Home namma chikmagalur ರಸ್ತೆ ಅಪಘಾತದಲ್ಲಿ ವೃದ್ದ ದಂಪತಿಗಳ ಸಾವು
namma chikmagalurajjampuraCrime NewsHomeLatest News

ರಸ್ತೆ ಅಪಘಾತದಲ್ಲಿ ವೃದ್ದ ದಂಪತಿಗಳ ಸಾವು

Share
Share

ಅಜ್ಜಂಪುರ: ತಾಲ್ಲೂಕಿನ ಮಾಕೋ ನಹಳ್ಳಿ (ಬುಕ್ಕಾಂಬುಧಿ) ಅತ್ತಿಗಟ್ಟೆ ಕ್ರಾಸ್‌ ಬಳಿ ಭಾನುವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಪತಿ-ಪತ್ನಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಅಜ್ಜಂಪುರದಿಂದ ಬುಕ್ಕಾಂಬುಧಿ ಕಡೆಗೆ ಸಾಗುತ್ತಿದ್ದ ಕಾರು, ಬೈಕ್‌ ನಡುವೆ ಅ‍ಪಘಾತ ನಡೆದಿದ್ದು, ಬೈಕ್‌ನ ಹಿಂಬದಿಯಲ್ಲಿ ಕುಳಿತಿದ್ದ ಹೊಸಹಳ್ಳಿ ತಾಂಡ್ಯದ ನಾಗಿ ಬಾಯಿ (68) ಸ್ಥಳದಲ್ಲಿಯೇ ಮೃತಪಟ್ಟಿದ್ದರೆ. ಪತಿ ಗೋವಿಂದ ನಾಯ್ಕ್ (‌75) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಬೈಕ್‌ ಚಲಾಯಿಸುತ್ತಿದ್ದ ಸಂತೋಷ ನಾಯ್ಕ ಗಾಯಗೊಂಡಿದ್ದಾರೆ. ಅಪಘಾತ ಸ್ಥಳದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಅತ್ತಿಗಟ್ಟೆ ಪಾರ್ವತಿ ಎಂಬುವರು ಗಾಯಗೊಂಡಿದ್ದು, ಇಬ್ಬರೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಮೃತರ ಸಂಬಂಧಿ ಚಂದ್ರಾನಾಯ್ಕ ಪಟ್ಟಣ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

Elderly couple killed in road accident
Share

Leave a comment

Leave a Reply

Your email address will not be published. Required fields are marked *

Don't Miss

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಂಸದರ ಅಸಮಾಧಾನ

ಚಿಕ್ಕಮಗಳೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ವಿವಿಧ ಏಜೆನ್ಸಿಗಳ ಆಮೆಗತಿಯ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಬಿಗಿ...

ವಸತಿ ಶಾಲೆಯಿಂದ ಓಡಿಹೋದ ಮಕ್ಕಳು…?

ಚಿಕ್ಕಮಗಳೂರು: ಕಾಫಿನಾಡಿನ ತುಡುಕೂರು ಗ್ರಾಮದಲ್ಲಿರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ ತಡರಾತ್ರಿ ನಡೆದ ಮಕ್ಕಳ ಗಲಾಟೆ ಸದ್ಯ ದೊಡ್ಡ ಆತಂಕಕ್ಕೆ ಕಾರಣವಾಗಿದೆ. ಶಾಲೆಯಲ್ಲಿ ಮಕ್ಕಳ ನಡುವೆ ಉಂಟಾದ ಜಗಳದಿಂದ...

Related Articles

ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್ ವಿರುದ್ಧ ಆಯೋಗದ ತೀರ್ಪು

ಚಿಕ್ಕಮಗಳೂರು: ಸಕಾಲದಲ್ಲಿ ಆಹಾರ ಪದಾರ್ಥವನ್ನು ತಲುಪಿಸದೆ ಆಹಾರ ಸಾಮಗ್ರಿಗಳು ಹಾಳಾಗಲು ಕಾರಣವಾದ ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್...

ಮುತ್ತೋಡಿ ಅರಣ್ಯದಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಚಿರತೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ದ ಮುತ್ತೋಡಿ ಅರಣ್ಯ ವಲಯದಲ್ಲಿ ಪ್ರವಾಸಿಗರಿಗೆ ಅತ್ಯಂತ ಅಪರೂಪದ ಹಾಗೂ ರೋಮಾಂಚನಕಾರಿ ದೃಶ್ಯವೊಂದು...

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ...