured in car rollover in Charmadi Ghati
Leave a comment