ಚಿಕ್ಕಮಗಳೂರು : ಕಾಲೇಜು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆಸಿದೆ. 25ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಜೇನು ಕಡಿದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಧ್ಯಾಹ್ನ ಊಟಕ್ಕೆ ಬಿಟ್ಟಾಗ ಜೇನಿನ ಗೂಡಿಗೆ ವಿದ್ಯಾರ್ಥಿ ಕಲ್ಲು ಹೊಡೆದ ಪರಿಣಾಮ ಚಿಕ್ಕಮಗಳೂರು ನಗರದ ಮೌಂಟೇನ್ ವ್ಯೂ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.
ಊಟಕ್ಕೆಂದು ಹೊರಗಿದ್ದ 25 ವಿದ್ಯಾರ್ಥಿಗಳ ಮೇಲೆ ಜೇನು ದಾಳಿ ಮಾಡಿದ್ದು,ಓರ್ವ ವಿದ್ಯಾರ್ಥಿನಿ ಸ್ಥಿತಿ ಗಂಭೀರ, ಹಾಸನಕ್ಕೆ ರವಾನಿಸಿದ್ದಾರೆ.
ಉಳಿದ ವಿದ್ಯಾರ್ಥಿಗಳಿಗೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪೋಷಕರು ಆಸ್ಪತ್ರೆಗೆ ದೌಡಾಯಿಸಿದ್ದಾರೆ.
Honey bee attack on college students
Leave a comment