ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಕಟ್ಟೆ ಸಮೀಪದ ಕೆರೆಗದ್ದೆ ಗ್ರಾಮದಲ್ಲಿ ಇಬ್ಬರನ್ನು ಬಲಿ ಪಡೆದು, ಬೆಳೆ ನಾಶ ಮಾಡಿ ಆತಂಕ ಸೃಷ್ಟಿ ಮಾಡಿದ್ದ ಕಾಡಾನೆ ಕೊನೆಗೂ ಸೆರೆಯಾಗಿದೆ. ಭಾನುವಾರ ಸಂಜೆಯಿಂದ ಕಾರ್ಯಾಚರಣೆ ನಡೆಸಿದ್ದ ಅರಣ್ಯ ಇಲಾಖೆ ಕೊನೆಗೂ ಹಂತಕ ಆನೆಯನ್ನು ಲಾಕ್ ಮಾಡಿದೆ.
ಕಿಲ್ಲರ್ ಸಲಗದ ಓಡಾಟದ ಸುಳಿವು ಸಿಗುತ್ತಿದ್ದಂತೆ ಅಲರ್ಟ್ ಆದ ಅರಣ್ಯ ಇಲಾಖೆಯ ಸಿಬ್ಬಂದಿ, ರಾತ್ರಿ ವೇಳೆ ಕಾರ್ಯಾಚರಣೆ ನಡೆಸಿದ್ದಾರೆ. ಭಗವತಿ ಪ್ರದೇಶದ ಬಳಿ ಕಾಡಾನೆಗೆ ಪಶು ವೈದ್ಯರು ಡಾಟ್ ಮಾಡಿದ್ದಾರೆ. ಏಕಲವ್ಯ ನೇತೃತ್ವದ ಹರ್ಷ, ಅಜೇಯ, ಧನಂಜಯ, ಪ್ರಶಾಂತ ಕುಮ್ಕಿ ಆನೆಗಳು ಕಾರ್ಯಾಚರಣೆ ನಡೆಸಿದ್ದು, ಹಂತಕ ಕಾಡಾನೆಯನ್ನು ಲಾಕ್ ಮಾಡಲಾಗಿದೆ. ಸೋಮವಾರ ಬೆಳಗ್ಗೆ ನಡೆಯಬೇಕಿದ್ದಕಾರ್ಯಾಚರಣೆಯನ್ನು ಭಾನುವಾರ ರಾತ್ರಿಯೇ ನಡೆಸಿದ ಅರಣ್ಯ ಇಲಾಖೆ ಕಾಡಾನೆ ಸೆರೆ ಕಾರ್ಯಚರಣೆ ಯಶಸ್ವಿಯಾಗಿದೆ.
Forest Department successful in capturing Sringeri killer elephant
Leave a comment