Home namma chikmagalur ಶ್ರಮ ಸಾಮರ್ಥ್ಯ ಯೋಜನೆಯಡಿ ಸುರಕ್ಷತಾ ಕಿಟ್ ವಿತರಣೆ
namma chikmagalurchikamagalurHomeLatest News

ಶ್ರಮ ಸಾಮರ್ಥ್ಯ ಯೋಜನೆಯಡಿ ಸುರಕ್ಷತಾ ಕಿಟ್ ವಿತರಣೆ

Share
????????????????????????????????????
Share

ಚಿಕ್ಕಮಗಳೂರು: ಕಾಯಕ ಜೀವಿಗಳಾದ ಶ್ರಮಿಕ ಕಟ್ಟಡ ಕಾರ್ಮಿಕರು ಕಾರ್ಮಿಕ ಇಲಾಖೆಯಲ್ಲಿ ನೊಂದಾಯಿಸಿಕೊಂಡು ಸದಸ್ಯತ್ವ ಪಡೆದು ಸುರಕ್ಷಿತ ಕಿಟ್ ಸೇರಿದಂತೆ ಹಲವು ಸರ್ಕಾರಿ ಸೌಲಭ್ಯಗಳನ್ನು ಪಡೆಯಿರಿ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಕರೆನೀಡಿದರು.

ಅವರು ಇಂದು ಕೆಎಂ ರಸ್ತೆಯ ಕಾರ್ಮಿಕ ಭವನದಲ್ಲಿ ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಚಿಕ್ಕಮಗಳೂರು ತಾಲ್ಲೂಕಿನ ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಏರ್ಪಡಿಸಲಾಗಿದ್ದ ೨೦೨೪-೨೫ ನೇ ಸಾಲಿನ ಶ್ರಮ ಸಾಮರ್ಥ್ಯ ಯೋಜನೆಯಡಿ ವಿವಿಧ ವೃತ್ತಿಗಳ (ಟ್ರೈನಿಂಗ್ ಕಂ ಟೂಲ್‌ಕಿಟ್) ಸುರಕ್ಷತಾ ಕಿಟ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಟ್ಟಡ ಕಾರ್ಮಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದು ಕಾರ್ಮಿಕ ಇಲಾಖೆ ಮೂಲಕ ತರಬೇತಿ ನೀಡಲು ಮುಂದಾಗಿದ್ದು, ಸುಮಾರು ೧೦ ಲಕ್ಷಕ್ಕಿಂತ ಮೇಲ್ಪಟ್ಟ ಕಟ್ಟಡ ನಿರ್ಮಿಸುವ ಮಾಲಿಕರಿಂದ ಶೆ.೧ ರಷ್ಟು ಸೆಸ್‌ನ್ನು ಸರ್ಕಾರ ಪಡೆದುಕೊಂಡು ಅದನ್ನು ನೇರವಾಗಿ ಕಾರ್ಮಿಕರಿಗೆ ಸಹಾಯ ಮಾಡಲು ಉದ್ದೇಶ ಹೊಂದಲಾಗಿದೆ ಎಂದರು.

ಸಂವಿಧಾನದ ಆಶಯದಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೆ ಸರ್ಕಾರದ ಯೋಜನೆಗಳು ತಲುಪಿ, ಸಮ ಸಮಾಜ ನಿರ್ಮಾಣವಾಗಬೇಕು ಎಂಬ ಡಾ. ಬಿ.ಆರ್ ಅಂಬೇಡ್ಕರ್‌ರವರ ಕನಸು ನನಸು ಮಾಡಲು ಕೇಂದ್ರ ಮತ್ತು ರಾಜ್ಯಸರ್ಕಾರಗಳು ಶ್ರಮಿಸುತ್ತಿವೆ ಎಂದು ಹೇಳಿದರು.

ಒಟ್ಟು ೪೬೮ ಫಲಾನುಭವಿಗಳಿಗೆ ಎರಡು ವರ್ಷದ ಅವಧಿಯಲ್ಲಿ ೩,೫೮,೮೧,೨೪೩ ರೂಗಳನ್ನು ಡಿಬಿಟಿ ಮೂಲಕ ಕಾರ್ಮಿಕರ ಖಾತೆಗೆ ಜಮೆ ಮಾಡಲಾಗಿದೆ. ಜಿಲ್ಲೆಯಲ್ಲಿ ೨೫೦೦ ಜನರಿಗೆ ತಲಾ ೨,೫೦೦ ರೂ ಬೆಲೆಯ ಕಿಟ್ ವಿತರಣೆ ಮಾಡಲಾಗುತ್ತಿದೆ. ಒಟ್ಟು ೬೨.೫೦ ಲಕ್ಷ ರೂ ಬೆಲೆಬಾಳುವ ಟೂಲ್‌ಕಿಟ್‌ನ್ನು ವಿತರಣೆ ಮಾಡುತ್ತಿದ್ದೇವೆ ಎಂದರು.

ಜಿಲ್ಲೆಯ ಚಿಕ್ಕಮಗಳೂರು ತಾಲ್ಲೂಕಿನಲ್ಲಿ ಕಳೆದ ಎರಡು ವರ್ಷದಲ್ಲಿ ೧೧೪೮ ಕಟ್ಟಡ ಕಾರ್ಮಿಕರು ನೊಂದಾಯಿಸಿಕೊಂಡಿದ್ದು, ಒಟ್ಟು ಈ ತಾಲ್ಲೂಕಿನಲ್ಲಿ ೪೫ ಸಾವಿರ ಕಾರ್ಮಿಕರು ನೊಂದಾಯಿಸಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಅರ್ಹ ಕಟ್ಟಡ ಕಾರ್ಮಿಕರನ್ನು ಗುರ್ತಿಸಿ ಸದಸ್ಯತ್ವ ನೀಡಿ ಕಟ್ಟಡ ಕಾರ್ಮಿಕರಲ್ಲದವರು ಸದಸ್ಯರಾಗಿ ಸರ್ಕಾರದ ಇಲಾಖೆಯಿಂದ ದೊರೆಯುವ ಸೌಲಭ್ಯವನ್ನು ಪಡೆಯುತ್ತಿದ್ದಾರೆ. ಇದನ್ನು ತಡೆಯಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಕಳೆದ ಎರಡು ವರ್ಷದಲ್ಲಿ ೨೧೧ ಫಲಾನುಭವಿಗಳಿಗೆ ೨,೨೫,೬೦,೦೦೦ ರೂಗಳನ್ನು ಮದುವೆ ಸಹಾಯಕ್ಕೆ ವಿತರಿಸಲಾಗಿದೆ. ಪ್ರತಿ ಕುಟುಂಬಕ್ಕೆ ವೈದ್ಯಕೀಯ ಸಹಾಯಧನ ೫೪೧೦೦ ರೂಗಳನ್ನು ನೀಡಲಾಗಿದೆ. ದೊಡ್ಡ ಆರೋಗ್ಯ ಸಮಸ್ಯೆಗಳಿಗೆ ೪೮ ಫಲಾನುಭವಿಗಳಿಗೆ ೨೪,೪೭,೧೪೩ ರೂಗಳನ್ನು ವೈದ್ಯಕೀಯ ಸಹಾಯ ಹಸ್ತ ನೀಡಲಾಗಿದೆ ಎಂದು ವಿವರಿಸಿದರು.

ಕಟ್ಟಡ ಕಾರ್ಮಿಕರು ಆಕಸ್ಮಿಕ ಮರಣ ಹೊಂದಿದ ಸಂದರ್ಭದಲ್ಲಿ ಇಲಾಖೆಯಿಂದ ೯೦ ಮೃತ ಕುಟುಂಬಗಳಿಗೆ ೬೭.೫೦ ಲಕ್ಷ ರೂ ಅಂತ್ಯಕ್ರಿಯೆಗೆ ಧನಸಹಾಯ ನೀಡಲಾಗಿದೆ. ಅಪಘಾತದಲ್ಲಿ ಆಕಸ್ಮಿಕ ಮರಣ ಹೊಂದಿದ ಪ್ರತಿ ಕುಟುಂಬಕ್ಕೆ ೫ ಲಕ್ಷ ರೂಗಳಂತೆ ೪ ಫಲಾನುಭವಿಗಳಿಗೆ ೨೦ ಲಕ್ಷ ರೂಗಳನ್ನು ನೀಡಲಾಗಿದೆ ಎಂದರು.

೬೦ ವರ್ಷ ಪೂರೈಸಿದ ಕಾರ್ಮಿಕರಿಗೆ ೩ ಸಾವಿರ ರೂ ಮಾಸಿಕ ಪಿಂಚಣಿ ಜಾರಿಮಾಡಲಾಗಿದೆ. ಈ ಸೌಲಭ್ಯ ಆರ್ಥಿಕವಾಗಿ ದುರ್ಬಲವಾಗಿರುವ ದೈಹಿಕ ಸಾಮರ್ಥ್ಯ ಇಲ್ಲದವರಿಗೆ ನೇರವಾಗಿ ಸಂದಾಯ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಾಯಕ ಕಾರ್ಮಿಕ ಆಯುಕ್ತ ಸುಭಾಷ್ ಎಂ ಆಲದಕಟ್ಟಿ ವಹಿಸಿದ್ದರು. ಹಿರಿಯ ಕಾರ್ಮಿಕ ನಿರೀಕ್ಷಕ ಪ್ರಭಾಕರ್, ಪ್ರವೀಣ್‌ಕುಮಾರ್, ವಸಂತಕುಮಾರ್, ಜಯರಾಮ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥ್‌ಬಾಬು, ಕುಟುಂಬ ಕಲ್ಯಾಣಾಧಿಕಾರಿ ಡಾ. ಶಶಿಕಲಾ ಉಪಸ್ಥಿತರಿದ್ದರು.ಮೊದಲಿಗೆ ಕಾರ್ಮಿಕ ಅಧಿಕಾರಿ ಬಿ.ಸಿ. ಸುರೇಶ್ ಸ್ವಾಗತಿಸಿದರು.

Distribution of safety kits under the Shram Sampath scheme

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ನೀವು ಬೆಳಿಗ್ಗೆ ಕಸ ಗುಡಿಸದಿದ್ದರೆ ದೇಶವೇ ನಡೆಯಲ್ಲ ಧೈರ್ಯವಾಗಿ ಹಕ್ಕು ಕೇಳಿ

ಚಿಕ್ಕಮಗಳೂರು:  “ನೀವು ಬೆಳಿಗ್ಗೆ ಎದ್ದು ಕಸ ಗುಡಿಸದಿದ್ದರೆ ಈ ದೇಶದ ಯಾವುದೇ ನಗರ, ಪಟ್ಟಣ, ಊರುಗಳು...

ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಮೂಲಕವೇ ವ್ಯವಹರಿಸಿ

ಚಿಕ್ಕಮಗಳೂರು: ಪ್ರತೀ ಕಚೇರಿಗಳಲ್ಲೂ ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳನ್ನು ನಿರ್ವಹಿಸುವಂತೆ ಸರ್ಕಾರದ ಅಪರ ಮುಖ್ಯ...

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....