Home namma chikmagalur ಅರಣ್ಯ ಭೂಮಿ ಮಂಜೂರು ಪತ್ತೆ ಮಾಡಲು ಎಸ್‌ಐಟಿ ರಚನೆ ವಿರೋಧ
namma chikmagalurchikamagalurHomeLatest News

ಅರಣ್ಯ ಭೂಮಿ ಮಂಜೂರು ಪತ್ತೆ ಮಾಡಲು ಎಸ್‌ಐಟಿ ರಚನೆ ವಿರೋಧ

Share
Share

ಚಿಕ್ಕಮಗಳೂರು: ಅರಣ್ಯ ಭೂಮಿ ಮಂಜೂರು ಪತ್ತೆಗೆ ಕೇಂದ್ರ ಸರ್ಕಾರ ಎಸ್‌ಐಟಿ ರಚನೆ ಮಾಡಿದ್ದು, ಇದರಿಂದ ಜಿಲ್ಲೆಯ ಸಾವಿರಾರು ಸಣ್ಣ ರೈತರು ಭೂಮಿಯ ಹಕ್ಕು ಕಳೆದುಕೊಳ್ಳಲಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್ ಹೇಳಿದರು.

‘1980ರ ನಂತರ ಮಂಜೂರಾದ ಅರಣ್ಯ ಭೂಮಿ ಗುರುತಿಸಲು ಎಸ್‌ಐಟಿ ಮುಂದಾಗಿದೆ. ಇದರಿಂದ ಮಲೆನಾಡಿನ ರೈತರು ತೊಂದರೆಗೆ ಸಿಲುಕಲಿದ್ದಾರೆ. ಈ ಸಮಸ್ಯೆ ಪರಿಹಾರಕ್ಕೆ ಮಲೆನಾಡು ಭಾಗದ ಜನಪ್ರತಿನಿಧಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

ಜಿಲ್ಲೆಯಲ್ಲಿ ಈ ಹಿಂದೆ ಸಾವಿರಾರು ಎಕರೆ ಕಂದಾಯ ಭೂಮಿಯನ್ನು ಅರಣ್ಯ ಇಲಾಖೆಗೆ ನೀಡಿದೆ. ಇಂತಹ ಭೂಮಿ ಯನ್ನು ಡೀಮ್ಡ್ (ಪರಿಭಾವಿತ) ಅರಣ್ಯ ಎಂದು ಘೋಷಿಸಲಾಗಿದೆ. ಪರಿಭಾವಿತ ಅರಣ್ಯದಲ್ಲಿ ಸಾವಿರಾರು ರೈತರ ಭೂಮಿ ಇದೆ. ಇವರೆಲ್ಲರೂ ಸಣ್ಣ ಮತ್ತು ಅತಿ ಸಣ್ಣ ರೈತರು. ಶಾಸಕರ ಅಧ್ಯಕ್ಷತೆಯ ಭೂಸಕ್ರಮೀಕರಣ ಸಮಿತಿಗಳು ಕಾನೂನು ಬದ್ಧವಾಗಿ ಈ ರೈತರಿಗೆ ಭೂಮಿ ಮಂಜೂರು ಮಾಡಿವೆ. ಸಾಗುವಳಿ ಚೀಟಿಯನ್ನೂ ಪಡೆದುಕೊಂಡಿದ್ದಾರೆ. ಇಂತಹ ಭೂಮಿ ಯನ್ನು ಅರಣ್ಯ ಎಂದು ಗುರುತಿಸಿ ಸಾಗುವಳಿ ಚೀಟಿ ರದ್ದು ಮಾಡಿದರೆ ರೈತರು ಭೂಮಿ ಕಳೆದು ಕೊಳ್ಳ ಲಿದ್ದಾರೆ’ ಎಂದು ಹೇಳಿದರು.

ಕೇಂದ್ರ ಸರ್ಕಾರ ಅರಣ್ಯ ಭೂಮಿಗಳ ಮಂಜೂರಾತಿಯನ್ನು ರದ್ದು ಮಾಡಲು ಎಸ್‌ಐಟಿ ರಚನೆಗೆ ಆದೇಶಿಸಿದೆ. ಇದು ರೈತ ವಿರೋಧಿ ನೀತಿಯಾಗಿದೆ. ಮಂಜೂರಾತಿ ರದ್ದು ಮಾಡಿದರೆ ರೈತರಿಗೆ ಅನ್ಯಾಯವಾಗಲಿದೆ ಎಂದರು.

ಎಸ್‌ಐಟಿ ಹೆಸರಿನಲ್ಲಿ ಸಣ್ಣ ರೈತರ ಮೇಲೆ ಗದಾ ಪ್ರಹಾರ ನಡೆಸುವುದನ್ನು ಸಹಿಸಲು ಸಾಧ್ಯವಿಲ್ಲ. ಸಮಸ್ಯೆ ಪರಿಹಾರ ಸಂಬಂಧ ಚಿಕ್ಕಮಗಳೂರು, ಕೊಡಗು, ಹಾಸನ ಸೇರಿ ಮಲೆನಾಡು ಭಾಗದ ಜನಪ್ರತಿನಿಧಿಗಳು ಕೂಡಲೇ ಸಭೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸಮಸ್ಯೆ ಮನವರಿಕೆ ಮಾಡಬೇಕು ಎಂದು ಆಗ್ರಹಿಸಿದರು.

ಕಂದಾಯ ಇಲಾಖೆ, ಅರಣ್ಯ ಇಲಾಖೆ ಜಂಟಿ ಸರ್ವೆ ಪೂರ್ಣಗೊಳಿಸಿ ಅರಣ್ಯ ಇಲಾಖೆಗೆ ವರ್ಗಾಯಿಸಿರುವ ಕಂದಾಯ ಭೂಮಿಯನ್ನು ಹಿಂಪಡೆಯ ಬೇಕು. ಆ ಭೂಮಿಯನ್ನು ಎಲ್ಲಾ ವರ್ಗದ ಭೂರಹಿತರಿಗೆ ಹಂಚಿಕೆ ಮಾಡಬೇಕು.ಸರ್ಕಾರಿ ಉದ್ದೇಶ ಗಳಿಗೆ ಮೀಸಲಿಡಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಅತೀಕ್‌ ಕೈಸರ್, ಪುಟ್ಟೇಗೌಡ, ಹಿರೇಮಗ ಳೂರು ರಾಮಚಂದ್ರ, ಲೋಕೇಶ್, ಸಂತೋಷ್ ಉಪಸ್ಥಿತರಿದ್ದರು.

Opposition to formation of SIT to investigate forest land allocation

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ನೀವು ಬೆಳಿಗ್ಗೆ ಕಸ ಗುಡಿಸದಿದ್ದರೆ ದೇಶವೇ ನಡೆಯಲ್ಲ ಧೈರ್ಯವಾಗಿ ಹಕ್ಕು ಕೇಳಿ

ಚಿಕ್ಕಮಗಳೂರು:  “ನೀವು ಬೆಳಿಗ್ಗೆ ಎದ್ದು ಕಸ ಗುಡಿಸದಿದ್ದರೆ ಈ ದೇಶದ ಯಾವುದೇ ನಗರ, ಪಟ್ಟಣ, ಊರುಗಳು...

ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಮೂಲಕವೇ ವ್ಯವಹರಿಸಿ

ಚಿಕ್ಕಮಗಳೂರು: ಪ್ರತೀ ಕಚೇರಿಗಳಲ್ಲೂ ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳನ್ನು ನಿರ್ವಹಿಸುವಂತೆ ಸರ್ಕಾರದ ಅಪರ ಮುಖ್ಯ...

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....