Home namma chikmagalur ನಗರದಲ್ಲಿ ಪರವಾನಗಿ ಪಡೆಯದ ಅಂಗಡಿಗಳ ಬಂದ್
namma chikmagalurchikamagalurHomeLatest News

ನಗರದಲ್ಲಿ ಪರವಾನಗಿ ಪಡೆಯದ ಅಂಗಡಿಗಳ ಬಂದ್

Share
Share

ಚಿಕ್ಕಮಗಳೂರು: ನಗರಸಭೆಯಿಂದ ನಗರದಲ್ಲಿ ಉದ್ದಿಮೆ ಪರವಾನಗಿ ಪಡೆಯದೆ ಅನಧಿಕೃತವಾಗಿ ನಡೆಸುತ್ತಿದ್ದ ಅಂಗಡಿಗಳನ್ನು ಇಂದು ಭೇಟಿನೀಡಿ ಪರಿಶೀಲಿಸಿದ ಪೌರಾಯುಕ್ತರು ಹಾಗೂ ಸಿಬ್ಬಂದಿ ಬಂದ್ ಮಾಡಿಸಿ ಬೀಗ ಹಾಕಿದ ಘಟನೆ ನಡೆಯಿತು.

ನಂತರ ಮಾತನಾಡಿದ ಪೌರಾಯುಕ್ತ ಬಿ.ಸಿ ಬಸವರಾಜು, ನಗರಸಭೆಯಲ್ಲಿ ಉದ್ದಿಮೆ ಪರವಾನಗಿ ಪಡೆಯದೆ ಇರುವ ಬಗ್ಗೆ ಅನೇಕ ಬಾರಿ ಅಂಗಡಿ ಮಾಲಿಕರಿಗೆ ಸೂಚನೆ ನೀಡಿದ್ದರು ಮತ್ತು ಮೌಖಿಕವಾಗಿ ಹೇಳುವ ಮೂಲಕ ಎಚ್ಚರಿಕೆ ನೀಡಿದ್ದರೂ ಅಕ್ರಮವಾಗಿ ಉದ್ದಿಮೆ ನಡೆಸುತ್ತಿದ್ದರು ಎಂದು ತಿಳಿಸಿದರು.

ನಗರಸಭೆಯಿಂದ ಅಧಿಕೃತ ಉದ್ದಿಮೆ ಪರವಾನಗಿಯನ್ನು ಕಳೆದ ನಾಲ್ಕೈದು ವರ್ಷಗಳಿಂದ ಪಡೆಯದೆ ಮತ್ತು ನಗರಸಭೆ ಸೂಚನೆಗಳನ್ನು ಪಾಲಿಸದೇ ಇರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಎಚ್ಚರಿಕೆ ನೀಡಿದರೂ ಸ್ಪಂದಿಸದೇ ಇರುವ ಕಾರಣ ಇಂದು ಅಂಗಡಿ ಬಂದ್ ಮಾಡಿಸಲಾಗಿದೆ ಎಂದರು.

ಅನಧಿಕೃತವಾಗಿ ನಡೆಸುತ್ತಿದ್ದ ನಗರದ ಅಂಬೇಡ್ಕರ್ ರಸ್ತೆಯಲ್ಲಿ ೨ ಹಾಗೂ ಎಂಜಿ ರಸ್ತೆಯಲ್ಲಿರುವ ಮಹಾವೀರ್ ಫ್ಯಾನ್ಸಿಸ್ಟೋರ್, ಮಾತೇಶ್ವರಿ ಟೆಕ್ಸ್‌ಟೈಲ್, ವಿನಾಯಕ ಬ್ಯಾಗ್ ಪ್ಯಾಲೇಸ್ ಈ ಅಂಗಡಿಗಳನ್ನು ಬಂದ್ ಮಾಡಿಸಿ ಬೀಗ ಹಾಕಿದ್ದೇವೆ ಎಂದು ಹೇಳಿದರು.

ಉದ್ದಿಮೆದಾರರು ನಗರಸಭೆಯಿಂದ ಅಧಿಕೃತ ಉದ್ದಿಮೆ ಪರವಾನಗಿ ಪಡೆದುಕೊಳ್ಳಬೇಕು, ಇಲ್ಲದಿದ್ದಲ್ಲಿ ನಗರಸಭೆಯಿಂದ ಅಧಿಕಾರಿಗಳನ್ನೊಳಗೊಂಡ ಐದು ತಂಡಗಳನ್ನು ರಚಿಸಿದ್ದು, ಪ್ರತಿದಿನ ಅಂಗಡಿಗಳಿಗೆ ಭೇಟಿನೀಡಿ ಪರಿಶೀಲಿಸಿ ಶಿಸ್ತುಕ್ರಮ ಕೈಗೊಳ್ಳಲಿದ್ದಾರೆಂದು ಎಚ್ಚರಿಸಿದರು.

ನಗರದಲ್ಲಿ ೮ ಸಾವಿರ ವಿವಿಧ ರೀತಿಯ ಅಂಗಡಿಗಳಿದ್ದು, ವಾರ್ಷಿಕ ೧.೫೦ ಕೋಟಿ ರೂ ಉದ್ದಿಮೆ ಪರವಾನಗಿ ಶುಲ್ಕ ನಗರಸಭೆಗೆ ಪಾವತಿಯಾಗಬೇಕು. ಕಳೆದ ನಾಲ್ಕೈದು ವರ್ಷಗಳಿಂದ ಉದ್ದಿಮೆ ಪರವಾನಗಿ ಪಡೆದುಕೊಂಡಿಲ್ಲದ ಕಾರಣದಿಂದ ೩.೫೦ ಕೋಟಿ ರೂ ಬಾಕಿ ಇದೆ ಎಂದು ಅಂದಾಜಿಸಲಾಗಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಕಂದಾಯ ಅಧಿಕಾರಿ ದೀಪಕ್, ಸಹಾಯಕ ಕಾರ್ಯ ಪಾಲಕ ಅಭಿಯಂತರರಾದ ಲೋಕೇಶ್, ಆರೋಗ್ಯ ನಿರೀಕ್ಷಕರಾದ ರಂಗಪ್ಪ, ನಾಗಪ್ಪ, ಪರಿಸರ ಅಭಿಯಂತರರಾದ ವೆಂಕಟೇಶ್ ಉಪಸ್ಥಿತರಿದ್ದರು.

Unlicensed shops in the city closed

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...