Home Latest News ಜೆಪಿಕೆ ಇಂಡಸ್ಟ್ರೀಸ್ ಸ್ವಾವಲಂಬಿ ಬದುಕಿಗೆ ನೆರವಾಗಿದೆ
Latest NewschikamagalurHomenamma chikmagalur

ಜೆಪಿಕೆ ಇಂಡಸ್ಟ್ರೀಸ್ ಸ್ವಾವಲಂಬಿ ಬದುಕಿಗೆ ನೆರವಾಗಿದೆ

Share
Share

ಚಿಕ್ಕಮಗಳೂರು: ಬಡತನ ಮುಕ್ತ, ನಿರುದ್ಯೋಗ ಮುಕ್ತ ಸ್ವಾವಲಂಬಿ-ಸ್ವಾಭಿಮಾನಿ, ಆತ್ಮನಿರ್ಭರ ಭಾರತವಾಗಬೇಕೆಂಬುದು ಪ್ರಧಾನಿ ನರೇಂದ್ರ ಮೋದಿಯವರ ಕನಸಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.

ಅವರು ಇಂದು ನಗರದ ಆರ್‌ಜಿ ರಸ್ತೆಯಲ್ಲಿರುವ ಜೋಳ್‌ದಾಳ್ ನಿಲಯದ ಆವರಣದಲ್ಲಿ ಜೆಪಿಕೆ ಇಂಡಸ್ಟ್ರೀಸ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ ಜೆಪಿಕೆ ಇಂಡಸ್ಟ್ರೀಸ್‌ನಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆಯ ಜೊತೆಗೆ ತರಬೇತಿ ನೀಡಿ ಉದ್ಯೋಗ ನೀಡಲು ಯೋಜನೆ ರೂಪಿಸಲಾಗಿದ್ದು, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ನೆರವಾಗುತ್ತದೆ. ಪ್ರತಿಯೊಬ್ಬ ಭಾರತೀಯನೂ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಚಿಂತನೆ ನಡೆದಿರುವ ಈ ಸಂದರ್ಭದಲ್ಲಿ ಇದು ಯಶಸ್ವಿಯಾದರೆ ಆತ್ಮನಿರ್ಭರ ಭಾರತ ಆಗಲು ಸಾಧ್ಯ ಎಂದರು.

ಜೆಪಿಕೆ ಇಂಡಸ್ಟ್ರೀಸ್ ಸಾವಿರಾರು ಯುವಕರಿಗೆ ಉದ್ಯೋಗ ನೀಡುವ ಉದ್ದಿಮೆಯಾಗಿ ಬೆಳೆಯಲಿ, ಜಿಲ್ಲೆಯ ನಿರುದ್ಯೋಗ ಸಮಸ್ಯೆಗೆ ಪರಿಹಾರ ರೂಪಿಸುವ ಕಾರ್ಯ ಮಾಡಲಿ ಎಂದು ಶುಭ ಹಾರೈಸಿದರು.

ಆಶಾಕಿರಣ ಚಾರಿಟಬಲ್ ಟ್ರಸ್ಟ್‌ನ ಮುಖ್ಯ ಟ್ರಸ್ಟಿ ಡಾ. ಜೆ.ಪಿ ಕೃಷ್ಣೇಗೌಡ ಮಾತನಾಡಿ, ಜಿಲ್ಲೆಯಲ್ಲಿ ಈ ರೀತಿಯ ಇಂಡಸ್ಟ್ರೀಸ್ ಇಲ್ಲ, ಆದಿಚುಂಚನಗಿರಿ ಪೀಠದ ಪರಮಪೂಜ್ಯ ಶ್ರೀಶ್ರೀಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿಗಳು ಉದ್ಘಾಟಿಸಿ ಎಲ್ಲರಿಗೂ ಶುಭವಾಗಲಿ ಎಂದು ಆಶೀವರ್ದಿಸಿದ್ದಾರೆ ಎಂದರು.

ಜೆಪಿಕೆ ಇಂಡಸ್ಟ್ರೀಸ್ ನನ್ನ ಪುತ್ರಿಯ ಕನಸಾಗಿತ್ತು, ನೂರು ಜನ ಸಂದರ್ಶನಕ್ಕೆ ಹಾಜರಾಗಿದ್ದರು. ಈಗ ೨೦ ಜನರಿಗೆ ಉದ್ಯೋಗ ನೀಡಿದ್ದೇವೆ. ಅಗತ್ಯವಿದ್ದರೆ ಮುಂದೆ ನೋಡಿಕೊಂಡು ವಿಸ್ತರಿಸುತ್ತೇವೆ. ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.

ಆಶ್ರಯ ಫೌಂಡೇಶನ್ ಉಪಾಧ್ಯಕ್ಷೆ ಡಾ. ವರ್ಷ ಅಭಿಷೇಕ್ ಮಾತನಾಡಿ, ಜೆಪಿಕೆ ಇಂಡಸ್ಟ್ರೀಸ್ ಚಿಕ್ಕಮಗಳೂರಿನಲ್ಲಿ ಮೊದಲ ಬಾರಿಗೆ ಚಿಕ್ಕದಾಗಿ ಆರಂಭಿಸಿದ್ದೇವೆ. ಮುಂದೆ ದೊಡ್ಡ ಉದ್ಯಮವಾಗಿ ಬೆಳೆಸಬೇಕೆಂದು ಕನಸು ಇದ್ದು, ಜಿಲ್ಲೆಯ ಜನರಿಗೆ ಶಕ್ತಿ ತುಂಬಿ ಸಬಲೀಕರಣ ಮಾಡಲು ಗುರಿಹೊಂದಲಾಗಿದೆ ಎಂದು ಹೇಳಿದರು.

ಎಲ್ಲರ ಸಹಕಾರದೊಂದಿಗೆ ಪ್ರಾರಂಭಿಸಿರುವ ಈ ಇಂಡಸ್ಟ್ರೀಸ್‌ನಲ್ಲಿ ಮುಂದೆ ಸಾವಿರಾರು ಮಹಿಳೆಯರು ಮತ್ತು ಪುರುಷರಿಗೆ ಉದ್ಯೋಗ ನೀಡುವ ಬೃಹತ್ ಉದ್ದಿಮೆಯಾಗಿ ಬೆಳೆಯುವಂತೆ ಮಾಡುತ್ತೇವೆ ಎಂದರು. ಜೆಪಿಕೆ ಇಂಡಸ್ಟ್ರೀಸ್‌ನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಆದಿಚುಂಚನಗಿರಿ ಪೀಠದ ಶ್ರೀ ಜಗದ್ಗುರು ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರು ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಈ ಸಂದರ್ಭದಲ್ಲಿ ಶೃಂಗೇರಿ ಶಾಖಾ ಮಠದ ಗುಣನಾಥ ಸ್ವಾಮೀಜಿ, ಶಾಸಕ ಟಿ.ಡಿ ರಾಜೇಗೌಡ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಟಿ.ರಾಜಶೇಖರ್, ಆಶ್ರಯ ಪೌಡೇಷನ್‌ನ ಸಾಗರ್, ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್ ದೇವರಾಜ್‌ಶೆಟ್ಟಿ, ಮುಖಂಡರಾದ ದೀಪಕ್ ದೊಡ್ಡಯ್ಯ, ಮಹೇಶ್, ಡಾ. ಗೌರಿ ಮತ್ತಿತರರು ಉಪಸ್ಥಿತರಿದ್ದರು.

JPK Industries has helped in self-reliant living

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...