Home Latest News ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ – ಪೊಲೀಸ್ ರ ವಿರುದ್ಧ ಕ್ರಿಮಿನಲ್ ಕೇಸ್
Latest NewschikamagalurHomenamma chikmagalur

ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ – ಪೊಲೀಸ್ ರ ವಿರುದ್ಧ ಕ್ರಿಮಿನಲ್ ಕೇಸ್

Share
Share

ಚಿಕ್ಕಮಗಳೂರು: ತಾಲ್ಲೂಕಿನ ಆಲ್ದೂರಿನಲ್ಲಿ ಕಳೆದ 12 ವರ್ಷದ ಹಿಂದೆ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದ ಪೊಲೀಸ್ ಅಧಿಕಾರಿ, ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು ಮಾಡಲು ನ್ಯಾಯಾಲಯ ಆದೇಶಿಸಿದೆ ಎಂದು ಹಿಂದೂ ಸಂಘಟನೆಯ ಮುಖಂಡ ತುಡುಕೂರು ಮಂಜುನಾಥ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ೨೦೧೩ ರಲ್ಲಿ ಆಲ್ದೂರಿನಲ್ಲಿ ಗಣಪತಿ ವಿಸರ್ಜನೆ ಮಾಡುವ ಸಂದರ್ಭ ಪಟ್ಟಣದ ರಸ್ತೆಯಲ್ಲಿ ಕರ್ಪೂರ ಹಚ್ಚಿದರು, ಮಸೀದಿ ಮುಂದೆ ಪಟಾಕಿ ಸಿಡಿಸಿದರು ಎಂಬ ಕಾರಣಕ್ಕೆ ತುಡುಕೂರು ಮಂಜು, ರಾಕೇಶ್, ಮಂಜುನಾಥ, ಶ್ರೀಕಾಂತ್, ಲೋಕೇಶ್, ಮಧು, ಕೃಷ್ಣಪ್ಪ ಇವರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಿ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪೊಲೀಸರು ಮನಸೋ ಇಚ್ಚೆ ಥಳಿಸಿದ್ದರು.

ನಮ್ಮ ಮೇಲೆ ಕೊಲೆ ಯತ್ನ ಮಾಡಿದ್ದನ್ನು ನಾವು ಜಿಲ್ಲಾ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದೆವು. ಸತತ ೧೨ ವರ್ಷದ ಕಾನೂನು ಹೋರಾಟದ ಬಳಿಕ ಅಂದಿನ ಆಲ್ದೂರು ಎಸ್‌ಐ ಆಗಿದ್ದ ಕಬ್ಬಾಳ್‌ರಾಜ್, ಸಿಪಿಐ ಕೃಷ್ಣರಾಜು, ಪೊಲೀಸ್ ಸಿಬ್ಬಂದಿಯಾದ ಮಂಜಪ್ಪ, ಪ್ರವೀಣ್, ನಿಂಗೇಗೌಡ, ಮಹೇಶ್, ಇಲಿಯಾಜ್, ಜಗದೀಶ್‌ನಾಯ್ಕ, ಚಂದ್ರೇಗೌಡ ಇವರ ಮೇಲೆ ಭಾರತೀಯ ದಂಡ ಸಂಹಿತೆ ವಿವಿಧ ಕಲಂಗಳಡಿಯಲ್ಲಿ ಎಲ್ಲರ ಮೇಲೂ ಪ್ರತ್ಯೇಕವಾಗಿ ಮೊಕದ್ದಮೆ ದಾಖಲಿಸಲು ನ್ಯಾಯಾಧೀಶರು ಆದೇಶಿಸಿದ್ದಾರೆ.

ನಮ್ಮ ಪರವಾಗಿ ಎಚ್.ಎಂ.ಸುಧಾಕರ ಅವರು ವಾದ ಮಂಡಿಸಿದ್ದರು. ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂಬುದು ಈ ಪ್ರಕರಣದಲ್ಲಿ ಸಾಬೀತಾಗಿದೆ. ಆರೋಪಿಗಳ ಮೇಲೆ ಕಠಿಣ ಕಾನೂನು ಶಿಕ್ಷೆಯಾಗಬೇಕು ಎಂದು ಆಗ್ರಹಿಸುತ್ತೇನೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ರಾಕೇಶ್, ಮಂಜುನಾಥ್, ಕೃಷ್ಣಪ್ಪ ಇದ್ದರು.

Attack on Hindu activists – Criminal case against police

Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...