Home ಮನುಷ್ಯನ ಜೀವಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ.
Home

ಮನುಷ್ಯನ ಜೀವಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ.

Share
Share

ಶೃಂಗೇರಿ: ‘ಮನುಷ್ಯನ ಜೀವ ಅತ್ಯಮೂಲ್ಯವಾದದ್ದು, ಮನುಷ್ಯನ ಜೀವಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಆದರೆ ದುರದೃಷ್ಟವಾಗಿ ಈ ದುರಂತ ಸಂಭವಿಸಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ತಾಲ್ಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನದ ಒಳಗೆ ಕೆರೆಕಟ್ಟೆ ಗ್ರಾಮದ ಕೆರೆಗದ್ದೆಯಲ್ಲಿ ಆನೆ ತುಳಿತಕ್ಕೊಳಗಾಗಿ ಮೃತಪಟ್ಟ ಹರೀಶ್ ಶೆಟ್ಟಿ ಮತ್ತು ಉಮೇಶ್ ಗೌಡ ಅವರ ಮನೆಗೆ ಭೇಟಿ ನೀಡಿ, ಬಳಿಕ ಅವರು ಮಾತನಾಡಿದರು.

‘ಮನುಷ್ಯನ ಜೀವವೂ ಉಳಿಯಬೇಕು, ಪ್ರಾಣಿಯ ಸಂಕುಲವೂ ಉಳಿಯಬೇಕು. ಇಂದು ಆನೆಗಳ ಸಂಖ್ಯೆ, ಹುಲಿಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ನೈಸರ್ಗಿಕ ಸಂಪತ್ತಿನಲ್ಲಿ ಸಮತೋಲನ ಕಾಪಾಡಿಕೊಳ್ಳಬೇಕಾಗಿದೆ. ನಗರೀಕರಣದಿಂದಾಗಿ ಅರಣ್ಯದ ವಿಸ್ತೀರ್ಣ ಕಡಿಮೆ ಆಗುತ್ತಿದೆ. ಪ್ರಾಣಿಗಳ ದಾಳಿಯಿಂದಾಗಿ ರಾಜ್ಯದಲ್ಲಿ 30 ರಿಂದ 40 ಜನರು ಮೃತಪಟ್ಟ ಘಟನೆಗಳು ಸಂಭವಿಸುತ್ತಿದೆ. ಹರೀಶ್ ಶೆಟ್ಟಿ ಮತ್ತು ಉಮೇಶ್ ಗೌಡ ಅವರ ಕುಟುಂಬದ ನೋವಿನ ಜೊತೆಗೆ ಇಲಾಖೆ ಹಾಗೂ ನಾವು ಸದಾ ಇರುತ್ತೇವೆ. ಅವರ ಕುಟುಂಬದ ಕಷ್ಟ ಸುಖಕ್ಕೆ ಸ್ಪಂದಿಸಲಿದೆ ಎಂದು ಹೇಳಿದರು.

ಮೃತರ ಕುಟುಂಬಕ್ಕೆ ಸರ್ಕಾರದಿಂದ ತಲಾ ₹20 ಲಕ್ಷ ನೀಡಲಾಗಿದೆ. ವೈಯಕ್ತಿಕವಾಗಿ ಎರಡು ಕುಟುಂಬಕ್ಕೆ ತಲಾ ₹5 ಲಕ್ಷ ಮತ್ತು ಶಾಸಕ ಟಿ.ಡಿ ರಾಜೇಗೌಡರು ಎರಡು ಕುಟುಂಬಕ್ಕೆ ತಲಾ ₹1 ಲಕ್ಷವನ್ನು ಶಾಸಕ ಟಿ.ಡಿ.ರಾಜೇಗೌಡರ ಮೂಲಕ ತಲುಪಿಸಲಾಗುತ್ತದೆ. ಕಾಯಂ ಆಗಿ ಉದ್ಯೋಗ ಕಲ್ಪಿಸಲು ಅವಕಾಶವಿಲ್ಲದೇ ಇರುವುದರಿಂದ ಕಟುಂಬದಲ್ಲಿನ ಒಬ್ಬರಿಗೆ ಅರಣ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಉದ್ಯೋಗವನ್ನು ತಕ್ಷಣವೇ ನೀಡಲು ಸೂಚಿಸಲಾಗಿದೆ. ಪರಿಹಾರದ ಧನವನ್ನು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು.

ಮುಂಬರುವ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಕಾರ್ಯೋನ್ಮುಖರಾಗಿದ್ದಾರೆ. ಆನೆ ಯಾವ ಸಮಯದಲ್ಲಿ ಬರುತ್ತವೆ. ಹೇಗೆ ಬರುತ್ತವೆ, ಎಂದು ಗೊತ್ತಾಗುವುದಿಲ್ಲ’ ಎಂದರು.

ಈ ಸಂದರ್ಭದಲ್ಲಿ ಶಾಸಕ ಟಿ.ಡಿ.ರಾಜೇಗೌಡ, ಕಾಡಾ ಅಧ್ಯಕ್ಷ ಡಾ.ಕೆ.ಪಿ ಅಂಶುಮಂತ್, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಎಸ್‍ಪಿ ವಿಕ್ರಮ್ ಅಮ್ಟೆ, ಮಂಗಳೂರು ಅರಣ್ಯ ಸಂರಕ್ಷಣಾಧಿಕಾರಿ ಕರಿಕಾಳನ್, ವನ್ಯಜೀವಿ ವಿಭಾಗದ ಡಿಎಫ್‍ಒ ಶಿವರಾಮ್ ಬಾಬು, ಎಸಿಎಫ್ ಮೋಹನ್ ಕುಮಾರ್, ವಲಯಾ ಅರಣ್ಯ ಸಂರಕ್ಷಣಾಧಿಕಾರಿ ಮಧುಕರ್, ವನ್ಯಜೀವಿ ವಲಯಾ ಅರಣ್ಯ ಸಂರಕ್ಷಣಾಧಿಕಾರಿ ಅನಿಲ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಭಟ್, ಪುಟ್ಟಪ್ಪ ಹೆಗ್ಡೆ, ದಿನೇಶ್ ಹೆಗ್ಡೆ, ಎಂ.ಎಚ್ ನಟರಾಜ್, ನೂತನ್ ಕುಮಾರ್, ಭಾಸ್ಕರ್ ನಾಯ್ಕ, ವೆಂಕಟೇಶ್ ಕುರದಾಮನೆ, ರಾಜೇಶ್ ದ್ಯಾವಂಟು, ಜನಪ್ರತಿನಿಧಿಗಳು, ಕೆರೆಕಟ್ಟೆ ಗ್ರಾಮದ ಸ್ಥಳೀಯ ಮುಖಂಡರು, ಸ್ಥಳೀಯ ಕಾಂಗ್ರೆಸ್, ಬಿಜೆಪಿ ಮುಖಂಡರು ಹಾಜರಿದ್ದರು.

Human life cannot be priced

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...