Home namma chikmagalur ಬಹಿರಂಗ ಕ್ಷಮೆ ಕೇಳದಿದ್ದರೆ ಸಿ.ಟಿ. ರವಿ ಮನೆಗೆ ಮುತ್ತಿಗೆ
namma chikmagalurchikamagalurHomeLatest News

ಬಹಿರಂಗ ಕ್ಷಮೆ ಕೇಳದಿದ್ದರೆ ಸಿ.ಟಿ. ರವಿ ಮನೆಗೆ ಮುತ್ತಿಗೆ

Share
Share

ಚಿಕ್ಕಮಗಳೂರು: : ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಮೆಡಿಕಲ್ ಕಾಲೇಜು ಸಮಸ್ಯೆಗಳ ಬಗ್ಗೆ ಪರಿಶೀಲನೆ ಸಂದರ್ಭದಲ್ಲಿ ಸವಿತಾ ಸಮಾಜದ ಬಗ್ಗೆ ನಿಷೇಧಿತ ಪದ ಬಳಕೆ ಮಾಡಿರುವುದನ್ನು ಖಂಡಿಸಿ ಕೂಡಲೇ ಬಹಿರಂಗ ಕ್ಷಮೆ ಕೇಳದಿದ್ದರೆ ರವಿ ಮನೆಗೆ ಮುತ್ತಿಗೆ ಹಾಕುವುದಾಗಿ ಸಿಡಿಎ ನಾಮಿನಿ ಸದಸ್ಯ ರಾಘವೇಂದ್ರ ಎಚ್ಚರಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಂವಿಧಾನದಲ್ಲಿ ಎಲ್ಲರಿಗೂ ಸಮಾನತೆ ಮತ್ತು ಅರ್ಹತೆ, ಯೋಗ್ಯತೆ ನೀಡಿದ್ದು, ಹೇಳಿಕೆಯನ್ನು ತಿರುಚಲಾಗಿದೆ ಎಂದು ಹೇಳಿದ್ದಾರೆ, ವಿಡಿಯೋ ಮತ್ತು ಧ್ವನಿಮುದ್ರಿಕೆಯನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಿದರೆ ಸತ್ಯ ತಿಳಿಯುತ್ತದೆ ಎಂದರು.
ಈ ಸಂಬಂಧ ಜಿಲ್ಲಾಮಟ್ಟದ ನಾಯಕರೊಂದಿಗೆ ಚರ್ಚಿಸಲಾಗಿದ್ದು, ರಾಜ್ಯ ನಾಯಕರಿಗೂ ವಿಷಯ ತಿಳಿಸಿದ್ದೇವೆ. ಹೋರಾಟ ರೂಪಿಸಿದರೆ ಹಲವು ಜನಪರ ಸಂಘಟನೆಗಳು ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಸಿ.ಟಿ. ರವಿ ಹೇಳುವ ಹಾಗೆ ಎಲ್ಲಿ ಕಳೆದುಕೊಂಡಿದ್ದೇನೊ ಅಲ್ಲೇ ಪಡೆಯಬೇಕು ಎಂಬಂತೆ ಅವರು ಎಲ್ಲಿ ಮಾತನಾಡಿದ್ದಾರೋ ಅಲ್ಲೇ ಬಹಿರಂಗ ಕ್ಷಮೆ ಕೇಳಬೇಕು. ಈ ಪದಬಳಕೆಯಿಂದ ಸವಿತಾ ಮಹರ್ಷಿಗಳಿಗೆ ಮತ್ತು ವಿಶ್ವಗುರು ಬಸವಣ್ಣನವರ ಅನುಭವ ಮಂಟಪದಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಶಿವಶರಣ ಹಡಪದ ಅಪ್ಪಣ್ಣ ಅವರಿಗೆ ಮಾಡಿದ ಅವಮಾನ ಎಂದು ದೂರಿದರು.

ಸವಿತಾ ಸಮಾಜ ಹಿಂದೂಗಳಲ್ಲದೆ ನಾವೂ ಸಹ ದೇವರಿಗೆ ದೀಪ ಹಚ್ಚುತ್ತೇವೆ. ಹಿಂದೂತ್ವ ಎಂದು ಹೇಳುವ ಸಿ.ಟಿ. ರವಿ ಮಾನಸಿಕ ಸ್ತಿಮಿತ ಕಳೆದುಕೊಂಡು ನಿಷೇಧಿತ ಪದ ಬಳಸಿ ಹಿಂದೂ ಧರ್ಮಕ್ಕೆ ಅಪಮಾನ ಮಾಡಿದ್ದಾರೆ. ನಿಮ್ಮ ಆಡಂಬರದ ಹಿಂದೂತ್ವ ಇದರಲ್ಲಿ ಎದ್ದುಕಾಣುತ್ತಿದ್ದು, ನಾನು ಅವನಾ ಎಂದು ಹೇಳಿರುವ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಒತ್ತಾಯಿಸಿದರು.

ಸಿ.ಟಿ ರವಿಯವರು ಸೋಲಿನ ಹತಾಶೆಯಿಂದ ಹೊರಬರಲಾಗದೆ ಮಾನಸಿಕ ಸ್ತಿಮಿತ ಕಳೆದುಕೊಂಡು ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಮಹಿಳಾ ಸಚಿವೆಯೊಬ್ಬರನ್ನು ಕುರಿತು ಕೆಟ್ಟಪದ ಬಳಕೆ ಮಾಡಿ ಮಾನಸಿಕ ಸ್ತಿಮಿತ ಸರಿಯಿಲ್ಲ ಎಂದು ರಾಜ್ಯದ ಜನತೆಗೆ ತೋರಿಸಿಕೊಟ್ಟು ಅದೇ ಚಾಳಿಯನ್ನು ಜಿಲ್ಲೆಯಲ್ಲಿ ಸವಿತಾ ಸಮಾಜದ ಬಗ್ಗೆ ನಿಷೇಧಿತ ಪದಬಳಕೆಯನ್ನು ಖಂಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸವಿತಾ ಸಮಾಜದ ಮುಖಂಡರುಗಳಾದ ಚಂದ್ರಣ್ಣ, ಚಂದ್ರಶೇಖರ್ ಉಪಸ್ಥಿತರಿದ್ದರು.

C.T. Ravi’s house will be besieged if he does not apologize publicly.

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...