Home namma chikmagalur ಮೂಡಿಗೆರೆ ಟಿಎಪಿಸಿಎಂಎಸ್ ಚುನಾವಣೆ – ಶಾಸಕಿ ನಯನಮೋಟಮ್ಮಗೆ ಮುಖಭಂಗ
namma chikmagalurchikamagalurHomeLatest News

ಮೂಡಿಗೆರೆ ಟಿಎಪಿಸಿಎಂಎಸ್ ಚುನಾವಣೆ – ಶಾಸಕಿ ನಯನಮೋಟಮ್ಮಗೆ ಮುಖಭಂಗ

Share
Share

ಮೂಡಿಗೆರೆ: ಇಲ್ಲಿನ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಸಿಎಂಎಸ್) ಆಡಳಿತ ಮಂಡಳಿಯ 8 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟವು ಗೆಲುವು ಸಾಧಿಸಿತು.

ಪಟ್ಟಣದ ರೈತಭವನದಲ್ಲಿ ನಡೆದ ಚುನಾವಣೆ ಕುತೂಹಲ ಮೂಡಿಸಿತ್ತು.

ಬಿಜೆಪಿ ಹಾಗೂ ಜೆಡಿಎಸ್ ಒಂದಾಗಿ ಎನ್‌ಡಿಎ ಮೈತ್ರಿಕೂಟ ರಚಿಸಿ ಕಣಕ್ಕಿಳಿದಿದ್ದರೆ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ರಂಜನ್ ಅಜಿತ್ ಕುಮಾರ್ ಕಾಂಗ್ರೆಸ್‌ ಜತೆ ಸೇರಿ ಟಿಎಪಿಸಿಎಂಎಸ್ ‌ಅಭಿವೃದ್ಧಿ ವೇದಿಕೆ ಎಂಬ ಒಕ್ಕೂಟ ರಚಿಸಿ ಕಣಕ್ಕಿಳಿ ದಿದ್ದರು.

ಎಂಟು‌ ಸ್ಥಾನಗಳಲ್ಲಿ ಬಿಜೆಪಿಯ ಎನ್‌ಡಿಎ ಒಕ್ಕೂಟದ ಏಳು‌ ಮಂದಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್‌ನೊಂದಿಗೆ ಕಣಕ್ಕಿಳಿದಿದ್ದ ಜೆಡಿಎಸ್ ಜಿಲ್ಲಾ ಘಟದಕ ಅಧ್ಯಕ್ಷ ರಂಜನ್ ಅಜಿತ್ ಕುಮಾರ್ ಗೆಲುವು‌ ಸಾಧಿಸಿದರು. 1,043 ಮತದಾರರಿರುವ ಟಿಎಪಿಸಿಎಂಎಸ್‌ನಲ್ಲಿ 1015 ಮಂದಿ ಹಕ್ಕು ಚಲಾಯಿಸಿದ್ದು, ಶೇ 97.31 ಮತದಾನವಾಗಿ ಭಾನು ವಾರ ತಡರಾತ್ರಿ ಮತ‌ಎಣಿಕೆ ಮುಕ್ತಾಯವಾಯಿತು.

ಸಾಮಾನ್ಯ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿ ಪಿ.ಜಿ.ಅನುಕುಮಾರ್ ಪಟ್ಟದೂರು 658 ಮತ, ಸಾಮಾನ್ಯ ಕ್ಷೇತ್ರದಿಂದ ಟಿಎಪಿಸಿಎಂಎಸ್ ಅಭಿವೃದ್ಧಿ ವೇದಿಕೆ ಅಭ್ಯರ್ಥಿ ರಂಜನ್ ಅಜಿತ್ ಕುಮಾರ್ 572 ಮತ, ಬಿಸಿಎಂ ಬಿ. ಕ್ಷೇತ್ರದಿಂದ ಎಂ.ಕೆ.ಚಂದ್ರೇಶ್ ಮಗ್ಗಲಮಕ್ಕಿ 592 ಮತ, ಮಹಿಳಾ ಮೀಸಲು ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿ ಬಿ.ಎಲ್.ವಿದ್ಯಾರಾಜು ಕನ್ನಾಪುರ 576 ಮತ ಹಾಗೂ ಪರಿಶಿಷ್ಟ ಜಾತಿ ಮಹಿಳಾ ಮೀಸಲು ಕ್ಷೇತ್ರದಿಂದ ಪುಟ್ಟಮ್ಮ ಕುನ್ನಹಳ್ಳಿ 457 ಮತ, ಬಿಸಿಎಂ ಎ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿ ಟಿ.ಎ.ಶೇಖರ್ ಬಂಗೇರ ಜಕ್ಕಳಿ 477 ಮತ, ಪರಿಶಿಷ್ಟ ಮೀಸಲು ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿ ಕೆ.ಬಿ.ಗಣೇಶ್ ಕೆಸವೊಳಲು 504 ಮತ, ಎಸ್‌ಟಿ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿ ರಮೇಶ್ ಕುನ್ನಹಳ್ಳಿ 418 ಮತ ಪಡೆದು ಗೆಲುವು ಸಾಧಿಸಿದ್ದಾರೆ.

Mudigere TAPCMS elections – MLA Nayana Motamma faces a facelift

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...