Home namma chikmagalur ಒಂಟಿ ಸಲಗ ದಾಳಿ ಖಂಡಿಸಿ ರಸ್ತೆ ಸಂಚಾರ ತಡೆದು ಬೃಹತ್‌ ಪ್ರತಿಭಟನೆ
namma chikmagalurchikamagalurHomeLatest News

ಒಂಟಿ ಸಲಗ ದಾಳಿ ಖಂಡಿಸಿ ರಸ್ತೆ ಸಂಚಾರ ತಡೆದು ಬೃಹತ್‌ ಪ್ರತಿಭಟನೆ

Share
filter: 0; fileterIntensity: 0.0; filterMask: 0; captureOrientation: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.4998662, 0.21415202);sceneMode: 7864320;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 48;
Share

ಶೃಂಗೇರಿ: ತಾಲ್ಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನದೊಳಗಿನ ಕೆರೆಕಟ್ಟೆ ಗ್ರಾಮದ ಕೆರೆಗದ್ದೆಗೆ ಬಂದಿದ್ದ ಒಂಟಿ ಸಲಗ ದಾಳಿಗೆ ಗ್ರಾಮದ ಇಬ್ಬರು ಮೃತಪಟ್ಟಿದ್ದು, ಇದರಿಂದ ರೊಚ್ಚಿಗೆದ್ದ ಸ್ಥಳೀಯರು ರಸ್ತೆ ಸಂಚಾರ ತಡೆದು ಆಕ್ರೋಶ ವ್ಯಕ್ತಪಡಿಸಿದರು.

ಕೆರೆಗದ್ದೆಯ ಹರೀಶ್ ಶೆಟ್ಟಿ (53) ವರ್ಷ ಮತ್ತು ಉಮೇಶ್ ಗೌಡ (54) ಮೃತಪಟ್ಟವರು. ಹರೀಶ್‍ ಅವರಿಗೆ ತಾಯಿ, ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಉಮೇಶ್‍ ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ.

ಹರೀಶ್ ಶೆಟ್ಟಿ ಅವರು ದನದ ಕೊಟ್ಟಿಗೆಗೆ ಸೋಪ್ಪು ತರಲು ಪಕ್ಕದ ತೋಟದ ಸಮೀಪ ಹಡ್ಯಕ್ಕೆ ತೆರಳಿದ್ದರು. ಸೊಪ್ಪು ಹೊತ್ತು ಬರುವಾಗ ಏಕಾಏಕಿ ಒಂಟಿ ಸಲಗ ದಾಳಿ ಮಾಡಿದೆ. ಮೃತರು ಕೂಗಿಕೊಂಡಾಗ ನಾಯಿಗಳು ಬೊಗಳಲು ಆರಂಭಿಸಿದವು. ಆಗ ಪಕ್ಕದ ಮನೆಯ ಉಮೇಶ್ ಗೌಡ ಅವರು ನೋಡಲು ಹೋಗಿದ್ದಾಗ ಅವರ ಮೇಲೂ ಆನೆ ದಾಳಿ ಮಾಡಿದೆ ಎಂದು ಸ್ಥಳೀಯರು ಹೇಳಿದರು.

ಹರೀಶ್ ಶೆಟ್ಟಿ ಮತ್ತು ಉಮೇಶ್ ಗೌಡ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಸಂಖ್ಯೆಯ ಗ್ರಾಮಸ್ಥರು ಜಮಾಯಿಸಿ ಅರಣ್ಯ ಇಲಾಖೆ ಮತ್ತು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅರಣ್ಯ ಸಚಿವ ಈಶ್ವರ ಖಂಡ್ರೆ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ ಜಾರ್ಜ್, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಟಿ.ಡಿ. ರಾಜೇಗೌಡ ಮತ್ತು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದರು.

ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಮಂಗಳೂರು, ಕಾರ್ಕಳದಿಂದ ಶೃಂಗೇರಿಗೆ ಬರುವ ರಸ್ತೆಯಲ್ಲಿ ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಿದರು. ಕೆರೆಕಟ್ಟೆಯಿಂದ ಮಾಳ ಗೇಟ್‍ ತನಕ 20 ಕಿಲೋ ಮೀಟರ್ ತನಕ  ವಾಹನಗಳು ಸಾಲುಗಟ್ಟಿ ನಿಂತಿದ್ದವು.

ಮಲೆನಾಡು ಮತ್ತು ಕರಾವಳಿ ಜನಪರ ಒಕ್ಕೂಟ, ಮಲೆನಾಡು ನಾಗರಿಕ ಹಕ್ಕುಗಳ ಹೋರಾಟ ಸಮಿತಿ, ರೈತ ಸಂಘ, ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರು, ಜನಪ್ರತಿನಿಧಿಗಳು, ಗ್ರಾಮಸ್ಥರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

‘ರೈತರ ಹೆಣ ಬಿದ್ದ ಮೇಲೆ ಅಧಿಕಾರಿಗಳು ಬರುತ್ತಾರೆ. ಜನಪ್ರತಿನಿಧಿಗಳು ಸಾಂತ್ವನ ಹೇಳಿ ಹೋಗುತ್ತಾರೆ. ಒಂದಷ್ಟು ಪರಿಹಾರ ನೀಡಿದರೆ ಸತ್ತವರು ಎದ್ದು ಬರಲು ಸಾಧ್ಯವಿಲ್ಲ. ಅವರ ಕುಟುಂಬದವರನ್ನು ದೇವರೇ ಕಾಪಾಡಬೇಕು. ಶೃಂಗೇರಿ ಕ್ಷೇತ್ರದಲ್ಲಿ ರೈತರ ಸಮಸ್ಯೆಗಳನ್ನು ಕೇಳುವ ಕಾಳಜಿ ಅಧಿಕಾರಿಗಳಿಗೆ ಇಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಣ್ಣುಮುಚ್ಚಿ ಕುಳಿತಿದೆ. ಶೃಂಗೇರಿ ಕ್ಷೇತ್ರದಲ್ಲಿ ಆನೆಗಳು ಬಾರದಂತೆ ಸರ್ಕಾರ ಕೂಡಲೇ ಬಂದೋಬಸ್ತ್‌ ಮಾಡಬೇಕು’ ಎಂದು ರೈತ ಸಂಘದ ಕ್ಷೇತ್ರ ಘಟಕದ ಅಧ್ಯಕ್ಷ ಕರುವಾನೆ ನವೀನ್ ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಶಾಸಕ ಟಿ.ಡಿ ರಾಜೇಗೌಡ, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ, ಮಂಗಳೂರು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕರಿಕಾಳನ್, ವನ್ಯಜೀವಿ ವಿಭಾಗದ ಡಿಸಿಎಫ್‌ ಶಿವರಾಮ ಬಾಬು, ಎಸಿಎಫ್ ಮೋಹನ್ ಕುಮಾರ್, ವಲಯಾ ಅರಣ್ಯ ಸಂರಕ್ಷಣಾಧಿಕಾರಿ ಮಧುಕರ್, ವನ್ಯಜೀವಿ ವಲಯ ಅರಣ್ಯ ಸಂರಕ್ಷಣಾಧಿಕಾರಿ ಅನಿಲ್ ಕುಮಾರ್ ಭೇಟಿ ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರು.

ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕ ಟಿ.ಡಿ.ರಾಜೇಗೌಡ ಅವರು ಸರ್ಕಾರದಿಂದ ನೀಡುವ ಪರಿಹಾರದ ₹20 ಲಕ್ಷ ಮೊತ್ತದ ಚೇಕ್ ವಿತರಿಸಿದರು. ವೈಯಕ್ತಿಕವಾಗಿ ಮೃತರ ಕುಟುಂಬಕ್ಕೆ ತಲಾ ₹1 ಲಕ್ಷ ಹಣದ ಜೊತೆ ಎರಡು ಕುಟುಂಬಕ್ಕೂ ತಲಾ ₹5 ಲಕ್ಷ ಪರಿಹಾರ ವಿತರಿಸಲಾಗುವುದು. ಆನೆ ಸೆರೆ ಹಿಡಿಯಲು ಕ್ರಮ ಕೈಗೊಳ್ಳಲಾಗುವುದು. ಉಳಿದ ಆನೆಗಳನ್ನು ಓಡಿಸಲು ಅರಣ್ಯ ಇಲಾಖೆ ಮುಂದಾಗಲಿದೆ ಎಂದು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ಕುದುರೆಮುಖ ರಾಷ್ಟ್ರೀಯ ಉದ್ಯಾನದಿಂದ ಹೊರ ಬರಲು ಸಿದ್ಧವಿರುವ ಕುಟುಂಬಗಳಿಗೆ ಪುನರ್ವಸತಿ ನೀಡಿದ್ದರೆ ಈ ಸಾವು ಸಂಭವಿಸುತ್ತಿರಲಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ‘ಪುನರ್ವಸತಿಗೆ 650 ಕುಟುಂಬಗಳು ಬಾಕಿ ಇವೆ. ಮೌಲ್ಯಮಾಪನ ಸಂಪೂರ್ಣಗೊಂಡು ಜಿಲ್ಲಾ ಸಮಿತಿಯ ಅನುಮೋದನೆಗೆ ಬಾಕಿ ಇರುವ ಪ್ರಕರಣಗಳಿಗೆ 2025ರ ಹೊಸ ದರ ಅನ್ವಯಿಸುವಂತೆ ಮಾಡಬೇಕು. ತೋಟಗಾರಿಕೆ ಇಲಾಖೆಯ ಬೆಳೆಗಳ ಮೌಲ್ಯಮಾಪನ ವೇಳೆಯಲ್ಲಿ ರೈತರು ಬೆಳೆದ ಎಲ್ಲಾ ಮಾದರಿಯ ಬೆಳೆಗಳಿಗೆ ಗ್ರೇಡ್ –1  ನೀಡಬೇಕು’ ಎಂದು ಸ್ಥಳೀಯರಾದ ರಾಜೇಶ್ ದ್ಯಾವಂಟು ಒತ್ತಾಯಿಸಿದರು.

Massive protest blocking road traffic condemning lone wolf attack

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...